ಉಡುಪಿ | ಸಮಸಮಾಜ ನಿರ್ಮಾಣದ ದೃಢ ಸಂಕಲ್ಪದ ಚಳುವಳಿ SDPI – ಅಪ್ಸರ್ ಕೊಡ್ಲಿಪೇಟೆ

Date:

ಉಡುಪಿ ಜಿಲ್ಲೆಯ ಕುಂದಾಪುರದ ಶರೋನ್ ಹೋಟೆಲ್ ಸಭಾಂಗಣದಲ್ಲಿ “ಪ್ರಸಕ್ತ ಕಾಲಘಟ್ಟದಲ್ಲಿ ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು” ಎಂಬ ಮಹತ್ವದ ವಿಷಯದ ಕುರಿತು ವಿಶೇಷ ವಿಚಾರ ಸಂಕಿರಣವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ ಕೊಡ್ಲಿಪೇಟೆ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಜನತೆಯ ನಂಬಿಕೆಗೆ ಪಾತ್ರವಾಗುವ, ನೈತಿಕತೆಯ ಅಡಿಪಾಯದ ಮೇಲೆ ನಿಂತ ಹೊಸ ರಾಜಕೀಯ ಚಳುವಳಿ ನಿರ್ಮಾಣದ ಅಗತ್ಯತೆಯನ್ನು ಒತ್ತಿಹೇಳಿದರು.

1006399904

ಧರ್ಮಾಧಾರಿತ ರಾಜಕಾರಣ, ಬಂಡವಾಳಶಾಹಿ ಹಾಗೂ ಮತಬ್ಯಾಂಕ್ ರಾಜಕೀಯಗಳು ಪ್ರಬಲವಾಗುತ್ತಿರುವ ಇಂದು, ತಳಮಟ್ಟದ ಸಮುದಾಯಗಳಲ್ಲಿ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಧರ್ಮನಿರಪೇಕ್ಷತೆಯನ್ನು ಕೇವಲ ಘೋಷಣೆಗಳಲ್ಲದೆ ನೈಜವಾಗಿ ಅನುಷ್ಠಾನಗೊಳಿಸುವ ಪರ್ಯಾಯ ರಾಜಕೀಯ ಚಳುವಳಿಗೆ ಬಲ ನೀಡುವುದು ಬಹಳ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಚರ್ಚೆಯ ಪ್ರಭಾವದಿಂದ ಪ್ರೇರಿತವಾಗಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವಾರು ಉತ್ಸಾಹಿ ಯುವಕರು ಮತ್ತು ಹಿರಿಯರು ಎಸ್‌ಡಿಪಿಐ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ರಾಜ್ಯ ಪ್ರದಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಯವರು ಸಮ್ಮುಖದಲ್ಲಿ ಪಕ್ಷದ ಅಧಿಕೃತ ಸದಸ್ಯತ್ವವನ್ನು ಸ್ವೀಕರಿಸಿದರು. ಇಂತಹ ಚಟುವಟಿಕೆಗಳು ಪಕ್ಷದ ಮೌಲ್ಯಾಧಾರಿತ ಹೋರಾಟಕ್ಕೆ ಹೊಸ ಉತ್ಸಾಹ ನೀಡುತ್ತವೆ ಹಾಗೂ ಮುಂದಿನ ತಲೆಮಾರಿಗೆ ನವ ದಿಕ್ಕು ನೀಡುತ್ತವೆ. ಎಸ್‌ಡಿಪಿಐ ಕೇವಲ ರಾಜಕೀಯ ಆಯ್ಕೆಯಾಗಿ ಅಲ್ಲ, ಅದು ತಾರತಮ್ಯವಿಲ್ಲದ, ಸಮಸಮಾಜ ನಿರ್ಮಾಣದ ದೃಢ ಸಂಕಲ್ಪದ ಚಳುವಳಿಯಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಎಸ್‌ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಹನೀಫ್ ಮೂಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್, ಗಂಗೊಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ತಬ್ರೇಜ್, ಕಂಡ್ಲೂರು ಗ್ರಾಮ ಪಂಚಾಯಿತಿ ಸದಸ್ಯ ಸುಹೇಲ್ ಮತ್ತಿತರ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...