ಬೀದರ್‌ | ಅಂಗನವಾಡಿಗಿಲ್ಲ ಸ್ವಂತ ಕಟ್ಟಡ; ಬಯಲು ರಂಗಮಂದಿರದ ಕೊಠಡಿಯೇ ಗತಿ

Date:

ರಾಜ್ಯದಲ್ಲಿ ಮಗುವಿನ ಕಲಿಕೆಗೆ ಭದ್ರಬುನಾದಿ ಎಂದು ಕರೆಯಲ್ಪಡುವ ಅಂಗನವಾಡಿ ಕೇಂದ್ರಗಳು ಹಲವು ಸಮಸ್ಯೆಗಳು ಎದುರಿಸುತ್ತಿವೆ. ಇದಕ್ಕೆ ಬೀದರ್‌ ಜಿಲ್ಲೆ ಹೊರತಾಗಿಲ್ಲ. ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲದ ಪರಿಣಾಮ ಬಾಡಿಗೆ ಮನೆ, ದೇವಸ್ಥಾನ, ಶಾಲಾ ಕೋಣೆಗಳೇ ಮಕ್ಕಳ ಕಲಿಕೆಯ ತಾಣಗಳಾಗಿವೆ !

ಔರಾದ ತಾಲೂಕಿನ ಕರಂಜಿ(ಬಿ) ಗ್ರಾಮದ ಅಂಗನವಾಡಿ ಕೇಂದ್ರವೊಂದು ಕಳೆದ 15 ವರ್ಷಗಳಿಂದ ಬಾಡಿಗೆ ಮನೆಯಲ್ಲಿಯೇ ನಡೆಯುತ್ತಿದ್ದು, ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ಸೇರಿದಂತೆ ಶೌಚಾಲಯ, ಶುದ್ಧ ಕುಡಿಯುವ ನೀರು ಸಹ ಇಲ್ಲ. ಇದರಿಂದ ಹೆಚ್ಚಿನ ಪಾಲಕರು ತಮ್ಮ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

ಹಳೆ ಅಂಗನವಾಡಿ 12
ಈ ಹಿಂದೆ ಅಂಗನವಾಡಿ ಕೇಂದ್ರವಾಗಿದ್ದ ಬಾಡಿಗೆ ಮನೆ

ತೆಲಂಗಾಣ ಗಡಿ ಹಂಚಿಕೊಂಡಿರುವ ಕರಂಜಿ(ಬಿ) ಗ್ರಾಮ ನಾಗಮಾರಪಳ್ಳಿ ಗ್ರಾಮ ಪಂಚಾಯತ್‌ ಗೆ ಒಳಪಡುತ್ತದೆ, ಗ್ರಾಮದಲ್ಲಿ ಎರಡು ಅಂಗನವಾಡಿ ಕೇಂದ್ರವಿದ್ದು, ಒಂದು ಕೇಂದ್ರಕ್ಕೆ ಸ್ವಂತ ಕಟ್ಟಡವಿದೆ. ಗ್ರಾಮದ ಮಧ್ಯೆ ಭಾಗದಲ್ಲಿರುವ ಅಂಗನವಾಡಿಗೆ ಸ್ವಂತ ಕಟ್ಟಡವಿಲ್ಲ. ಹೀಗಾಗಿ ಕಳೆದ 2007 ರಿಂದ ವರ್ಷಕ್ಕೆ 6 ಸಾವಿರ ಬಾಡಿಗೆ ಕಟ್ಟಿ ಖಾಸಗಿಯೊಬ್ಬರ ಮನೆಯಲ್ಲಿ ನಡೆಸಲಾಗುತ್ತಿದೆ. ಇದೀಗ ಅಂಗನವಾಡಿಯಲ್ಲಿ 22 ಮಕ್ಕಳಿದ್ದಾರೆ. ಆದರೆ ಅಂಗನವಾಡಿಗೆ ಸ್ವಂತ ಕಟ್ಟಡದ ಭಾಗ್ಯ ದೊರೆಯದ ಪರಿಣಾಮ ಮಕ್ಕಳ ಕಲಿಕೆಗೆ ಸಮಪರ್ಕ ವಾತಾವರಣ ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗನವಾಡಿ ಕಾಮಗಾರಿ ಅಪೂರ್ಣ : 

“ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 2016-17 ಸುಮಾರಿಗೆ ಮನರೇಗಾ ಯೋಜನೆಯಡಿ ಹೊಸ ಅಂಗನವಾಡಿ ಕೇಂದ್ರ ನಿರ್ಮಾಣ ಕಾಮಗಾರಿ ನಡೆದಿತ್ತು. ಆದರೆ ಕಾಮಗಾರಿ ಪೂರ್ಣಗೊಳ್ಳದೆ ನೆನೆಗುದಿದೆ ಬಿದ್ದಿದೆ. ನಾನು ವರ್ಗಾವಣೆಯಾಗಿ ಬಂದ ನಂತರ ಇತ್ತೀಚೆಗೆ ಅಂಗನವಾಡಿಗೆ ಭೇಟಿ ನೀಡಿದ್ದೇನೆ. ಮಕ್ಕಳ ಕಲಿಕೆಗೆ ಸೂಕ್ತ ವಾತಾವರಣ ಇಲ್ಲ ಎಂಬುದು ಕಂಡು ಬಾಡಿಗೆ ಮನೆಯಿಂದ ಗ್ರಾಮ ಪಂಚಾಯಿತಿಯಿಂದ ನಿರ್ಮಿಸಲಾದ ಬಯಲು ರಂಗಮಂದಿರದ ಕೋಣೆಯಲ್ಲಿ ನಡೆಸುವಂತೆ ಸ್ಥಳಾಂತರಿಸಲಾಗಿದೆ. ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಪಂಚಾಯಿತಿ ವತಿಯಿಂದ ಮಾಡಿಸಲಾಗುವುದು. ಶೌಚಾಲಯ ಸೇರಿದಂತೆ ಅಂಗನವಾಡಿ ಕಟ್ಟಡ ಬಗ್ಗೆ ಜಿಲ್ಲಾ ಪಂಚಾಯತಿಗೆ ಪತ್ರ ಬರೆಯುತ್ತೇನೆ” ಎಂದು ನಾಗಮಾರಪಳ್ಳಿ ಗ್ರಾಮ ಪಂಚಾಯತ್‌ ಪಿಡಿಒ ನಾಗೇಶ ಮುಕರಂಬೆ ಈದಿನ.ಕಾಮ್‌ ದೊಂದಿಗೆ ಮಾತನಾಡಿ ಹೇಳಿದ್ದಾರೆ.

WhatsApp Image 2023 12 12 at 1.10.52 PM
ನೆನೆಗುದಿಗೆ ಬಿದ್ದ ಅಂಗನವಾಡಿ ಕಟ್ಟಡ ಕಾಮಗಾರಿ

“ಅಂಗನವಾಡಿ ನಡೆಸುವ ಬಾಡಿಗೆ ಮನೆಯವರಿಗೆ 2019 ತನಕ ಇಲಾಖೆಯಿಂದ ಹಣ ಪಾವತಿಸಿದ್ದಾರೆ. ತದನಂತರ ಇಲಾಖೆ ಬಾಡಿಗೆ ಹಣ ನೀಡದ ಕಾರಣ ಸ್ವಂತ ಬಾಡಿಗೆ ಕಟ್ಟಿ ಅಂಗನವಾಡಿ ನಡೆಸುತ್ತಿರುವ ಕಾರ್ಯಕರ್ತೆ ಹಾಗೂ ಅಡುಗೆ ಸಹಾಯಕಿಯವರು ಅಗತ್ಯ ಸೌಲಭ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಂತ ಕಟ್ಟಡ ನಿರ್ಮಿಸುವಂತೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಸ್ವಂತ ಕಟ್ಟಡ ದೊರೆಯಲಿಲ್ಲ. ಆತಂಕ ಅನುಭವಿಸುವಂತಾಗಿದೆ” ಎಂದು ಪೋಷಕರು ವಿಷಾದ ವ್ಯಕ್ತಪಡಿಸುತ್ತಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಖಾಸಗಿ ಸಂಸ್ಥೆಗಳ ಗೌರವ ಡಾಕ್ಟರೇಟ್‌ಗೆ ಸರ್ಕಾರದಿಂದ ಮಾನ್ಯತೆ ಇಲ್ಲ

ಅಂಗನವಾಡಿ ಕೇಂದ್ರ ಬಾಡಿಗೆ ಮನೆಯಿಂದ ಬಯಲು ರಂಗಮಂದಿರದ ಕೋಣೆಗೆ ಸ್ಥಳಾಂತರಿಸಲಾಗಿದೆ. ಆದರೆ ಅಲ್ಲಿಯೂ ನೀರು, ಶೌಚಾಲಯ ಸೇರಿದಂತೆ ಯಾವುದೇ ಮೂಲ ಸೌಕರ್ಯವಿಲ್ಲ. ತಗಡಿನ ಸೀಟ್‌ ಕೋಣೆಯಲ್ಲಿ ಅಂಗನವಾಡಿ ನಡೆಸುವುದು ಮಕ್ಕಳಿಗೆ ಸೂಕ್ತವಲ್ಲ. ಹೊಸ ಅಂಗನವಾಡಿ ಕಟ್ಟಡದ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿ ಮಕ್ಕಳಿಗೆ ಸಮಪರ್ಕ ವ್ಯವಸ್ಥೆ ಮಾಡಬೇಕು ಎಂದು ಗ್ರಾಮಸ್ಥ ಹಾಗೂ ನಾಗಮಾರಪಳ್ಳಿ ಗ್ರಾ.ಪಂ.ಅಧ್ಯಕ್ಷ ಸಂಗಾರೆಡ್ಡಿ ಈದಿನ.ಕಾಮ್‌ ದೊಂದಿಗೆ ಮಾತನಾಡಿ ಹೇಳಿದರು.

ಈ ಬಗ್ಗೆ ಔರಾದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಈದಿನ.ಕಾಮ್‌ ಸಂಪರ್ಕಿದರೆ ಪ್ರತಿಕ್ರಿಯಿಸಲಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...