ಬೆಂಗಳೂರು ಗ್ರಾಮಾಂತರ | 1199 ಗ್ರಾಮಗಳಲ್ಲಿ ಅಟಲ್‌ ಭೂಜಲ್‌ ಯೋಜನೆ ಅನುಷ್ಟಾನ : ಸುಶೀಲಮ್ಮ

Date:

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೇವನಹಳ್ಳಿ ತಾಲೂಕಿನ ಬೊಮ್ಮವಾರದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ರೈತರಿಗಾಗಿ 2024-25ನೇ ಸಾಲಿನ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ದೇವನಹಳ್ಳಿ ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ಅಟಲ್ ಭೂಜಲ್ ಯೋಜನೆಯಡಿ (ABY) ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲ ನಿರ್ವಹಣೆ, ಜಲ ಭದ್ರತಾ ಯೋಜನೆ ಸಿದ್ದಪಡಿಸುವುದು, ನೀರಿನ ಬಳಕೆ ಕಡಿಮೆ ಮಾಡುವ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ಕ್ರಮಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

ತರಬೇತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಕರ್ನಾಟಕದ 14 ಜಿಲ್ಲೆಗಳ, 41 ತಾಲ್ಲೂಕುಗಳಲ್ಲಿ ಬರುವಂತಹ 1199 ಗ್ರಾಮ ಪಂಚಾಯತಿಗಳಲ್ಲಿ ಅಟಲ್ ಭೂಜಲ ಯೋಜನೆ ಅನುಷಾನಗೊಳ್ಳುತ್ತಿದ್ದು, ಅಂತರ್ಜಲದ ಅತಿಬಳಕೆಯನ್ನು ಕಡಿಮೆ ಮಾಡುವುದು. ಅಂತರ್ಜಲದ ಸುಸ್ಥಿರ ನಿರ್ವಹಣೆ, ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲ ನಿರ್ವಹಣೆ, ಜಲಭದ್ರತಾ ಯೋಜನೆ ಸಿದ್ದಪಡಿಸುವುದು, ನೀರಿನ ಬಳಕೆ ಕಡಿಮೆ ಮಾಡುವ ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌; ಜನಪರ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರ ನಡೆ ಸರ್ವಥಾ ಸರಿಯಲ್ಲ

ಕಾರ್ಯಕ್ರಮದಲ್ಲಿ ಅಟಲ್ ಭೂಜಲ್ ಯೋಜನೆಯ ಹಿರಿಯ ಭೂ ವಿಜ್ಞಾನಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೋಡಲ್ ಅಧಿಕಾರಿ ಪಲ್ಲವಿ, ತಾಂತ್ರಿಕ ಸಹಾಯಕರಾದ ನಿಷಿತ, ಕೃಷಿ ತಜ್ಞೆ ದೀಪ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಲಾಖೆ ಅಂತರ್ಜಲ ತಜ್ಞರಾದ ಮೋಹನ್, ಜೈನ್ ನೀರಾವರಿ ಸಂಸ್ಥೆಯ ತೋಷಿತ್ ರೈ, ಜೈರಾಮ್, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆರ್.ಕೆ.ಶಾಲಾದ, ಸಹಾಯಕ ಕೃಷಿ ನಿರ್ದೇಶಕಿ ಸುಮಂಗಲ, ಕೃಷಿ ಅಧಿಕಾರಿ ಸತ್ಯನಾರಾಯಣ ಸೇರಿದಂತೆ ದೇವನಹಳ್ಳಿ ತಾಲ್ಲೂಕಿನ ಸಿಬ್ಬಂದಿಗಳು ಹಾಗೂ ಸುತ್ತಮುತ್ತಲಿನ ಹತ್ತಾರು ಗ್ರಾಮದ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...