ಧಾರವಾಡ | ನನ್ನನ್ನು ಕೊಲ್ಲಲು ಮುಸ್ಲಿಂ ಯುವಕರಿಗೆ ಸುಪಾರಿ ನೀಡಲಾಗಿದೆ: ಅಂಜುಮನ್ ಮುಖಂಡ ಇಸ್ಮಾಯೀಲ್ ತಮಟಗಾರ

Date:

ಅಪ್ರಾಪ್ತ ಮುಸ್ಲಿಂ ವಯಸ್ಸಿನ ಯುವಕರ ಕೈಯಲ್ಲಿ ನನ್ನ ಹತ್ಯೆ ಮಾಡಿಸಲು, ನನ್ನ ವಿರೋಧಿಗಳು ಸಂಚು ರೂಪಿಸಿದ್ದಾರೆ ಎಂದು ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯೀಲ್ ತಮಟಗಾರ ಆರೋಪಿಸಿದರು.

ಧಾರವಾಡದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ವಿದ್ಯಾಕೇಂದ್ರ.‌ಇಲ್ಲಿನ ಶಾಂತಿ ಸುವ್ಯವಸ್ಥೆ ಕಾಪಾಡಲು ಅವಳಿ ನಗರದ ಪೊಲೀಸರು ಮುಂದಾಗಬೇಕಿದೆ. ದುಶ್ಚಟಗಳಿಂದ ಯುವಕರನ್ನು ಹಾದಿ ತಪ್ಪಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಈ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಅವಳಿ ನಗರದ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರಿಗೆ ದೂರು ನೀಡಲಾಗುವುದು ಎಂದರು.

ನನಗೆ ಜೀವ ಭಯ ಇರುವುದು ನಿಜ. ನಾನು ಯಾರ ಮೇಲೂ ಆರೋಪ ಮಾಡುತ್ತಿಲ್ಲ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷದಲ್ಲೂ ಶತ್ರುಗಳಿದ್ದಾರೆ. ರಾಜಕೀಯದಲ್ಲಿ ನನ್ನನು ಮುಗಿಸಲು ಪ್ರಯತ್ನ ನಡೆಯುತ್ತಿದೆ. ಯಾರು ಈ ಕುತಂತ್ರದ ಹಿಂದೆ ಇದ್ದಾರೆಂಬುದು ಪೊಲೀಸರು ತನಿಖೆ ನಡೆಸಿ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರಿಗೆ ಈ ಕುರಿತು ಎಲ್ಲ ಮಾಹಿತಿ ನೀಡಲಾಗಿದೆ. ನಶೆಯಲ್ಲಿ ಬಂದಿದ್ದ ಅಪ್ರಾಪ್ತ ವಯಸ್ಸಿನ ಯುವಕರ ಗುಂಪೊಂದು ನಶೆಯಲ್ಲಿ ನನ್ನನ್ನು ಕೊಲ್ಲುವ ಮಾತುಗಳನ್ನು ಆಡಿದ್ದಾರೆ. ಅವರು ನನಗೆ ಪರಿಚಯವಿಲ್ಲ. ಈ ಹಿಂದೆಯೂ ಸಹ ನನ್ನ ಹತ್ಯೆಗೆ ಯತ್ನಿಸಿದ್ದರು. ಇದೀಗ ಮುಸ್ಲಿಂ ಯುವಕರಿಗೆ ಸುಫಾರಿ ನೀಡಲಾಗಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...