ಮೈಸೂರು | ಮೃಗಾಲಯದ ಪ್ರಾಣಿ, ಪಕ್ಷಿಗಳಿಗೆ ಕೃತಕವಾಗಿ ತಂಪನ್ನೆರೆಯುವ ವ್ಯವಸ್ಥೆ

Date:

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಪ್ರಾಣಿ, ಪಕ್ಷಿಗಳಿಗೆ ಕೃತಕವಾಗಿ ತಂಪನ್ನೆರೆಯುವ ವ್ಯವಸ್ಥೆ ಕೈಗೊಳ್ಳಲಾಗಿದೆ.

ಫೆಬ್ರವರಿ ತಿಂಗಳಿನ ಮೊದಲಾರ್ದ ವಾರಗಳಿಂದಲೇ ಬಿಸಿಲಿನ ಝಳ ಹೆಚ್ಚಿದ್ದು, ಉರಿ ಬಿಸಿಲಿನ ಬಿಸಿ ತಟ್ಟಿದ್ದೆ. ಈಗಂತೂ ಮೈಕೊಡಲು ಸಾಧ್ಯವಿಲ್ಲ ಅನ್ನುವಷ್ಟು ತಾಪ ಹೆಚ್ಚಿರುವುದರಿಂದ ಮೃಗಾಲಯದ ಪ್ರಾಣಿ, ಪಕ್ಷಿಗಳಿಗೆ ಕೃತಕವಾಗಿ ತಂಪನ್ನೆರೆಯುವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಸಿಬ್ಬಂದಿಗಳು ಜೆಟ್ ಅಳವಡಿಸಿ ಸ್ಪ್ರಿಂಕ್ಲರ್ ಮೂಲಕ ನೀರನ್ನು ಮಳೆಯ ಮಾದರಿಯಲ್ಲಿ ಚಿಮುಕಿಸಿ ತಂಪಿನ ವಾತಾವರಣ ನಿರ್ಮಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃಗಾಲಯದ 45 ಕಡೆ ಸ್ಪ್ರಿಂಕ್ಲರ್ ಮೂಲಕ ಸುಮಾರು ನೂರಾರು ಮೀಟರ್ ಗಳಷ್ಟು ದೂರ ನೀರು ಚಿಮ್ಮುವಂತೆ ಮಾಡಿ ಪ್ರಾಣಿಗಳು ಮೈ ಒಡ್ದುವಂತೆ, ಸುತ್ತಲ ಪರಿಸರ ತಂಪಾಗುವಂತೆ ಕ್ರಮ ಕೈಗೊಂಡು.ಪ್ರಾಣಿಗಳಿಗೆ ನೀಡುವ ಆಹಾರದಲ್ಲಿ ಕಲ್ಲಂಗಡಿ, ಐಸ್ ನಲ್ಲಿರಿಸಿದ ಹಣ್ಣುಗಳನ್ನು ನೀಡಿ ದೇಹ ತಂಪಾಗಿರುವಂತೆ ನಿಗಾ ವಹಿಸಲಾಗಿದೆ.

ಮೃಗಾಲಯದಲ್ಲಿನ ಆನೆ, ಸಿಂಹ, ಹುಲಿ, ಕರಡಿ, ಗೊರಿಲ್ಲ, ಜೀಬ್ರಾ, ಜಿರಾಫೆ ಸೇರಿದಂತೆ ಪ್ರಾಣಿಗಳಿಗೆ ಬಿಸಿಲಿನ ತಾಪ ತಟ್ಟದ ರೀತಿ ವ್ಯವಸ್ಥೆ ಸಿದ್ದವಾಗಿದ್ದು, ಸುತ್ತಲಿನ ಉದ್ಯಾನವನ ಒಣಗದಂತೆ ನೋಡಿಕೊಳ್ಳಲಾಗುತಿದೆ. ಇದರಿಂದ ಪ್ರಾಣಿಗಳಸ್ಟೇ ಅಲ್ಲದೆ ಮೃಗಾಲಯ ವೀಕ್ಷಣೆಗೆ ಬರುವ ಪ್ರವಾಸಿಗರಿಗೂ ಅನುಕೂಲವಾಗಿದೆ.

ಮೃಗಾಲಯ ನಿರ್ವಾಹಕ ಅಧಿಕಾರಿ ರಂಗಸ್ವಾಮಿ ಮಾತನಾಡಿ “ರಾಜ್ಯದಲ್ಲೂ ಹಕ್ಕಿ ಜ್ವರದ ಭೀತಿ ಇರುವುದರಿಂದ ಮೃಗಾಲಯದಲ್ಲಿ ಕಟ್ಟೆಚ್ಚರ ವಹಿಸಿದ್ದು,ಪಕ್ಷಿಗಳಿಗೆ ಯಾವುದೇ ತೊಂದರೆ ಆಗದಂತೆ ತೀವ್ರ ನಿಗಾ ವಹಿಸಲಾಗಿದೆ. ಪ್ರಾಣಿ ಪಾಲಕರು ಒಂದು ಪಕ್ಷಿ ಮನೆಯಿಂದ ಇನ್ನೊಂದು ಮನೆಗೆ ಹೋಗುವಂತಿಲ್ಲ. ಅಗತ್ಯವಾದ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಪಕ್ಷಿಗಳ ಇಕ್ಕೆ ಸಂಗ್ರಹಿಸಿ ಪ್ರಯೋಗ ಶಾಲೆಗೆ ಕಳಿಸಿಕೊಡಲಾಗಿದೆ. ನಮ್ಮಲ್ಲಿ ಅಂತಹ ಪ್ರಕರಣಗಳು ಇಲ್ಲಿವರೆಗೂ ಕಂಡು ಬಂದಿಲ್ಲ. ಮಾಂಸಾಹಾರಿ ಪ್ರಾಣಿಗಳಿಗೆ ತರುವ ಚಿಕನ್, ಮಾಂಸವನ್ನು ಪೊಟಾಷಿಯಂ ಪರಮೋನೈಟ್ ನಿಂದ ತೊಳೆದು ಕೊಡಲಾಗುತ್ತದೆ. ರೋಗಗ್ರಸ್ತ ಕೋಳಿ ಮಾಂಸ ಕೊಡುವುದಿಲ್ಲ. ನಮ್ಮಲ್ಲಿರುವ ಪಕ್ಷಿಗಳಿಗೆ ಯಾವುದೇ ರೋಗ ರುಜಿನಗಳು ಕಂಡು ಬಂದಿಲ್ಲ.

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಜಿಂಕೆ,ಕಡವೆಗಳಿಗೆ ಅಲ್ಲಲ್ಲಿ ನೀರಿನ‌ ಕೊಳ,ಕೆಸರಿನ ಕೊಳಗಳ ನಿರ್ಮಾಣ ಮಾಡಲಾಗಿದೆ ನೆರಳಿಗೆ ಆಶ್ರಯಕ್ಕೆ ಶೆಡ್ ನಿರ್ಮಾಣ ಮಾಡಲಾಗಿದೆ. ಒಟ್ಟಾರೆ ಬೇಸಿಗೆ ನಿರ್ವಹಣೆಯನ್ನ ಸಮರ್ಪಕವಾಗಿ ನಿರ್ವಹಣೆ ಮಾಡುವ ಕೆಲಸವನ್ನ ನಮ್ಮ ಸಿಬ್ಬಂದಿಗಳ ಮಾಡುತ್ತಿದ್ದಾರೆ. ಮಾರ್ಚ್ ತಿಂಗಳು ಶಾಲಾ ಕಾಲೇಜುಗಳ ಪರೀಕ್ಷಾ ಸಮಯವಾಗಿದ್ದು, ಪ್ರವಾಸಿಗರಿಲ್ಲದೆ ಬಣ ಗುಡುತ್ತಿರುವ ಮೈಸೂರಿನ ಮೃಗಾಲಯ. ಫೆಬ್ರವರಿ, ಮಾರ್ಚ್ ನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಪರೀಕ್ಷೆ ಮುಗಿದು ರಜಾ ದಿನಗಳ ಆರಂಭದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...