ಗೋಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲಾಗಲು ಸತತ 228 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಲಿರುವ ಹಾಸನಿ

Date:

ಭರತನಾಟ್ಯ ಭಾರತೀಯ ಸಾಂಸ್ಕೃತಿಕ ಕಲೆಯಾಗಿದೆಯಾದರೂ ಇತ್ತೀಚಿನ ಯುವ ಪೀಳಿಗೆ ಇಂತಹ ಶಾಸ್ತ್ರೀಯ ಕಾರ್ಯಕ್ರಮಗಳನ್ನು ಹೆಚ್ಚಾಗಿ ಇಷ್ಟಪಡುದಿಲ್ಲ ಎಂಬ ಭಾವನೆಯನ್ನು ಈ ಬಾರಿ ಸಂಪೂರ್ಣವಾಗಿ ಬದಲಾಯಿಸಲು ಕಾತುರರಾಗಿದ್ದಾರೆ ಹಾಸನಿಯವರು.

ಬಾಗೇಪಲ್ಲಿ ಪಟ್ಟಣದಲ್ಲಿ ಹತ್ತು ದಿನಗಳಿಂದ ನಿರಂತವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನ ಮಾಡುವ ಮೂಲಕ ಹೊಸ ದಾಖಲೆಯ ಇತಿಹಾಸವೇ ಸೃಷ್ಟಿಯಾಗಿದೆ. ಭರತನಾಟ್ಯ ಕಲಾವಿದ ಹಾಸನಿ ಗೋಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲಾಗಲು ಸತತ 228 ಗಂಟೆಗಳ ಕಾಲ ಭರತನಾಟ್ಯವನ್ನು ನಡೆಸಿಕೊಳ್ಳಲಿದ್ದಾರೆ ಎಂದು ಹಿರಿಯ ವಕೀಲರು, ಸಮಾಜ ಚಿಂತಕರೂ ಆದ ಎ ಜಿ ಸುಧಾಕರ್ ತಿಳಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಟ್ಟಣದ ನೇತಾಜಿ ಸರ್ಕಲ್‌ನಲ್ಲಿ ವಾಸವಿರುವ ಹಾಸನಿ ತಾಯಿ ಲಲಿತಮ್ಮ ಹಾಗೂ ತಂದೆ ಗಂಗಾಧರ್ ಸುಮಾರು 15 ವರ್ಷಗಳಿಂದ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಲೇಷಿಯಾಗಳಲ್ಲಿ ಭರತನಾಟ್ಯವನ್ನು ಮಾಡುತ್ತ ಗಿನ್ನಿಸ್ ಬುಕ್, ಏಷ್ಯಾ ಬುಕ್, ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನರ್ತನ ಭರತನಾಟ್ಯ ಶಾಲೆ ತೆರೆದು ಅನೇಕರಿಗೆ ಭರತನಾಟ್ಯವನ್ನು ಕಲಿಸುತ್ತಿದ್ದಾರೆ. ಭರತನಾಟ್ಯದಲ್ಲಿ ಗೋಲ್ಡ್ ಬುಕ್ ಆಫ್ ರೆಕಾರ್ಡ್ ಮಾಡಲು ಎಲ್ಲ ಸಿದ್ಧತೆ ಮಾಡಲಾಗಿದೆ. ಇಲ್ಲಿಂದಲೇ ಲೈವ್ ಮೂಲಕ ಇಂಗ್ಲೆಂಡ್‌ನಲ್ಲಿ ಗೋಲ್ಡ್ ಬುಕ್ ಆಫ್ ರೆಕಾರ್ಡ್ ಸದಸ್ಯರು ವೀಕ್ಷಿಸುತ್ತಾರೆ. ಇದಕ್ಕೆ ನಗರದ ಎಲ್ಲ ಜನತೆ ಸಹಕಾರ ನೀಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಭರತನಾಟ್ಯ

ಭರತನಾಟ್ಯ ಕಲಾವಿದೆ ಹಾಸನಿ ಗಂಗಾಧರ್ ಮಾತನಾಡಿ, “ನಾನು ಮೂರು ವರ್ಷ ಮಗುವಿನಿಂದಲೇ ಭರತನಾಟ್ಯ ಪ್ರಾರಂಭ ಮಾಡಿದೆ. ಅದರೆ ಮಧ್ಯದಲ್ಲಿ ಇಷ್ಟ ಇರಲಿಲ್ಲ. ಆದರೆ ನಮ್ಮ ತಾಯಿಯ ಒತ್ತಾಯ ಸಹಕಾರದಿಂದ ನಾನು ಅನೇಕ ಪ್ರಶಸ್ತಿಗಳನ್ನ ಪಡೆದಿದ್ದೇನೆ. ಇಂದು ನನ್ನ ತಾಯಿ ಇಲ್ಲ, ನನ್ನ ತಂದೆ ಗಂಗಾಧರ ಅವರು, ಇತರೆ ಸ್ನೇಹಿತರು, ಹಿತೈಷಿಗಳು ಎಲ್ಲರೂ ಸಹಕಾರ ನೀಡಿದ್ದಾರೆ. 21ರಿಂದ 30ರ ತನಕ ಸತತ 228 ಗಂಟೆಗಳ ಕಾಲ ಭರತನಾಟ್ಯ ಮಾಡಿ ಗೋಲ್ಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಹೆಸರು ಮಾಡಬೇಕು. ನಮ್ಮ ಊರಿಗೆ ನಮ್ಮ ಪೋಷಕರಿಗೆ ನನಗೆ ಸಹಕರಿಸಿದ ಎಲ್ಲರಿಗೂ ಹೆಸರು ತರಬೇಕೆಂಬುದೇ ನನ್ನ ಆಸೆ. ನಿಮ್ಮೆಲ್ಲರ ಆಶೀರ್ವಾದ ಸಹಕಾರ ನನ್ನ ಮೇಲೆ ಇರಲಿ” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ ಕೃಷಿ ಇಲಾಖೆಯ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ: ಎನ್ ಚಲುವರಾಯಸ್ವಾಮಿ

ಒಟ್ಟಿನಲ್ಲಿ ಸತತ 228 ಗಂಟೆಗಳ ಭರತನಾಟ್ಯ ನೃತ್ಯ ಪ್ರದರ್ಶಿಸಿ ಬಾಗೇಪಲ್ಲಿ ತಾಲೂಕಿಗೆ ಇನ್ನೊಂದು ಗರಿಮೆಯನ್ನು ತಂದಿಟ್ಟ ದಿಟ್ಟ ಯುವತಿ ಹಾಸನಿಯ ಈ ಸಾಧನೆ ಇನ್ನಷ್ಟು ಜನರಿಗೆ ಪ್ರೇರಣೆಯಾಗಲಿ ಎಂಬುದು ನಮ್ಮ ಆಶಯ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ವಿ ನಾರಾಯಣ, ಮಂಜುಳಾ, ಗಂಗಾಧರ್, ವಿಜಯ್ ಜ್ಯೋತಿ, ಸುರೇಶ್ ಸೇರಿದಂತೆ ಇನ್ನೂ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...