ಅಂಕೋಲಾ ತಾಲ್ಲೂಕಿನ ಪೂಜಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿ ಪೋಷಕರು ಕಾಲೇಜಿಗೆ ಮುತ್ತಿಗೆ ಹಾಕಿ ಭಾರಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.
ಕಾಲೇಜಿನಲ್ಲಿ ಪಾಠ ಮಾಡುವ ವೇಳೆ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆಯ ಮೊಬೈಲ್‌ಗೆ ಪದೇ ಪದೇ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ಆರೋಪಿಸಿ ಉಪನ್ಯಾಸಕ ರಾಮಚಂದ್ರ ಅಂಕೋಲೆಕರ್ ವಿರುದ್ದ ವಿದ್ಯಾರ್ಥಿನಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ ಎಂದು ತಿಳಿದುಬಂದಿದೆ.
ದೂರು ದಾಖಲಾದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಕಾಲೇಜು ಎದರು ಪ್ರತಿಭಟನೆ ನಡೆಸಿದ್ದಾರೆ. ಉಪನ್ಯಾಸಕನನ್ನು ತಕ್ಷಣ ಅಮಾನತು ಮಾಡುವಂತೆ, ಜೊತೆಗೆ ಅವರಿಗೆ ಬೆಂಬಲವಾಗಿ ನಿಂತಿರುವ ಕಾಲೇಜಿನ ಪ್ರಾಂಶುಪಾಲೆಯನ್ನು ತನಿಖೆ ಪೂರ್ಣಗೊಳ್ಳುವವರೆಗೆ ಬೇರೆಡೆ ವರ್ಗಾಯಿಸುವಂತೆ ಪ್ರತಿಭಟನೆಕಾರರು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಕಾರವಾರ | ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ರಹಿತ ₹1 ಕೋಟಿ ಹಣ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ
ಪ್ರತಿಭಟನೆಯಿಂದ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪೋಷಕರ ಮನವೊಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.





