ಕಲಬುರಗಿ | ಜಾತಿನಿಂದನೆ : ರಟಕಲ್‌ ಪಿಎಸ್‌ಐ ಅಮಾನತು

Date:

ಕರ್ತವ್ಯ ಆರೋಪದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ರಟಕಲ್‌ ಪೊಲೀಸ್ ಠಾಣೆಯ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಬಗ್ಗೆ ವಿರೋಧ ವ್ಯಕ್ತವಾಗಿ, ಕ್ರಮಕ್ಕೆ ಸಮುದಾಯದ ಮುಖಂಡರು ಆಗ್ರಹಿಸಿದರು.

ಈ ಪ್ರಕರಣ ಸಂಬಂಧ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತು ಮಾಡಿ ಈಶಾನ್ಯ ವಲಯ ಐಜಿಪಿ ಅಜಯ್‌ ಹಿಲೋರಿ ಅವರು ಆದೇಶ ಹೊರಡಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...