ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ರಾಷ್ಟ್ರೀಯ ನಾಯಕರನ್ನು ಕೇಳಿರುವೆ: ವಿ ಸೋಮಣ್ಣ

Date:

  • ‘100 ದಿನ ಅವಕಾಶ ನೀಡಿದರೆ ಸಾಕು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಥ ತುಂಬುವೆ’
  • ಕಹಿ ಘಟನೆ ಮರೆತು ಪಕ್ಷವನ್ನು ಮುನ್ನೆಲೆಗೆ ತರಲು 24X7 ಕೆಲಸ ಮಾಡುವೆ’

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ನಮ್ಮ ರಾಷ್ಟ್ರೀಯ ನಾಯಕರನ್ನು ಕೇಳಿರುವೆ. ನನಗೆ 100 ದಿನ ಅವಕಾಶ ನೀಡಿದರೆ ಸಾಕು. ಒಬ್ಬ ರಾಜ್ಯಾಧ್ಯಕ್ಷ ಹೇಗೆ ಕೆಲಸ ಮಾಡಬೇಕು ಎಂಬುದನ್ನು ತೋರಿಸುವೆ ಎಂದು ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.

ಗುರುವಾರ ಖಾಸಗಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, “ಬಿಜೆಪಿಯಲ್ಲಿ 15 ವರ್ಷದಿಂದ ನಾನು ದುಡಿದಿರುವೆ. ಪಕ್ಷ ಈಗ ಕಷ್ಟದ ಸನ್ನಿವೇಶದಲ್ಲಿದೆ. ಇದನ್ನು ಮೇಲೆತ್ತಬೇಕಿದೆ. ನಾನೇ ಮುಂದೆ ಬಂದು ರಾಜ್ಯಾಧ್ಯಕ್ಷ ಸ್ಥಾನ ನೀಡಿ ಎಂದು ಕೇಳಿಕೊಂಡಿರುವೆ” ಎಂದರು.

“ಅನೇಕ ಏಳು ಬೀಳುಗಳನ್ನು ಕಂಡಿರುವೆ. ನಾನು ಎಲ್ಲಿ ಇರುತೇನೋ ಅಲ್ಲಿ ಪಕ್ಷವನ್ನು ಗೌರವಪೂರ್ವಕವಾಗಿ ಕಂಡಿರುವೆ. ತಾಯಿ ಸಮಾನವಾಗಿ ಪಕ್ಷವನ್ನು ನೋಡಿರುವೆ. 45 ವರ್ಷದ ರಾಜಕೀಯ ಅನುಭವವಿದೆ. ಅನೇಕ ನಾಯಕರ ಜೊತೆ ಕೆಲಸ ಮಾಡಿದ್ದೇನೆ. ಹತ್ತಾರು ಚುನಾವಣೆ ಎದುರಿಸಿದ್ದೇನೆ. ಬಿಜೆಪಿ ಕೊಟ್ಟ ಅನೇಕ ಟಾಸ್ಕ್‌ಗಳನ್ನು ನಿಭಾಯಿಸಿದ್ದೇನೆ. ಈ ಎಲ್ಲ ಕಾರಣಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಕೇಳಿರುವೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೃಹ ಸಚಿವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿ ಖಾತೆಯನ್ನು ಮರಿ ಖರ್ಗೆಗೆ ವಹಿಸಿದ್ದಾರೆಯೇ: ನಳಿನ್‌ ಕುಮಾರ್‌ ಪ್ರಶ್ನೆ

ಈವರೆಗೂ ಪಕ್ಷ ಕೊಟ್ಟ ಕೆಲಸಗಳನ್ನು ತಲೆ ಮೇಲೆ ಹೊತ್ತುಕೊಂಡು ಕೆಲಸ ಮಾಡಿದ್ದೇನೆ. ಹೀಗಾಗಿ ಒಂದು ಅವಕಾಶ ಮಾಡಿಕೊಡಿ ಎಂದು ಮನವಿಯವನ್ನು ರಾಷ್ಟ್ರೀಯ ನಾಯಕರ ಬಳಿ ಇಟ್ಟಿದ್ದೇನೆ. ನನ್ನ ಅನುಭವದ ಮೇಲೆ ಪಕ್ಷವನ್ನು ಮೇಲೆತ್ತುವೆ. ಒಗ್ಗಟ್ಟಿನಿಂದ ಎಲ್ಲರನ್ನು ಕೊಂಡೊಯ್ಯುವೆ” ಎಂದರು.

“ಕೇವಲ 100 ದಿನಗಳ ಅವಕಾಶ ಕೇಳಿರುವೆ. ಅಷ್ಟರಲ್ಲೇ ಪಕ್ಷ ಕೈಗೊಳ್ಳಬೇಕಾದ ಜವಾಬ್ದಾರಿಗಳನ್ನು ಪೂರ್ಣಗೊಳಿಸುವೆ. ಮೋದಿ ಅವರ ಜನಪ್ರಿಯ ಕಾರ್ಯಕ್ರಮಗಳನ್ನು ಮನೆಮನೆಗೂ ತಿಳಿಸುವೆ. ಎಲ್ಲ ಕಹಿ ಘಟನೆ ಮರೆತು ಪಕ್ಷವನ್ನು ಮತ್ತೆ ಮುನ್ನೆಲೆಗೆ ತರಲು 24X7 ಕೆಲಸ ಮಾಡುವೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...