ಮೇ 13ರವರೆಗೂ ‘ಸಿಇಟಿ’ಗೆ ಅರ್ಜಿ ಸಲ್ಲಿಸಬಹುದು

Date:

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 13ರ ಬೆಳಗ್ಗೆ 11ಗಂಟೆಯವರೆಗೂ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಹೇಳಿದ್ದಾರೆ.

ಮೇ 20 ಹಾಗೂ 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಪೋಷಕರ ಮನವಿಯ ಆಧಾರದ ಮೇರೆಗೆ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ಹಾಗು ಅಂತಿಮ ಅವಕಾಶವನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕೆಇಎ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ಗೆ http://kea.kar ಭೇಟಿ ನೀಡಿ.

ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಮುಂತಾದ ಕೋರ್ಸುಗಳ ಪ್ರವೇಶಕ್ಕೆ ಇಲ್ಲಿಯವರೆಗೆ ಸಿಇಟಿ-2023ಕ್ಕೆ ನೋಂದಣಿ ಮಾಡದಿರುವ ಅಥವಾ ನೋಂದಣಿ ಮಾಡಿ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಮೇ.11 ಬೆಳಗ್ಗೆ 8.00 ರಿಂದ ಮೇ.13 ಬೆಳಗ್ಗೆ 11.00 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೇ.13ರ ಸಂಜೆ 6.00 ರೊಳಗೆ ಶುಲ್ಕವನ್ನು ಪಾವತಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
cet date

ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಅಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಿಇಟಿಗೆ ಬರೆಯಬೇಕು. ಪರೀಕ್ಷೆಗೆ ಹಾಜರಾದರೆ ಸೀಟು ಹಂಚಿಕೆ ವೇಳೆ ಪೂರಕ ಪರೀಕ್ಷೆ ಅಂಕಗಳನ್ನು ಪರಿಗಣಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...