ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ

Date:

  • ಸಂವಿಧಾನದಡಿ ಸ್ಥಾಪಿತವಾದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಚಟುವಟಿಕೆ ಆರಂಭ
  • ಸಂಶೋಧನಾ ವಿದ್ಯಾರ್ಥಿಗಳಿಂದ ಡಾ.ಬಿ.ಆರ್.ಅಂಬೇಡ್ಕರವರ ಪುತ್ಥಳಿ ಸ್ಥಾಪನೆ

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಮುಂಭಾಗದಲ್ಲಿ ಅದೇ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಸೋಮವಾರ ಡಾ. ಬಿ.ಆರ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆ ಮಾಡಿದರು.

ಈ ಸಂದರ್ಭದಲ್ಲಿ ಸಂಶೋಧನಾ ವಿದ್ಯಾರ್ಥಿ ನಂದಕುಮಾರ ಮಾತನಾಡಿ, ” ಬಾಬಾ ಸಾಹೇಬರು ರಚಿತ ಸಂವಿಧಾನದ ಅಡಿಯಲ್ಲಿ ಸ್ಥಾಪಿತವಾದ ಶಿಕ್ಷಣ ಸಂಸ್ಥೆಯಾಗಿದೆ. ಆದರೆ ಅನೇಕ ದಿನಗಳಿಂದ ವಿಶ್ವವಿದ್ಯಾಲಯದಲ್ಲಿ ಸಂಘ ಪರಿವಾರದ ಚಟುವಟಿಕೆಗಳು ನಡೆಯುತ್ತಿವೆ,‌ ಕೋಮುವಾದಿ ಸಂಘಟನೆಗಳ ಕೇಂದ್ರ ಕಚೇರಿಯಾಗಿ ಕೆಲಸ ಮಾಡುತ್ತಿದ್ದು, ಆರ್ ಎಸ್ ಎಸ್ ಪರೇಡ್‌ ಮಾಡುವುದು, ರಾಮನವಮಿ ಆಚರಣೆ , ಹನುಮಾನ್ ಚಾಲೀಸಾ ಪಠಣ ನಡೆಯುತ್ತಿದೆ ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇತ್ತೀಚೆಗೆ ಮಂಗಳೂರಿನಿಂದ ಎಬಿವಿಪಿ ಮುಖಂಡರೊಬ್ಬರನ್ನು ಅನಧಿಕೃತವಾಗಿ ಆಹ್ವಾನಿಸಿ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಿ ನಂತರ ಸರಸ್ವತಿಯ ಕಂಚಿನ ಮೂರ್ತಿ ಗ್ರಂಥಾಲಯದ ಒಳಗಡೆ ಪ್ರತಿಷ್ಠಾಪಿಸಿದರು. ಈ ವಿಶ್ವವಿದ್ಯಾಲಯವನ್ನು ಧಾರ್ಮಿಕ ಕೇಂದ್ರವಾಗಿ ರೂಪಿಸುವ ಎಲ್ಲಾ ಕಾರ್ಯಗಳು ಇಲ್ಲಿ ನಡೆದವು, ಅದನ್ನು ವಿರೋಧಿಸಿ ಪ್ರತಿರೋಧವಾಗಿ ನಾವು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಡಿ ಸ್ಥಾಪಿತವಾದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆ ಮಾಡಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಈ ಸಂದರ್ಭದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಇತರೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...