ಕಲಬುರಗಿ | ‘ಹೊಸ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ’ ಎಂದು ಶೋ ರೂಮ್​ಗೆ ಬೆಂಕಿ ಇಟ್ಟ ಯುವಕ: ಬಂಧನ

Date:

‘ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ’ ಎಂದು ಶೋ ರೂಮ್​ಗೆ ಬೆಂಕಿ ಇಟ್ಟ ಆರೋಪದ ಮೇಲೆ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಓಲಾ ಎಲೆಕ್ಟ್ರಿಕ್ ಬೈಕ್ ಶೋ ರೂಮ್‌ಗೆ ಮಹಮ್ಮದ್ ನದೀಮ್ ಎಂಬ ಯುವಕ ಬೆಂಕಿ ಹಚ್ಚಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದ್ದು, ಆತನನ್ನು ಬಂಧಿಸಲಾಗಿದೆ.

ಸೋಮವಾರ ಬೆಳಗ್ಗೆ ಓಲಾ ಎಲೆಕ್ಟ್ರಿಕ್ ಬೈಕ್‌ ಶೋ ರೂಮ್‌ಗೆ ಬೆಂಕಿ ತಗುಲಿತ್ತು. ಆರಂಭದಲ್ಲಿ ಎಲ್ಲರೂ ಇದು ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ ಎಂದು ನಂಬಿದ್ದರು. ಆದರೆ ಪೊಲೀಸರ ತನಿಖೆಯ ವೇಳೆ ಯುವಕ ನದೀಮ್ ಬೆಂಕಿ ಹಚ್ಚಿರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಲಬುರಗಿ

ಮಹಮ್ಮದ್ ನದೀಮ್ ಎಂಬ ವ್ಯಕ್ತಿ ತನ್ನ ಏಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಸಿಬ್ಬಂದಿ ಜೊತೆ ವಾಗ್ವಾದ ಮಾಡಿ ಬಳಿಕ ಪೆಟ್ರೋಲ್ ತಂದು ಶೋ ರೂಂ ಒಳಗೆ ಬೆಂಕಿ ಹಚ್ಚಿದ್ದು ಬಯಲಾಗಿದೆ. ಘಟನೆ ಸಂಬಂಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಂಕಿ ಹೊತ್ತಿಕೊಂಡ ಘಟನೆಯಲ್ಲಿ ಆರು ಹೊಸ ಎಲೆಕ್ಟ್ರಿಕ್ ಬೈಕ್​ಗಳು ಸುಟ್ಟು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಇದನ್ನು ಓದಿದ್ದೀರಾ? ಮಂಗಳೂರು | ಅಪಘಾತದ ವೇಳೆ ತಾಯಿಯನ್ನು ರಕ್ಷಿಸಿದ್ದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

ಕೇವಲ 20 ದಿನದ ಹಿಂದೆ ಓಲಾ ಕಂಪನಿಯ ಸ್ಕೂಟರ್ ಖರೀದಿಸಿದ್ದ ಆರೋಪಿಯ ಬೈಕ್ ಪದೇ ಪದೇ ರಿಪೇರಿಗೆ ಬರುತ್ತಿದೆ ಎಂದು ಸಿಟ್ಟಾಗಿದ್ದ ಎಂದು ತಿಳಿದುಬಂದಿದೆ.

“ಸಾಕಷ್ಟು ಬಾರಿ ಶೋರೂಂಗೆ ಬಂದು ಸರಿಪಡಿಸಿಕೊಡುವಂತೆ ಮನವಿ ಮಾಡಿದ್ದೆ. ಆದರೆ ಶೋರೂಮ್‌ನ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದು, ಇದರಿಂದ ಬೇಸತ್ತು, ನಿನ್ನೆ ಶೋ ರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದೇನೆ” ಎಂದು ಪೊಲೀಸರ ತನಿಖೆಯ ವೇಳೆ ಆರೋಪಿ ಬಾಯ್ಬಿಟ್ಟಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...