ಕುಮಾರಸ್ವಾಮಿಗೆ ಉತ್ತರಿಸುವುದೂ, ಹುಚ್ಚಾಸ್ಪತ್ರೆಗೆ ಸೇರುವುದೂ ಒಂದೇ: ದಿನೇಶ್ ಗುಂಡೂರಾವ್ ವ್ಯಂಗ್ಯ

Date:

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ನಾವು ಉತ್ತರಿಸುವುದೂ, ಹುಚ್ಚಾಸ್ಪತ್ರೆಗೆ ಸೇರುವುದೂ ಎರಡು ಒಂದೇ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಬಗ್ಗೆ ಕುಮಾರಸ್ವಾಮಿ ನಡೆಸುತ್ತಿರುವ ಟೀಕಾ ಪ್ರಹಾರದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, “ಎಚ್ ಡಿ ಕುಮಾರಸ್ವಾಮಿ ಅವರ ಆರೋಪಗಳೇ ಹಾಸ್ಯಾಸ್ಪದ. ಯಾವುದೇ ಸರ್ಕಾರದಲ್ಲಿ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ಸಹಜ ಪ್ರಕ್ರಿಯೆ. ಇದು ಎಲ್ಲಾ ಸರ್ಕಾರಗಳಲ್ಲೂ ನಡೆಯುತ್ತದೆ. ಇದು ಎರಡು ಬಾರಿ ರಾಜ್ಯ ಆಳಿದವರಿಗೆ ಗೊತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲೂ ಅಧಿಕಾರಿಗಳ ವರ್ಗಾವಣೆಯಾಗಿತ್ತು. ಆಗ ಎಚ್‌ಡಿಕೆ ಅಧಿಕಾರಿಗಳ ವರ್ಗಾವಣೆಗೆ ಇಂತಿಷ್ಟು ರೇಟ್ ಎಂದು ಫಿಕ್ಸ್ ಮಾಡಿದ್ರಾ? ಯಾಕಂದ್ರೆ ಕಳ್ಳನ ಗುಟ್ಟು ಕಳ್ಳನಿಗೇ ಗೊತ್ತು ಎಂಬಂತಿದೆ ಎಚ್‌ಡಿಕೆ ವರ್ತನೆ. ನಮ್ಮ ಸರ್ಕಾರದಲ್ಲಿ ವರ್ಗಾವಣೆ ಪಾರದರ್ಶಕವಾಗಿದೆ. ಆದರೆ ತಾನು ಕಳ್ಳ ಪರರ ನಂಬ ಎಂಬಂತೆ ಕುಮಾರಸ್ವಾಮಿ ವರ್ತಿಸಿದರೆ ಏನು ಮಾಡಲು ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರದ ವಿರುದ್ಧದ ಆರೋಪಗಳಿಗೆ ಸಾಕ್ಷಿ ಇದೆ ಎಂದು ಕುಮಾರಸ್ವಾಮಿ ಪೆನ್ ಡ್ರೈವ್ ಎಂಬ ಹಾವಿನ ಬುಟ್ಟಿ ತೋರಿಸುತ್ತಿದ್ದಾರೆ. ಅವರ ಬಳಿಯಿರುವ ಹಾವಿನ ಬುಟ್ಟಿಯಲ್ಲಿ ಯಾವ ಹಾವಿದೆ ಎಂದು ತಿಳಿದುಕೊಳ್ಳುವ ಕುತೂಹಲ ನಮಗೂ ಇದೆ. ಅವರ ಬುಟ್ಟಿಯಲ್ಲಿ ಹಾವಿದ್ದರೆ ಹೊರಗೆ ಬಿಡಲಿ. ಆಗ ಅದು ಕೇರೇ ಹಾವೋ, ಮಂಡಲದ ಹಾವೋ ಅಥವಾ ವಿಷ ಕಕ್ಕುವ ನಾಗರಹಾವೋ ತಿಳಿಯುತ್ತದೆ” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...