ಭಾರತೀಯ ಕೆಥೋಲಿಕ್ ಧರ್ಮಾಧ್ಯಕ್ಷರುಗಳ ಸಮ್ಮೇಳನ: ಉಪಾಧ್ಯಕ್ಷರಾಗಿ ಬೆಂಗಳೂರು ಆರ್ಚ್‌ ಡಯಾಸೀಸ್‌ನ ಡಾ. ಪೀಟರ್ ಮಚಾದೊ ಆಯ್ಕೆ

Date:

ಬೆಂಗಳೂರಿನ ಪ್ರಾಂತೀಯ ಮಹಾ ಧರ್ಮಾಧ್ಯಕ್ಷರಾದ ವಂದನೀಯ ಡಾ. ಪೀಟರ್ ಮಚಾದೊ ರವರು, ಭುಬನೇಶ್ವರದ ವಿಶ್ವವಿದ್ಯಾನಿಲಯಲ್ಲಿ ನಡೆಯುತ್ತಿರುವ 36ನೇ ಸಿಸಿಬಿಐನ ಸಾರ್ವತ್ರಿಕ ಸಭೆಯಲ್ಲಿ ಭಾರತೀಯ ಕೆಥೋಲಿಕ್ ಧರ್ಮಾಧ್ಯಕ್ಷರುಗಳ ಸಮ್ಮೇಳನದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಬೆಂಗಳೂರಿನ ಆರ್ಚ್‌ ಡಯಾಸೀಸ್‌ ತಿಳಿಸಿದೆ.

ಜನವರಿ 28ರಂದು ಪ್ರಾರಂಭವಾಗಿರುವ ಸಿಸಿಬಿಐನ ಸಾರ್ವತ್ರಿಕ ಸಭೆಯು ಫೆಬ್ರವರಿ 4ರಂದು ಮುಕ್ತಾಯಗೊಳ್ಳಲಿದೆ. ಸಮ್ಮೇಳನವು ಕಾರ್ಡಿನಲ್ ಫೆಲಿಪೆ ನೇರಿ ಫೆರೊರವರನ್ನು ಅಧ್ಯಕ್ಷರನ್ನಾಗಿ ಮರು ಚುನಾಯಿಸಿತು. ಅದೇ ವೇಳೆಯಲ್ಲಿ ರಾಂಚಿಯ ಮಹಾ ಧರ್ಮಾಧ್ಯಕ್ಷರಾದ ವಿನ್ಸೆಂಟ್ ಐಂಡ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

WhatsApp Image 2025 02 04 at 12.53.13 PM

ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾದೋ(70) ಮೇ 26, 1954 ರಂದು ಜನಿಸಿದ್ದು, ಡಿಸೆಂಬರ್ 8, 1978 ರಂದು ಕಾರವಾರ ಧರ್ಮಕ್ಷೇತ್ರದಲ್ಲಿ ಯಾಜಕ ದೀಕ್ಷೆಯನ್ನು ಸ್ವೀಕರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಮ್‌ನ ಪಾಂಟಿಫಿಕಲ್ ಅರ್ಬನ್ ವಿಶ್ವವಿದ್ಯಾಲಯದಿಂದ ‘ಧರ್ಮಸಭೆಯ ಕಾನೂನುಗಳಲ್ಲಿ’ ಉನ್ನತ ಶಿಕ್ಷಣವನ್ನು ಮುಗಿಸಿ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಅವರ ಪಾಲನಾ ಸೇವೆಯ ಪ್ರಯಾಣದಲ್ಲಿ ಅವರನ್ನು ಫೆಬ್ರವರಿ 2, 2006 ರಂದು ಬೆಳಗಾವಿಯ ಧರ್ಮಾಧ್ಯಕ್ಷರನ್ನಾಗಿ ನೇಮಿಸಲಾಯಿತು ಮತ್ತು ನಂತರ ಮಾರ್ಚ್ 19, 2018 ರಂದು ಬೆಂಗಳೂರಿನಲ್ಲಿ ಮಹಾಧರ್ಮಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಇದನ್ನು ಓದಿದ್ದೀರಾ? ಮಂಗಳೂರು | ಇಡಿ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಗೆ ದಾಳಿ ಪ್ರಕರಣ: ಮತ್ತೋರ್ವನ ಬಂಧನ

ಮೇ 31, 2018 ರಂದು ಮಹಾಧರ್ಮಾಧ್ಯಕ್ಷರ ಧರ್ಮಾಧ್ಯಕ್ಷೀಯ ದೀಕ್ಷೆಯನ್ನು ಸ್ವೀಕರಿಸಿದ್ದ ಅವರು, ಕರ್ನಾಟಕ ಪ್ರಾದೇಶಿಕ ಧರ್ಮಾಧ್ಯಕ್ಷರುಗಳ ಮಂಡಳಿಯ ಅಧ್ಯಕ್ಷರಾಗಿಯೂ (KRCBC), ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹೂಮನ್ ರೈಟ್ಸ್ (AKUCFHR) ಅಧ್ಯಕ್ಷರಾಗಿಯೂ ಮತ್ತು ಶ್ರೀಸಾಮಾನ್ಯರ ಆಯೋಗದ ಸಿಸಿಬಿಐನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಬೆಂಗಳೂರಿನ ಆರ್ಚ್‌ ಡಯಾಸೀಸ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ ಜೆ ಎ ಕಾಂತರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...