ಅಂಕೋಲಾ | ಕೇಣಿ ವಾಣಿಜ್ಯ ಬಂದರು ವಿರುದ್ಧ ಹೋರಾಟಕ್ಕೆ ಒಂದು ವರ್ಷ – ಇಂದು ‘ಅಂಕೋಲಾ ಬಂದ್’

Date:

ಅಂಕೋಲಾದ ಕೇಣಿ ವಾಣಿಜ್ಯ ಬಂದರು ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಹೋರಾಟಕ್ಕೆ ಇಂದು (ನ.25) ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ, ಹೋರಾಟ ಸಮಿತಿಯು ಸಂಪೂರ್ಣ ಅಂಕೋಲಾ ಬಂದ್ ಜಾರಿಗೆ ಕರೆ ನೀಡಿದೆ. ಈ ದಿನವನ್ನು ಕರಾಳ ದಿನವೆಂದು ಗುರುತಿಸಿ, ಅಣಕು ಶವಯಾತ್ರೆ ಮೂಲಕ ಗಮನ ಸೆಳೆಯಲು ತಯಾರಿ ನಡೆಯುತ್ತಿದೆ.

ಕೇಣಿ ಪ್ರದೇಶದಲ್ಲಿ ಬಂದರು ನಿರ್ಮಾಣಕ್ಕೆ ಸರ್ಕಾರ ಮುಂದುವರೆದಿರುವ ಕ್ರಮಗಳನ್ನು ಸ್ಥಳೀಯರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಕಳೆದ 10 ದಿನಗಳಿಂದ ಹೋರಾಟಗಾರರು ನಿರಂತರ ಧರಣಿಯಲ್ಲಿ ತೊಡಗಿರುವುದು, ಹಾಗೂ ಹೋರಾಟದ ಒಂದು ವರ್ಷದ ನೆನಪಿಗಾಗಿ ಬಂದ್ ಆಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಳ: ಅಬಕಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಡ ಕುಟುಂಬಗಳು ಬೀದಿಪಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂದರು ಯೋಜನೆಯ ವಿರುದ್ಧ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನ ಕಂಡುಬಂದಿದ್ದು, ಅಂಕೋಲಾ ಬಂದ್‌ಗೆ ವ್ಯಾಪಕ ಬೆಂಬಲ ದೊರಕುವ ಸೂಚನೆಗಳು ಗೋಚರಿಸುತ್ತಿವೆ. ಪಟ್ಟಣದ ಅನೇಕ ವ್ಯಾಪಾರ ಮಳಿಗೆಗಳು ಸ್ವಯಂಪ್ರೇರಿತವಾಗಿ ನಾಳೆ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲು ಒಪ್ಪಿಕೊಂಡಿವೆ.

ಬಂದ್ ಹಿನ್ನೆಲೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ನವೆಂಬರ್ 25 ರಂದು ತಾಲೂಕಿನಾದ್ಯಂತ ಎಲ್ಲಾ ಮದ್ಯಂಗಡಿಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ. ಕೇಣಿ ಬಂದರು ವಿರೋಧಿ ಹೋರಾಟ ಈಗ ಮತ್ತೊಂದು ಹಂತ ಪ್ರವೇಶಿಸಿದ್ದು, ನಾಳೆಯ ಬಂದ್ ಮೂಲಕ ಸರ್ಕಾರ ಮತ್ತು ಆಡಳಿತಕ್ಕೆ ಸಂದೇಶ ನೀಡಲು ಹೋರಾಟಗಾರರು ಸಜ್ಜಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...