ಉಡುಪಿ | ಸಂವಿಧಾನ ಬದಲಾಯಿಸಿದರೆ ಭಾರತ ಛಿದ್ರ : ಜಯನ್ ಮಲ್ಪೆ

Date:

ಎಲ್ಲಾ ಜಾತಿ, ಧರ್ಮದವರಿಗೆ ವಿಶೇಷ ಸೌಲಭ್ಯಗಳನ್ನು ನೀಡಿ, ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಘನತೆಯನ್ನು ತಂದುಕೊಟ್ಟ ಸಂವಿಧಾನವನ್ನು ಬದಲಾಯಿಸಿ ಮನುಸ್ಮೃತಿ ಜಾರಿತರಲು ಹೊರಟರೆ ಭಾರತ ಛಿದ್ರವಾದಿತು ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ.

ಅವರು ಸೋಮವಾರ ಮಣಿಪಾಲದ ಅಂಬೇಡ್ಕರ್ ಪ್ರತಿಮೆಯ ಎದುರು ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಆಯೋಜಿಸಿದ 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಸಂವಿಧಾನ ರಕ್ಷಸಿ ಭಾರತ ಉಳಿಸಿ ಎಂಬ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ನಮ್ಮ ಸಂವಿಧಾನ ಉಳಿದರೆ ನಮ್ಮ ದೇಶದ ಸಮಗ್ರತೆ, ಸಂಸ್ಕೃತಿ ಮತ್ತು ಜನರ ಬದುಕು ಉಳಿಯುತ್ತದೆ. ನಮ್ಮ ಸಂವಿಧಾನವು ಎಲ್ಲಿಯವರೆಗೆ ಸುರಕ್ಷಿತವಾಗಿರುತ್ತದೆಯೋ ಅಲ್ಲಿಯವರೆಗೆ ನಾವೆಲ್ಲರೂ ಸುರಕ್ಷತ. ಇಲ್ಲವೇ ನಾಶವಾಗುತ್ತೇವೆ. ಹಾಗಾಗಿ ಸಂವಿಧಾನವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ ಎಂದರು.

ಅಂಬೇಡ್ಕರ್ ಯುವಸೇನೆಯ ಪಡುಬಿದ್ರಿ ಶಾಖೆಯ ಗೌರವಅಧ್ಯಕ್ಷ ಕೃಷ್ಣ ಬಂಗೇರ ಮಾತನಾಡಿ ಬಾಬಾ ಸಾಹೇಬ ಅಂಬೇಡ್ಕರ್ ನಮ್ಮ ಸಂವಿಧಾನ ಬರೆಯಲು ಹಗಲು ರಾತ್ರಿಯೆನ್ನದೆ ನಿದ್ದೆಗೆಟ್ಟು ಅಸ್ತಮ ರೋಗ ಬಂದರೂ ತನ್ನ ಸಮಾಜದ ಬಹುಜನರಿಗಾಗಿ ಬದುಕನ್ನು ತ್ಯಾಗಮಾಡಿದ್ದಾರೆ. ಅವರ ಋಣದಲ್ಲಿರುವ ನಾವು ಈ ಸಂವಿಧಾನವನ್ನು ಉಳಿಸಿಕೊಳ್ಳಲ್ಲೇ ಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಅಧ್ಯಕ್ಷ ಗಣೇಶ್ ನೆರ್ಗಿ ಮಾತನಾಡಿ ನಮ್ಮ ಸಂವಿಧಾನವನ್ನು ಕಳೆದುಕೊಳ್ಳುವ ಆತಂಕವೀಗ ಎದುರಾಗಿದೆ. ಸಂವಿಧಾನವೆನ್ನುವುದು ಒಂದು ಪುಸ್ತಕವಲ್ಲ. ನಮ್ಮ ಬದುಕಿನ ವಿಧಾನ. ಅದು ನಮ್ಮ ಕೈತಪ್ಪಿ ಹೋಗುತ್ತಿದೆ, ನಾವೀಗ ಅನೇಕ ದುಷ್ಟ ಸಮೀಕರಣಗಳ ನಡುವೆ ನಿಂತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವಸೇನೆಯ ಮುಖಂಡರಾದ ಹರೀಶ್ ಸಾಲ್ಯಾನ್, ಸಂತೋಷ್ ಕಪ್ಪೆಟ್ಟು ಮಾತನಾಡಿದರು.

ದಲಿತ ನಾಯಕರಾದ ವಸಂತ ಪಾದೆಬೆಟ್ಟು,ಸುಜೀತ್ ಪಡುಬಿದ್ರಿ, ಕೃಷ್ಣ ಶ್ರೀಯಾನ್ ಮಲ್ಪೆ, ಅರುಣ್ ಸಲ್ಯಾನ್, ಸತೀಶ್ ಮಂಚಿ, ಸುಧಾಕರ ಪಡುಬಿದ್ರೆ, ಭಗವಾನ್ ಮಲ್ಪೆ, ರತನ್ ನೆರ್ಗಿ, ಶಶಿಕಾಂತ್ ಲಕ್ಷ್ಮೀನಗರ, ಪ್ರಸಾದ್ ಮಲ್ಪೆ, ಶಂಕರ್ ಪಡುಬಿದ್ರಿ, ದಯಾಕರ ಮಲ್ಪೆ, ಸಾಧು ಚಿಟ್ಪಾಡಿ, ಸುಕೇಶ್ ನಿಟ್ಟೂರು,ಅಶೋಕ್ ಪುತ್ತೂರು, ರವಿರಾಜ್ ಲಕ್ಷ್ಮೀನಗರ, ಕುಮಾರಿ ಧನುಜ ತೊಟ್ಟಂ ಮುಂತ್ತಾದವರು ಭಾಗವಹಿಸಿದ್ದರು. ಸತೀಶ್ ಕಪ್ಪೆಟ್ಟು ಸ್ವಾಗತಿಸಿ,ದೀಪಕ್ ಕೊಡವೂರು ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...