ಅಂಕೋಲಾ: ಕಾಶ್ಮೀರದಿಂದ ಮಂಗಳೂರು ಕಡೆಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಂಕೋಲಾ ತಾಲೂಕಿನ ಬಾಳೇಗುಳಿ ಬಳಿ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗೋಪಾಲಕೃಷ್ಣ ದೇವಾಲಯದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ, ಲಾರಿಯಲ್ಲಿದ್ದ ಸೇಬು ಹಣ್ಣಿನ ಬಾಕ್ಸ್‌ಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಕೆಲವು ಬಾಕ್ಸ್‌ಗಳಲ್ಲಿದ್ದ ಹಣ್ಣುಗಳು ಹಾನಿಗೊಳಗಾಗಿವೆ. ಅಪಘಾತದ ನಂತರ ಸ್ಥಳೀಯರು ಮತ್ತು ಹೆದ್ದಾರಿ ಗಸ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಕ್ರೇನ್ ಸಹಾಯದಿಂದ ಲಾರಿಯನ್ನು ಎತ್ತಿ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಪರವಾನಗಿ ಇಲ್ಲದೆ ಮರಳು ಸಂಗ್ರಹ; ಅಧಿಕಾರಿಗಳ ವಿರುದ್ಧ ಜನಾಕ್ರೋಶ
ಸಾವಿರಾರು ಬಾಕ್ಸ್‌ಗಳು ಹಾನಿಗೊಳಗಾದರೂ, ಚಾಲಕ ಮತ್ತು ಸಹಾಯಕರು ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ. ಕೆಲವು ಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದರಿಂದ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು.





