ಬೀದರ್‌ | ಅನ್ನಭಾಗ್ಯ ಯೋಜನೆ: ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಮನವಿ

Date:

  • ಜಿಲ್ಲೆಗೆ ಆಗಸ್ಟ್‌ ತಿಂಗಳಲ್ಲಿ ನೇರ ನಗದು ವರ್ಗಾವಣೆ 17.35 ಕೋಟಿ ಅನುದಾನ ಸ್ವೀಕೃತವಾಗಿದೆ.
  • ಬೀದರ ಜಿಲ್ಲೆಯ 42,273 ಪಡಿತರ ಚೀಟಿ ಸದಸ್ಯರುಗಳ ಇ-ಕೆವೈಸಿ ಮಾಡಿಸಿಕೊಂಡಿಲ್ಲ.

ಅನ್ನಭಾಗ್ಯ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಒಟ್ಟು 10 ಕೆ.ಜಿ. ಅಕ್ಕಿ ಆಹಾರಧಾನ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸಲಾಗುವ 05 ಕೆ.ಜಿ. ಅಕ್ಕಿ ಆಹಾರಧಾನ್ಯದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 05 ಕೆ.ಜಿ. ಅಕ್ಕಿ ಆಹಾರಧಾನ್ಯ ವಿತರಿಸಲು ಉದ್ದೇಶಿಸಿದ್ದು, ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಾಗಿ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

“ಬೀದರ ಜಿಲ್ಲೆಗೆ ಸರ್ಕಾರದಿಂದ ಆಗಸ್ಟ್‌ ತಿಂಗಳಲ್ಲಿ ನೇರ ನಗದು ವರ್ಗಾವಣೆ ಸಂಬಂಧ ಒಟ್ಟು ರೂ.17.35 ಕೋಟಿ ಅನುದಾನ ಸ್ವೀಕೃತವಾಗಿದ್ದು. ಆಗಸ್ಟ್ ತಿಂಗಳಿಗೆ 2,82,221 ಪಡಿತರ ಚೀಟಿಗಳ 1,063,965 ಫಲಾನುಭವಿಗಳು ಡಿ.ಬಿ.ಟಿ ಪಾವತಿ ಅರ್ಹವಾಗಿದ್ದು, ಇದರಲ್ಲಿ 2,09,195 ಪಡಿತರ ಚೀಟಿಗಳ ಕುಟುಂಬ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಒಟ್ಟು 12,92,35,020ರೂ.ಗಳನ್ನು ಡಿ.ಬಿ.ಟಿ ಮೂಲಕ ಹಣ ವರ್ಗಾಯಿಸಲಾಗಿದೆ. ಇದರಿಂದ 7,86,068 ಫಲಾನುಭವಿಗಳು ಲಾಭ ಪಡೆದಿರುತ್ತಾರೆ ಮತ್ತು ಈಗಾಗಲೇ ಪಡಿತರ ಚೀಟಿ ಮುಖ್ಯಸ್ಥರ ಫಲಾನುಭವಿಗಳ ಖಾತೆಗೆ ಹಣ ಕೂಡ ಜಮೆಯಾಗಿವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಜಿಲ್ಲೆಯಲ್ಲಿ ಇನ್ನು 73,026 ಪಡಿತರ ಚೀಟಿಗಳ 2,77,897 ಫಲಾನುಭವಿಗಳ ಖಾತೆಗೆ ಹಣ ಪಾವತಿ ಮಾಡುವುದು ಪ್ರಗತಿಯಲ್ಲಿದೆ. ಪಡಿತರ ಚೀಟಿಗಳ ಕುಟುಂಬದ ಮುಖ್ಯಸ್ಥರ ನಿಷ್ಕ್ರಿಯವಾಗಿರುವ ಬ್ಯಾಂಕ್ ಖಾತೆಗಳು, ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಣೆ ಮಾಡದೇ ಇರುವವರು, ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗಳು ಇಲ್ಲದೇ ಇರುವವರು, ಬ್ಯಾಂಕ್ ಖಾತೆಗಳು ಎನ್‌ಪಿಸಿಐ ಆ್ಯಕ್ಟಿವ್ ಮಾಡಿಸಿಕೊಳ್ಳದವರು, ಪಡಿತರ ಚೀಟಿಗಳಲ್ಲಿ ಇ-ಕೆವೈಸಿ ಮಾಡಿಸದೇ ಇರುವವರು, ಅಂತಹ ಪಡಿತರ ಚೀಟಿ ಫಲಾನುಭವಿಗಳು ಡಿ.ಬಿ.ಟಿ ಹಣ ಪಾವತಿಗೆ ಅರ್ಹರಾಗಿರುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

42,273 ಪಡಿತರ ಚೀಟಿ ಸದಸ್ಯರುಗಳ ಇ-ಕೆವೈಸಿ ಇಲ್ಲ:

ಇಲ್ಲಿಯವರೆಗೆ ಜಿಲ್ಲೆಯಲ್ಲಿ 42,273 ಪಡಿತರ ಚೀಟಿ ಸದಸ್ಯರುಗಳ ಇ-ಕೆವೈಸಿ ಮಾಡಿಸಿಕೊಂಡಿರುವುದಿಲ್ಲ.ಅಂತಹವರು ಕೂಡಲೇ ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುಗಳ ಸದಸ್ಯರ ಇ-ಕೆವೈಸಿ ಮಾಡಿಸಿಕೊಳ್ಳವಂತೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

“ಡಿ.ಬಿ.ಟಿ ಹಣ ಪಾವತಿಯನ್ನು ಪಡೆಯದೇ ಇರುವವರು ತಕ್ಷಣವೇ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗಳು ನಿಷ್ಕ್ರಿಯವಾಗಿದ್ದನ್ನು ಸಕ್ರಿಯ ಮಾಡಿಸಿಕೊಳ್ಳುವುದು, ಆಧಾರ್ ಜೋಡಣೆ ಮಾಡದೇ ಇದ್ದವರು ತಮ್ಮ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವುದು, ಬ್ಯಾಂಕ್ ಖಾತೆಗಳು ಎನ್‌ಪಿಸಿಐ ಆ್ಯಕ್ಟಿವ್ ಮಾಡಿಸಿಕೊಳ್ಳತಕ್ಕದ್ದು, ಬ್ಯಾಂಕ್ ಖಾತೆಗಳು ಹೊಂದದೇ ಇರುವವರು ಅಂಚೆ ಕಛೇರಿ ಬ್ಯಾಂಕ್‌ಗಳಲ್ಲಿ (ಐಪಿಪಿಬಿ) ಅಡಿ ಅಥವಾ ಇತರೆ ಯಾವುದೇ ಬ್ಯಾಂಕ್‌ಗಳಲ್ಲಿ ಹೊಸ ಖಾತೆಗಳನ್ನು ತೆರೆಯಲು ತಿಳಿಸಲಾಗಿದೆ. ಇಂತಹ ಸಮಸ್ಯೆಗಳು ಕೂಡಲೇ ಬಗೆಹರಿಸಿಕೊಂಡಿದ್ದಲ್ಲಿ ಮುಂದಿನ ತಿಂಗಳ ಸೆಪ್ಟೆಂಬರ್ ತಿಂಗಳ ನಗದು ಹಣ ವರ್ಗಾವಣೆಗೆ ಅರ್ಹರಾಗುವರು. ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಸೀಲ್ದಾರರ ಕಛೇರಿ (ಆಹಾರ ಶಾಖೆ)ಗಳಲ್ಲಿ, ನ್ಯಾಯಬೆಲೆ ಅಂಗಡಿಗಳ ಮುಂದೆ ಬ್ಯಾಂಕ್ ಖಾತೆಗಳ ಸಮಸ್ಯೆಗಳನ್ನು ಹೊಂದಿರುವ ಫಲಾನುಭವಿಗಳ ಪಟ್ಟಿಯನ್ನು ಪ್ರದರ್ಶಿಸಲಾಗಿದೆ. ಅಂತಹ ಪಡಿತರ ಚೀಟಿ ಫಲಾನುಭವಿಗಳು ಕೂಡಲೇ ತಮ್ಮ ಬ್ಯಾಂಕ್ ಖಾತೆಗಳನ್ನು ಸಕ್ರೀಯಗೊಳಿಸುವುದು, ಆಧಾರ್ ಜೋಡಣೆ ಮಾಡಿಸಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...