ಆನೇಕಲ್‌ | ದಲಿತ ಸಿಎಂ ಸ್ಥಾನಕ್ಕೆ ಆಗ್ರಹಿಸಿ ಡಿ.8ರಂದು ಪ್ರತಿಭಟನೆ

Date:

ದಲಿತ ಸಮುದಾಯಕ್ಕೆ ಸೇರಿದ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯಿಸಿ ಇದೇ 8ರಂದು ಆನೇಕಲ್‌ ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಯುವಕರ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಮರಸೂರು ಕೃಷ್ಣಪ್ಪ ತಿಳಿಸಿದರು. 

ಬೆಂಗಳೂರು ನಗರದ ಆನೇಕಲ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷ ಕಳೆದರೂ, ಕರ್ನಾಟಕದಲ್ಲಿ ದಲಿತ ನಾಯಕರೊಬ್ಬರಿಗಾದರೂ ಈವರೆಗೆ ಮುಖ್ಯಮಂತ್ರಿ ಸ್ಥಾನ ಲಭಿಸಿಲ್ಲ. ಮನುವಾದ ಸಂಸ್ಕೃತಿ, ಅಸ್ಪೃಶ್ಯತೆ, ಜಾತೀಯತೆಯಿಂದಾಗಿ ದಲಿತರು ಉನ್ನತ ಸ್ಥಾನಕ್ಕೆ ಬರಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದರು. 

“ಕಾಂಗ್ರೆಸ್‌ ಪಕ್ಷ ದಲಿತರನ್ನು ಮತಬ್ಯಾಂಕ್‌ ಆಗಿ ಬಳಸಿಕೊಳ್ಳುತ್ತಿದೆ. ಚುನಾವಣೆಯಲ್ಲಿ ಮತ ನೀಡಲು ಮಾತ್ರವೇ ಕಾಂಗ್ರೆಸ್‌ಗೆ ದಲಿತರು ಬೇಕು. ಆದರೆ, ಅಧಿಕಾರ ನೀಡಲು ಆ ಪಕ್ಷ ಮುಂದಾಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡಿ.7ರಂದು ಜಾಗತಿಕ ತಾಪಮಾನ ಮತ್ತು ಕೃಷಿಗೆ ಸಂಬಂಧಿಸಿದಂತೆ ಜಾಗೃತಿ ಸಮಾವೇಶ

ಸಂಘಟನೆಯ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಮಾತನಾಡಿ, “ದಲಿತರ ಬಲದಿಂದಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಈ ಬಾರಿ ಕಡ್ಡಾಯವಾಗಿ ದಲಿತ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಲೇಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಸಂಘಟನೆಯ ಕಾಳಯ್ಯ, ಮೀಸೆ ರಾಮಣ್ಣ, ಭದ್ರಯ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...