ಅಂಕೋಲಾ ತಾಲ್ಲೂಕಿನ ಹಾರವಾಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡುಗೆ ಎಣ್ಣೆ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಪರಿಣಾಮವಾಗಿ ನೂರಾರು ಲೀಟರ್ ಖಾದ್ಯ ತೈಲ ರಸ್ತೆಗೆ ಚೆಲ್ಲಿ, ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಶನಿವಾರ ತಡರಾತ್ರಿ ಸುಮಾರು 11:30ರ ಸುಮಾರಿಗೆ ಹುಬ್ಬಳ್ಳಿಯಿಂದ ಗೋವಾದತ್ತ ಸಾಗುತ್ತಿದ್ದ ಪ್ರಿಯಾ ಆಯಿಲ್ ಕಂಪನಿಗೆ ಸೇರಿದ ಗೂಡ್ಸ್ ಲಾರಿ ಹಾರವಾಡ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯ ಬದಿಗೆ ಉರುಳಿದೆ. ಲಾರಿ ಮಗುಚಿ ಬಿದ್ದ ಪರಿಣಾಮ ಅದರಲ್ಲಿದ್ದ ಎಣ್ಣೆಯ ಡ್ರಮ್‌ಗಳು ಒಡೆದು ಹೋಗಿ, ರಸ್ತೆಯ ತುಂಬಾ ಎಣ್ಣೆ ಹರಡಿತು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವಶಾತ್, ಲಾರಿ ಚಾಲಕ ಮತ್ತು ಸಹಾಯಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಕಟಾವು ಹಂತದಲ್ಲಿರುವ ಭತ್ತಕ್ಕೆ ಕೀಟಗಳ ಬಾಧೆ; ರೈತರು ಕಂಗಾಲು
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಂಕೋಲಾ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





