ಅರಸೀಕೆರೆ | ಕುರಿಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

Date:

ಕುರಿಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದಲ್ಲಿ ನಡೆದಿದೆ.

ಉಂಡಿಗನಾಳು ಗ್ರಾಮದ ಗಿರೀಶ್ ಅವರ ಪುತ್ರ ಸೃಜನ್(13) ಹಾಗೂ ಶಿವಕುಮಾರ್ ಅವರ ಪುತ್ರ ವಿಜಯ್ ಕುಮಾರ್(13) ಕೆರೆಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳು.

ಈ ಇಬ್ಬರೂ ವಿದ್ಯಾರ್ಥಿಗಳು ಉಂಡಿಗನಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶನಿವಾರ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕನಕದಾಸ ಜಯಂತಿಯ ಕಾರ್ಯಕ್ರಮವನ್ನು ಮುಗಿಸಿಕೊಂಡು ಮನೆಗೆ ಹಿಂದಿರುಗಿ ಬಂದಿದ್ದರು. ಬಳಿಕ, ಮನೆಯಲ್ಲಿ ಸಾಕಿದ್ದ ಕುರಿಗಳನ್ನು ಕೆರೆಯಲ್ಲಿ ಮೈತೊಳೆದುಕೊಂಡು ಬರುವುದಾಗಿ ಹೇಳಿ ಈ ಇಬ್ಬರೂ ವಿದ್ಯಾರ್ಥಿಗಳು ಉಂಡಿಗನಾಳು ಗ್ರಾಮದ ಹೊಸಳ್ಳಿ ಕೆರೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಬಾಹುಬಲಿ ಮೂರ್ತಿ ವಿಶ್ವಕ್ಕೇ ಶಾಂತಿ ಸಂದೇಶ ಸಾರುವ ಸಂಕೇತ: ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್

ಶಾಸಕ ಹುಲ್ಲಳ್ಳಿ ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳನ್ನು ಕಳೆದುಕೊಂಡು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ವಿದ್ಯಾರ್ಥಿಗಳು ಕೆರೆಗೆ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಮೃತ ದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಈ ಸಂದರ್ಭದಲ್ಲಿ ಅರಸೀಕೆರೆ ತಹಶೀಲ್ದಾರ್ ಸಂತೋಷ್ ಕುಮಾರ್ ಸ್ಥಳದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...