‘ಅನರ್ಹ ಸಂಸದ’ ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ: ‘ಅಸಿಂಧು ಆದೇಶ’ಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

Date:

ಹಾಸನದ ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ಸಂಸತ್​ ಸದಸ್ಯತ್ವದ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿದ್ದು, ಮತ್ತೆ ಹಿನ್ನಡೆಗೊಳಗಾಗಿದ್ದಾರೆ.

ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್‌ನ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು.

ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ.ನಟರಾಜನ್, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವವರೆಗೆ ಅನರ್ಹತೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಹೈಕೋರ್ಟ್‌ ಗಣನೆಗೆ ತೆಗೆದುಕೊಂಡಿಲ್ಲ.

ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಬಂದ ದಿನವೇ ಮೇಲ್ಮನವಿ ಸಲ್ಲಿಸಲು ತಡೆ ಕೋರಿ‌ ಅರ್ಜಿ‌ ಸಲ್ಲಿಸಬೇಕಿತ್ತು. ಈ ಹಿನ್ನೆಲೆಯಲ್ಲಿ ತೀರ್ಪು ನೀಡಿರುವ ನ್ಯಾಯಪೀಠದಿಂದಲೇ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ.

ಇದು ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಜೀವನಕ್ಕೆ ಮತ್ತೆ ಕಂಟಕವಾಗಿದೆ. ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಆರೋಪ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಯಗೊಂಡಿರುವ ಅಂದಿನ ಬಿಜೆಪಿಯ ಎ.ಮಂಜು ಹಾಗೂ ವಕೀಲ ದೇವರಾಜೇಗೌಡ ಎಂಬವರು ಅರ್ಜಿ ಸಲ್ಲಿಸಿದ್ದರು. ಆ ಬಳಿಕ ಮಂಜು ಅವರು ಜೆಡಿಎಸ್‌ ಸೇರಿ ದೂರಿನಿಂದ ಹಿಂದೆ ಸರಿದಿದ್ದರೂ, ವಕೀಲ ದೇವರಾಜೇಗೌಡ ಮುಂದುವರಿಸಿದ್ದರು.

ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳಲ್ಲಿ ಸುಳ್ಳು ಅಂಕಿ ಅಂಶಗಳಿಂದ ಕೂಡಿದೆ ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠವು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1ರಂದು ತೀರ್ಪು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...