ದಿಲ್ಲಿ ಪೊಲೀಸರಿಂದ ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಅಕ್ರಮ ಬಂಧನಕ್ಕೆ ಯತ್ನ: ಎಪಿಸಿಆರ್ ಖಂಡನೆ

Date:

ಅಸೋಸಿಯೇಷನ್‌ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ರಾಷ್ಟ್ರೀಯ ಕಾರ್ಯದರ್ಶಿ ನದೀಮ್ ಖಾನ್ ಅವರನ್ನು ಅಕ್ರಮ ಬಂಧನಕ್ಕೆ ಯತ್ನಿಸಿರುವ ದೆಹಲಿ ಪೊಲೀಸರ ನಡೆಯನ್ನು ಎಪಿಸಿಆರ್ ಕರ್ನಾಟಕ ಘಟಕ ತೀವ್ರವಾಗಿ ಖಂಡಿಸಿದೆ.

ಸಂಪಿಗೆಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ನದೀಮ್ ಅವರ ಸಹೋದರ ಕಾಶಿಫ್ ಖಾನ್ ನಿವಾಸಕ್ಕೆ ಅಕ್ರಮ ದಾಳಿ, ಕಿರುಕುಳ ಮತ್ತು ನದೀಮ್ ಖಾನ್‌ ಅವರನ್ನು ಅಕ್ರಮ ಬಂಧನಕ್ಕೆ ಯತ್ನಿಸಿರುವ ನಡೆ ಖಂಡನೀಯ. ದಿಲ್ಲಿ ಪೊಲೀಸ್‌ ಅಧಿಕಾರಿಗಳ ವಿರುದ್ಧ ಈಗಾಗಲೇ ಕುಟುಂಬಸ್ಥರು ನೀಡಿರುವ ದೂರನ್ನು ಪರಿಗಣಿಸಿ, ಬೆಂಗಳೂರು ಪೊಲೀಸರು ಎಫ್‌ಐಆ‌ರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಪಿಸಿಆರ್ಕ ರ್ನಾಟಕ ಘಟಕದ ಅಧ್ಯಕ್ಷ ಅಡ್ವೊಕೇಟ್ ಪಿ. ಉಸ್ಮಾನ್ ಮತ್ತು ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಿಯಾಝ್ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು, “ದಿಲ್ಲಿ ಪೊಲೀಸರ ಕ್ರಮ ಕಾನೂನುಬಾಹಿರ, ಅಕ್ರಮವಾದದ್ದು. ಸಂವಿಧಾನದ 14,19 ಮತ್ತು 21ನೇ ವಿಧಿಗಳಲ್ಲಿನ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಖಾನ್ ಅವರು ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿರುವ ಕಾರಣ ಪೊಲೀಸರು ಅವರನ್ನು ಗುರಿಯಾಗಿಸಿದ್ದಾರೆ. ಕರ್ನಾಟಕ ಸರ್ಕಾರವು ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದಿಲ್ಲಿ ಪೊಲೀಸ್‌ ಅಧಿಕಾರಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಪೊಲೀಸರಿಗೆ ಯಾವುದೇ ಸೂಚನೆ ನೀಡದೆ ನಡೆಸಿದ ದಾಳಿಯು ‘ಅರ್ನೇಶ್ ಕುಮಾರ್ vs ಬಿಹಾರ’ ಮತ್ತು ‘ಸಿದ್ಧಾರ್ಥ್ vs ಉತ್ತರ ಪ್ರದೇಶ’ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ. ಶಾಹೀನ್ ಬಾಗ್ ಪೊಲೀಸ್ ಠಾಣೆಯ ಎಸ್‌ಎಚ್‌ಓ ಹಾಗೂ ಸಿಬ್ಬಂದಿ ಸೇರಿದಂತೆ ದಿಲ್ಲಿ ಪೊಲೀಸ್ ಅಧಿಕಾರಿಗಳು ನದೀಮ್ ಸಹೋದರನ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಕುಟುಂಬವನ್ನು ಬೆದರಿಸಿದ್ದಾರೆ ಎಂದು ಎಪಿಸಿಆರ್ ದೂರಿದೆ.

ದಿಲ್ಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ವಿರುದ್ಧ ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 196, 353(2) ಮತ್ತು 61ರ ಅಡಿಯಲ್ಲಿ ದಾಖಲಾದ ಪ್ರಕರಣವು ಕಟ್ಟುಕಥೆಯಾಗಿದೆ. ಕ್ರಿಮಿನಲ್ ತನಿಖೆಯ ನೆಪದಲ್ಲಿ ಉತ್ತರ ಪ್ರದೇಶ, ಸೇರಿದಂತೆ ಇತರ ರಾಜ್ಯಗಳಲ್ಲಿ ಆರೋಪಿಗಳ ಮನೆಗಳನ್ನು ಅಕ್ರಮವಾಗಿ ಕೆಡವುದನ್ನು ವಿರೋಧಿಸಿದ್ದರಿಂದ ಈ ರೀತಿ ಅವರ ಮೇಲೆ ಆರೋಪ ಹೊರಿಸಲಾಗಿದೆ ಎಂದು ಅಸೋಸಿಯೇಷನ್‌ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಹೇಳಿಕೊಂಡಿದೆ.

ಇದನ್ನು ಓದಿದ್ದೀರಾ? ಎಸ್‌ಐಓ ಕರ್ನಾಟಕ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಆದಿ ಅಲ್ ಹಸನ್ ಆಯ್ಕೆ

ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ನದೀಮ್ ಖಾನ್ ದಿಲ್ಲಿ ಪೊಲೀಸರು ಆಗಮಿಸಿದಾಗ ತನ್ನ ಸಹೋದರನ ನಿವಾಸದಲ್ಲಿದ್ದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತರು, ವಕೀಲರು ಮತ್ತು ಮಾನವ ಹಕ್ಕುಗಳ ಸಂಘಟನೆಗಳ ಮಧ್ಯಪ್ರವೇಶದ ಹೊರತಾಗಿಯೂ, ಅಧಿಕಾರಿಗಳು ಸರಿಯಾದ ದಾಖಲೆಗಳನ್ನು ಪ್ರಸ್ತುತಪಡಿಸದೆ, ಸ್ಥಳೀಯ ಪೊಲೀಸರ ಅನುಮತಿಯನ್ನು ಪಡೆಯದೆ ನದೀಮ್ ಖಾನ್‌ ಅವರನ್ನು ಅಕ್ರಮವಾಗಿ ಬಂಧಿಸಲು ಮುಂದಾಗಿದ್ದಾರೆ. ದಿಲ್ಲಿ ಪೊಲೀಸರ ವಿರುದ್ಧ ಕಾಶಿಫ್ ಖಾನ್ ಅತಿಕ್ರಮಣ, ಕಿರುಕುಳ ಮತ್ತು ಬೆದರಿಕೆ ಆರೋಪದಲ್ಲಿ ಪ್ರಕರಣವನ್ನು ಕೂಡ ದಾಖಲಿಸಿದ್ದಾರೆ ಎಂದು ಎಪಿಸಿಆರ್ ಹೇಳಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...