ಬೀದರ್‌ | ಸಂವಿಧಾನ ವಿರೋಧಿ ಹೇಳಿಕೆ : ಆನಂದ ಸ್ವರೂಪ ಸ್ವಾಮೀಜಿ ಗಡಿಪಾರಿಗೆ ಆಗ್ರಹ

Date:

‘ಹಿಂದೂ ರಾಷ್ಟ್ರಕ್ಕೆ ಸಂವಿಧಾನ ಸಿದ್ದವಾಗಿದೆ’ ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಶಾಂಭವಿ ಪೀಠಾಧೀಶ್ವರ ಆನಂದ ಸ್ವರೂಪ ಸ್ವಾಮೀಜಿಯನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ್ ನಾಟೇಕರ್ ಆಗ್ರಹಿಸಿದ್ದಾರೆ.

ʼಭಾರತ ದೇಶ ಬಹು ಸಂಸ್ಕೃತಿ, ಭಾಷೆಗಳಿಂದ ಕೂಡಿದೆ. ಇಲ್ಲಿ ಹಲವಾರು ಜಾತಿ, ಧರ್ಮ, ವರ್ಗಗಳಿವೆ. ಪ್ರಸ್ತುತ ಇರುವ ಸಂವಿಧಾನದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕು ನೀಡಲಾಗಿದೆ. ಇಂತಹ ಶ್ರೇಷ್ಠ ಸಂವಿಧಾನ ಬದಲಾಯಿಸಿ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಪೂರಕವಾದ ಸಂವಿಧಾನ ತರುವುದಕ್ಕೆ ಹುನ್ನಾರ ನಡೆಸುತ್ತಿರುವುದು ಖಂಡನೀಯʼ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಸಮಾನತೆ ಸಮಾಜ ಒಪ್ಪದ ಕೆಲವು ಮನುವಾದಿಗಳು ಡಾ.ಅಂಬೇಡ್ಕರ್‌ ಅವರ ರಚಿತ ಸಂವಿಧಾನ ಬದಲಿಸುವ ಹುನ್ನಾರ ನಡೆಸುತ್ತಿದ್ದಾರೆ. ಒಂದು ವೇಳೆ ಭಾರತೀಯ ಸಂವಿಧಾನಕ್ಕೆ ಧಕ್ಕೆ ಬಂದರೆ ಇಡೀ ರಾಷ್ಟ್ರಮಟ್ಟದಲ್ಲಿ ರಕ್ತದ ಕಾಲುವೆ ಹರಿಯುತ್ತದೆ. ದೇಶದಲ್ಲಿ ಹಿಂದೂ ಧರ್ಮದ ಸಂವಿಧಾನ ಹೇರಲು ಮುಂದಾದರೆ ಮತ್ತೊಮ್ಮೆ ಭೀಮಾಕೋರೆಗಾವ್ ಮರುಕಳಿಸುತ್ತದೆʼ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮನುವಾದಿಗಳ ಮೂಲ ಉದ್ದೇಶವೇನೆಂದರೆ, ಮೇಲ್ಜಾತಿಯಲ್ಲಿ ಹುಟ್ಟಿ, ವೇದ ಉಪನಿಷತ್ ಗಳನ್ನು ಅಧ್ಯಯನ ಮಾಡಿದವರು ಮಾತ್ರ ಅಧಿಕಾರದಲ್ಲಿರಬೇಕು. ಇನ್ನುಳಿದ ಎಲ್ಲಾ ಜಾತಿ ಜನಾಂಗದವರಿಗೆ ಅಧಿಕಾರದಿಂದ ದೂರ ತಳ್ಳಬೇಕು ಎಂಬುದಾಗಿದೆ. ಆರ್‌ಎಸ್‌ಎಸ್ ತನ್ನ ಶತಮಾನೋತ್ಸವ ಸಂಭ್ರಮದಲ್ಲಿ ಈ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲು ಹೊರಟಿದ್ದಾರೆʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೇಂದ್ರ ಬಜೆಟ್‌ 2025 : ಯಾರು ಏನಂದ್ರು?

ಹಿಂದೂ ಸಂವಿಧಾನದ ಹೇಳಿಕೆ ನೀಡಿದ ಸ್ವಾಮೀಜಿಯ ವಿರುದ್ಧ ಕೂಡಲೇ ದೇಶದ್ರೋಹ ಪ್ರಕರಣ ದಾಖಲಿಸಿ, ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಪ್ರದೀಪ ನಾಟೇಕರ್ ಒತ್ತಾಯಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...