ಮೈಸೂರು | ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ದೇಶ ಸದೃಢ: ಸಚಿವ ಶಿವರಾಜ್ ತಂಗಡಗಿ

Date:

ಮೈಸೂರಿನ ರಂಗಾಯಣದ, ವನರಂಗದಲ್ಲಿ ಸೋಮವಾರ ಆಯೋಜಿಸಿದ್ದ ಬಹುರೂಪಿ ನಾಟಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ಎಸ್. ತಂಗಡಗಿ ‘ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ನಮ್ಮ ದೇಶ ಸದೃಢವಾಗಿದೆ’ ಎಂದರು.

ಪ್ರಪಂಚದ ಇತರೆ ದೇಶಗಳಿಗಿಂತ ನಮ್ಮ ದೇಶದ ಸಂವಿಧಾನ ಭಿನ್ನವಾಗಿದೆ. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದಾಗಿ ಇಂದು ನನ್ನೊಳಗೊಂಡಂತೆ, ಜನ ಸಾಮಾನ್ಯರು ಆಡಳಿತ ನಡೆಸಲು ಸಾಧ್ಯವಾಗಿದೆ. ಇಂತಹ ಸಂವಿಧಾನದ ಬಗ್ಗೆ ಕೆಲವರು ಬದಲಾವಣೆ ಮಾಡಬೇಕೆಂದು ಮಾತನಾಡುತ್ತಾರೆ. ಆದರೆ, ಸಂವಿಧಾನ ಮುಟ್ಟಿದರೆ ಅಂತಹವರು ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ವರ್ಷದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬೆಳ್ಳಿ ಸಂಭ್ರಮ. ಅದರಲ್ಲಿಯೂ, ಬೆಳ್ಳಿ ಬಹುರೂಪಿಯು ಭಾರತದ ಭಾಗ್ಯವಿದಾತ ಅಂಬೇಡ್ಕರ್ ಚಿಂತನೆಗಳನ್ನು ಆಶಯವಾಗಿಟ್ಟುಕೊಂಡು ನಡೆಯುತ್ತಿರುವುದು‌ ಬಹುರೂಪಿಗೆ ವಿಶೇಷ ಮೆರಗು ತಂದಿದೆ. ಮೈಸೂರು ರಂಗಾಯಣದಿಂದ ರಾಷ್ಟ್ರ ಕವಿ ಕುವೆಂಪು ಅವರ ಕಿಂದರಜೋಗಿ ಕವಿತೆ, ಗೋವಿನ ಹಾಡು ಕವಿತೆಯನ್ನು ನಾಟಕವಾಗಿಸಿದ ಬಿ.ವಿ. ಕಾರಂತರಿಂದ ಹಿಡಿದು, ದೇವನೂರು ಮಹಾದೇವರ ಕುಸುಮ‌ಬಾಲೆ ಕಾದಂಬರಿಯನ್ನು ಸಮರ್ಥವಾಗಿ ನಾಟಕವಾಗಿಸಿದ್ದು, ಮುಂದೆ ಮಲೆಗಳಲ್ಲಿ ಮಧುಮಗಳು ಮಹಾ ಕಾದಂಬರಿಯನ್ನು ಅಹೋರಾತ್ರಿ ರಂಗರೂಪವಾಗಿ ಪ್ರದರ್ಶಿಸಿದ್ದು, ಭಾರತದ ರಂಗಭೂಮಿ ಇತಿಹಾಸದಲ್ಲೇ ದಾಖಲೆ ಎನಿಸಿದೆ ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ರಂಗಾಯಣದ ತನ್ನ ರಂಗ ಚಟುವಟಿಕೆಗಳ ಮೂಲಕ ನಾಡಿನ ತುಂಬಾ ಉಂಟು ಮಾಡಿದ ಸಂಚಲನವನ್ನು ಕಂಡು ನಮ್ಮ ಸರ್ಕಾರ, ಈ ಅವಕಾಶ ನಾಡಿನ ಬೇರೆ ಬೇರೆ ಭಾಗಕ್ಕೂ ದೊರೆಯಲೆಂದು ಉಡುಪಿ ಜಿಲ್ಲೆಯ ಕಾರ್ಕಳ,‌ ದಾವಣಗೆರೆ, ಶಿವಮೊಗ್ಗ,‌ ಧಾರವಾಡ ಹಾಗೂ ಕಲ್ಬುರ್ಗಿ ಜಿಲ್ಲೆಗಳಲ್ಲೂ ರಂಗಾಯಣಗಳನ್ನು ಸ್ಥಾಪಿಸಿ ಪ್ರತಿಯೊಂದು ರಂಗಾಯಣವೂ ತಮ್ಮ ಪ್ರಾದೇಶಿಕ ಹಿನ್ನೆಲೆಯಲ್ಲಿ ರಂಗಭೂಮಿ ಚಟುವಟಿಕೆಗಳನ್ನು ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಬಹುರೂಪಿ‌ ನಾಟಕೋತ್ಸವಕ್ಕೆ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ವಿಶೇಷ ಅನುದಾನ ನೀಡಲಾಗಿದೆ.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಭಾಷೆ, ಸಂಸ್ಕೃತಿ ವಿಚಾರದಲ್ಲಿ ವಿಶೇಷ ಕಾಳಜಿ‌ ಹೊಂದಿದ್ದಾರೆ. ಹಿಂದಿನ ಸರ್ಕಾರ ನೇಮಕ‌ ಮಾಡದೇ ಹಾಗೇ ಬಿಟ್ಟಿದ್ದ ಪ್ರಾಧಿಕಾರ ಮತ್ತು ಅಕಾಡೆಮಿಗಳಿಗೆ ಒಮ್ಮೆಲೆಗೆ ನೇಮಕ ಮಾಡಿದರು. ಇಂತಹ ಕೆಲಸಗಳು ನಮ್ಮ ಸರ್ಕಾರದಲ್ಲಿ‌ ಮಾತ್ರ ಸಾಧ್ಯ. ಇದೇ ವೇಳೆ ರಂಗಭೂಮಿ‌ಯ ಖ್ಯಾತ ಹಿರಿಯ ಕಲಾವಿದರಾದ ಪದ್ಮಶ್ರೀ ಪುರಸ್ಕೃತೆ ಹೈಸ್ನಾಂ ಸಾವಿತ್ರಿ ಅವರಿಗೆ ರಂಗ ಗೌರವ ಸಲ್ಲಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕಾರ್ಮಿಕ ಸಂಹಿತೆಗಳ ಜಾರಿ; ಅಭದ್ರತೆಗೆ ಕಾರಣ: ಮಂಜುನಾಥ ಕೈದಾಳೆ

ಕಾರ್ಯಕ್ರಮದಲ್ಲಿ ಮೈಸೂರು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು, ಇಲಾಖೆ ಕಾರ್ಯದರ್ಶಿ ಜೆ. ಮಂಜುನಾಥ್, ರಂಗ ಸಮಾಜದ ಸದಸ್ಯ ಸುರೇಶ್ ಬಾಬು, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...