ಕಲಬುರಗಿ | ಕಟ್ಟಿಗೆಯಿಂದ ಹೊಡೆದು ತಾಯಿಯನ್ನೇ ಕೊಂದ ಮಗನ ಬಂಧನ

Date:

ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಮಗ ತಾಯಿಯನ್ನೇ ಬಡಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾಜೋಳ ಗ್ರಾಮದಲ್ಲಿ ನಡೆದಿದೆ.

ದೇವಕಮ್ಮ ದೊಡ್ಡಬೀರಪ್ಪ ಪೂಜಾರಿ (70) ಕೊಲೆಯಾದವರು, ಮಗ ಜಟ್ಟೆಪ್ಪ ದೊಡ್ಡಬೀರಪ್ಪ ಪೂಜಾರಿ ಕೊಲೆ ಆರೋಪಿ ಎಂದು ತಿಳಿದು ಬಂದಿದೆ.

ʼದೇವಕಮ್ಮ ಎರಡು ದಿನಗಳ ಹಿಂದೆ ಮಗಳ ಊರು ಲಕ್ಷ್ಮೀಪುರವಾಡಿಗೆ ಹೋಗಿ ಅ.18 ರಂದು ರಾಜೋಳ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಮಗ ಜಟ್ಟೆಪ್ಪ ಪೂಜಾರಿ ʼಊರಿಗೆ ಏಕೆ ಹೋಗಿದ್ದಿ, ನನಗೆ ಹೊಟ್ಟೆ, ಬಟ್ಟೆ ಯಾರು ನೋಡಬೇಕುʼ ಎಂದು ಕೋಪಿಸಿಕೊಂಡು ಬಡಿಗೆಯಿಂದ ತಾಯಿಗೆ ಹೊಡೆದಿದ್ದಾನೆ. ಭಯದಿಂದ ದೇವಕಮ್ಮ ಹೊರಗಡೆ ಓಡಿ ಹೋಗುವಾಗ ಬೆನ್ನಟ್ಟಿ ಕಟ್ಟಿಗೆಯಿಂದ ಹೊಡೆದು ಸಾಯಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

12 ವರ್ಷಗಳ ಹಿಂದೆ ಮದುವೆಯಾದ ಜಟ್ಟೆಪ್ಪ ಪೂಜಾರಿ ಪತ್ನಿಗೆ ದಿನಾಲೂ ಜಗಳವಾಡಿ ಕಿರುಕುಳ ನೀಡುತ್ತಿದ್ದ, ಹೀಗಾಗಿ ಪತ್ನಿ 4-5 ವರ್ಷಗಲಿಂದ ಮಕ್ಕಳನ್ನು ಕರೆದುಕೊಂಡು ತವರು ಗ್ರಾಮ ಹಂದರಕಿಯಲ್ಲಿ ವಾಸವಾಗಿದ್ದಾರೆ. ಆವಾಗಿನಿಂದ ಮನೆಯಲ್ಲಿ ಜಟೆಪ್ಪ ತಾಯಿ ದೇವಕಮ್ಮ ಜೊತೆಗೆ ವಾಸವಾಗಿದ್ದರು.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಅಬ್ಬರ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಈ ಸಂಬಂಧ ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್‍ಐ ಚಂದ್ರಾಮಪ್ಪ ನೇತ್ರತ್ವದ ತಂಡ ತನಿಖೆ ನಡೆಸಿ ಪ್ರಕರಣ ದಾಖಲಾದ 6 ಗಂಟೆಯೊಳಗೆ ಆರೋಪಿ ಜಟ್ಟೆಪ್ಪನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...