ಬೀದರ್‌ | ಕಲೆ, ಸಾಹಿತ್ಯ, ಸಂಸ್ಕೃತಿ ಮಾನವನ ಅವಿಭಾಜ್ಯ ಅಂಗ : ಸಿಪಿಐ ವಿಜಯಕುಮಾರ

Date:

ಕಲೆ, ಸಾಹಿತ್ಯ, ಸಂಸ್ಕೃತಿ ಅನಾದಿ ಕಾಲದಿಂದಲೂ ಮಾನವರ ಬದುಕಿನ ಏಳಿಗೆಯ ಅವಿಭಾಜ್ಯ ಅಂಗವಾಗಿವೆ ಎಂದು ಬೀದರ ನೂತನ ನಗರ ಪೊಲೀಸ್ ಠಾಣೆಯ ಸಿಪಿಐ ವಿಜಯಕುಮಾರ ಬಾವಗಿ ಹೇಳಿದರು.

ಬೀದರ್‌ ನಗರದಲ್ಲಿ ಅಂಬಿಗರ ಚೌಡಯ್ಯ ಯುವ ಸೇನೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 2020-21ನೇ ಸಾಲಿನ ಸಾಮಾನ್ಯ ಧನ ಸಹಾಯ ಯೋಜನೆಯಡಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಯುವ ಸಮೂಹ ಕನ್ನಡ ಭಾಷೆ, ಸಾಹಿತ್ಯ ಬಗ್ಗೆ ಹೆಚ್ಚಿನ ಒಲವು ಬೆಳೆಸಿಕೊಳ್ಳಬೇಕು. ಯುವಕರಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸುವ ಕಾರ್ಯಕ್ರಮಗಳು ರೂಪಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯ ಶ್ಲಾಘನೀಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವಕುಮಾರ ಕಟ್ಟೆ ಮಾತನಾಡಿ, ʼಹೆಚ್ಚು ಪುಸ್ತಕ ಓದುವುದರಿಂದ ವಿದ್ಯಾರ್ಥಿಗಳಿಗೆ ಸಾಹಿತ್ಯದ ಆಸಕ್ತಿ ಮೂಡಲು ಸಾಧ್ಯವಿದೆ. ಪುಸ್ತಕ ಅಧ್ಯಯನದಿಂದ ಯುವ ಸಮುದಾಯ ಪ್ರಜ್ಞಾವಂತರಾಗುತ್ತಾರೆ. ದೇಶದ ಬಹುತ್ವ ಸಂಸ್ಕೃತಿ ಮರೆತು ಪಾಶ್ಚಾತ್ಯ ಕಡೆಗೆ ಮಾರುಹೋಗುತ್ತಿರುವುದು ಖೇದಕರ ಸಂಗತಿʼ ಎಂದು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯ ವಿಜಯಕುಮಾರ ಸೋನಾರೆ ಮಾತನಾಡಿ, ʼಗ್ರಾಮೀಣ ಪ್ರದೇಶದಲ್ಲಿ ನಶಿಸಿಹೋಗುತ್ತಿರುವ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿನೂತನ ಯೋಜನೆಗಳು ಜಾರಿಗೆ ತಂದಿದೆ. ನಗರ ಮತ್ತು ಗ್ರಾಮೀಣ ಭಾಗದ ಜಾನಪದ ಕಲಾವಿದರು ಇದರ ಲಾಭ ಪಡೆದುಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಜಾನಪದ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ಅವರು ಭಾವಗೀತೆ ಗಾಯನ ನಡೆಸಿಕೊಟ್ಟರು. ಕು.ತ್ರಿಶಾ ಭರತ ನಾಟ್ಯ ಪ್ರದರ್ಶನ, ನರಸಿಂಹಲು ಡಪ್ಪುರ್ ಭಕ್ತಿ ಗೀತೆ, ಶಿವಕುಮಾರ ಪಾಂಚಾಳ ತಂಡದಿಂದ ವಚನ ಗಾಯನ, ದೀಲಿಪ್ ಕಾಡವಾದ ತಂಡದಿಂದ ಸುಗಮ ಸಂಗೀತ, ಶಂಕರ ಚೊಂಡಿ ತಂಡದಿಂದ ಹಂತಿ ಪದ ಹಾಗೂ ಯೇಸುದಾಸ್ ಅಲಿಯಂಬರ ಅವರಿಂದ ಗೊಂಬೆ ಕುಣಿತ, ದೇವದಾಸ ಚಿಮಕೋಡೆ ಅವರಿಂದ ಗೀಗಿಪದ, ಕಲ್ಲಮ್ಮ ಹಳ್ಳದಕೇರಿ ತಂಡದಿಂದ ಜೋಕುಮಾರ ಸ್ವಾಮಿ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದವರನ್ನು ಮನರಂಜಿಸಿದವು.

ಈ ಸುದ್ದಿ ಓದಿದ್ದೀರಾ? ಭಗತ್‌ ಸಿಂಗ್‌ ಯುವ ಜನಾಂಗದ ಕ್ರಾಂತಿಯ ಚಿಲುಮೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುನೀಲ ಭಾವಿಕಟ್ಟಿ, ಎಸ್ಸಿ,ಎಸ್ಟಿ ಪತ್ರಿಕೆಗಳ ರಾಜ್ಯ ಮಟ್ಟದ ಸಲಹಾ ಸಮಿತಿ ಸದಸ್ಯ ಪೃಥ್ವಿರಾಜ್ ಎಸ್, ಅಲಿಯಂಬರ್  ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಾಯಿ ಚೈತನ್ಯ ಸಂಜೀವಕುಮಾರ ಸೇರಿದಂತೆ ಪ್ರಮುಖರಾದ ಶ್ರೀಮಂತ ಸಪಾಟೆ, ಆನಂದ ಗುಪ್ತಾ, ಅನೀಲ ಮಚಕುರೆ ಇದ್ದರು. ಅಂಬಿಗರ ಚೌಡಯ್ಯ ಯುವ ಸೇನೆಯ ಜಿಲ್ಲಾಧ್ಯಕ್ಷ ಚಂದ್ರಕಾಂತ ಹಳ್ಳಿಖೇಡಕರ್ ಸ್ವಾಗತಿಸಿ, ನಿರೂಪಿಸಿದರು, ಅಂಬ್ರೀಷ ಮಲ್ಲೇಶಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...