ಅಣ್ಣಿಗೇರಿ | ಸಹಜಾನಂದ ಸಪ್ತಾಹ ಕಾರ್ಯಕ್ರಮಕ್ಕೆ ಕನ್ನೇರಿ ಮಠದ ಸ್ವಾಮಿ ಬರುವುದನ್ನು ತಡೆಯುವಂತೆ ಒತ್ತಾಯ

Date:

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಇದೇ ತಿಂಗಳ 5ರಿಂದ 7ರ ತನಕ ನಡೆಯುವ ಸಹಜಾನಂದ ಸಪ್ತಾಹ ಕಾರ್ಯಕ್ರಮಕ್ಕೆ ಕನ್ನೇರಿ ಮಠದ ಸ್ವಾಮಿಗಳನ್ನು ಆಹ್ವಾನಿಸಿರುವುದರ ವಿರುದ್ಧ ಬಸವಪರ ಸಂಘಟನೆಗಳು ಹಾಗೂ ಲಿಂಗಾಯತ ಸ್ವಾಮೀಜಿಗಳು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಸವಪರ ಸಂಘಟನೆಗಳು ಮತ್ತು ಲಿಂಗಾಯತ ಸ್ವಾಮೀಜಿಗಳು ನವೆಂಬರ್ 1ರಂದು ಅಣ್ಣಿಗೇರಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, “ಅಶ್ಲೀಲ ಮತ್ತು ಅವಹೇಳನಕಾರಿ ಹೇಳಿಕೆ ನೀಡಿ ಬಸವಪರ ಸಂಘಟನೆಗಳು ಹಾಗೂ ಲಿಂಗಾಯತರ ಆಕ್ರೋಶಕ್ಕೆ ಕಾರಣವಾಗಿರುವ ಕನ್ನೇರಿ ಮಠದ ಸ್ವಾಮೀಜಿಯನ್ನು ಈಗಾಗಲೇ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಪ್ರವೇಶಿಸಿದಂತೆ ನಿರ್ಬಂಧ ಹೇರಲಾಗಿದೆ. ಇದೀಗ ಅಣ್ಣಿಗೇರಿ ತಾಲೂಕಿಗೆ ಬರುವುದನ್ನೂ ತಡೆಹಿಡಿಯಬೇಕು” ಎಂದು ಅಗ್ರಹಿಸಿದ್ದಾರೆ.

“ಕಳೆದ 8 ವರ್ಷಗಳ ಹಿಂದೆ ಪ್ರಮೋದ್ ಮುತಾಲಿಕ್ ಅವರು ಹಳ್ಳಿಕೇರಿ ಗ್ರಾಮಕ್ಕೆ ಬಂದು ಭಾಷಣ ಮಾಡಿ ಹೋದನಂತರ ಮೂರು ಹೆಣಗಳು ಬಿದ್ದಿವೆ. ಅಲ್ಲಿಂದ ಈ ಗ್ರಾಮವು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲ್ಪಟ್ಟಿದೆ. ಈಗಾಗಲೇ ಅವಹೇಳನಕಾರಿಯಾಗಿ ಮಾತನಾಡಿ, ಲಿಂಗಾಯತರ ಆಕ್ರೋಶಕ್ಕೆ ಕಾರಣವಾಗಿರುವ ಕನ್ನೇರಿ ಸ್ವಾಮೀಜಿ ಹಳ್ಳಿಕೇರಿಗೆ ಬರುವುದರಿಂದ ಮತ್ತೆ ಅಶಾಂತಿ ಉಂಟಾಗಬಹುದು. ಆದ್ದರಿಂದ ಅವರು ಕಾರ್ಯಕ್ರಮಕ್ಕೆ ಬರುವುದನ್ನು ನಿರ್ಬಂಧಿಸಬೇಕು” ಎಂದು ಒತ್ತಾಯಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದೆಡೆ, “ಹಳ್ಳಿಕೇರಿ ಗ್ರಾಮದಲ್ಲಿ ನಡೆಯುವ ಈ ಕಾರ್ಯಕ್ರಮವು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಕನ್ನೇರಿ ಶ್ರೀಗಳನ್ನು ನಿರಂತರವಾಗಿ 14 ವರ್ಷಗಳಿಂದ ಆಹ್ವಾನಿಸುತ್ತಿದ್ದೇವೆ. ಅವರು ಬಾಯಿತಪ್ಪಿ ಆಡು ಭಾಷೆಯಲ್ಲಿ ಮಾತನಾಡಿರುವುದನ್ನು ನೆಪ ಮಾಡಿಕೊಂಡು ಶ್ರೀಗಳನ್ನು ಜಿಲ್ಲೆಗೆ ಬರದಂತೆ ನಿರ್ಬಂಧ ಹೇರಬೇಕೆಂದು ಒತ್ತಾಯಿಸುವುದು ಸರಿಯಲ್ಲ” ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಂಟ್ವಾಳ | ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಕನ್ನೇರಿ ಸ್ವಾಮೀಜಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಬೇಕೆಂದು ಒತ್ತಾಯಿಸಿ ಅಕ್ಟೋಬರ್ 30ರಂದು ಬಸವಪರ ಸಂಘಟನೆಗಳಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಅದರ ಬೆನ್ನಲ್ಲೇ ಬಸವಪರ ಸಂಘಟನೆಗಳು ಮತ್ತು ಲಿಂಗಾಯತ ಸ್ವಾಮೀಜಿಗಳು ನವೆಂಬರ್ 1ರಂದು ಅಣ್ಣಿಗೇರಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕನ್ನೇರಿ ಮಠದ ಸ್ವಾಮೀಜಿ ಅಣ್ಣಿಗೇರಿ ತಾಲೂಕಿಗೆ ಬರುವುದನ್ನೂ ತಡೆಹಿಡಿಯಬೇಕೆಂದು ಅಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...