ಬೀದರ್‌ | ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಬಿ.ಎಂ.ಅಮರವಾಡಿ ನೇಮಕ

Date:

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರನ್ನಾಗಿ ಬಿ.ಎಂ.ಅಮರವಾಡಿ ಅವರನ್ನು ನೇಮಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ. 

ʼಕನ್ನಡ ಸಾಹಿತ್ಯ ಪರಿಷತ್ತಿನ ಹಿಂದಿನ ಅಧ್ಯಕ್ಷರಾಗಿದ್ದ ಡಾ.ಶಾಲಿವಾನ ಉದಗಿರೆ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನಾಗಿ ಅಮರವಾಡಿ ಅವರನ್ನು ನೇಮಿಸಲಾಗಿದ್ದು, ನಿಕಟಪೂರ್ವ ಅಧ್ಯಕ್ಷ ಶಾಲಿವಾನ‌ ಉದಗೀರೆ ಅವರು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕ್ರಿಯಾಶೀಲರಾಗಿ ಅನೇಕ ಕನ್ನಡ ಕಾರ್ಯಚಟುವಟಿಕೆಗಳನ್ನು ಸಂಘಟಿಸಿದ್ದಾರೆʼ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼವೃತ್ತಿಯಲ್ಲಿ ಶಿಕ್ಷಕರಾದ ಬಿ.ಎಂ.ಅಮರವಾಡಿ ಅವರು ಸ್ವತಃ ಸಾಹಿತಿಗಳಾಗಿದ್ದು, ಹಲವು ವರ್ಷಗಳಿಂದ ಸಾಹಿತ್ಯ, ಸಾಂಸ್ಕೃತಿಕ ಸಂಘಟಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದಿನ ಎರಡು ಅವಧಿಗೆ ಔರಾದ ತಾಲ್ಲೂಕಿನ ಕಸಾಪ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ ಶ್ರೇಯಸ್ಸು ಅವರದಾಗಿದೆʼ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಡಿ ಭಾಗದಲ್ಲಿ ಅನೇಕ ವರ್ಷಗಳಿಂದ ನಾಡು-ನುಡಿಯ ನಿಷ್ಠಾವಂತ ಸೇವಕರಾಗಿ ಕವಿ, ಸಾಹಿತಿಗಳಾಗಿ ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇವರ ಸೇವೆ, ಸಾಧನೆಗಳನ್ನು ಗುರುತಿಸಿ ಬೀದರ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ, ಜಿಲ್ಲಾ ಕಸಾಪ ವತಿಯಿಂದ ಬೀದರ ಜಿಲ್ಲಾ ಪ್ರಥಮ ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿ ಕಸಾಪ ಗೌರವಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೀದರ್ ಲೋಕಸಭಾ ಕ್ಷೇತ್ರಕ್ಕೆ 50,380 ಮನೆ ಮಂಜೂರು : ಸಂಸದ ಸಾಗರ್‌ ಖಂಡ್ರೆ

ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅಮರವಾಡಿಯವರನ್ನ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಸದರಿಯವರು ಹುದ್ದೆಯನ್ನು ಸ್ವೀಕರಿಸಿ ಕಾರ್ಯ ಪ್ರವೃತ್ತರಾಗಲು ಜಿಲ್ಲಾ ಕಸಾಪ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...