ಬೀದರ್‌ | ಎಟಿಎಂ ದರೋಡೆ ಪ್ರಕರಣ : ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆ ಸತ್ತಿದೆ ಎಂದ ಭಗವಂತ ಖೂಬಾ

Date:


ಬೀದರ್‌ ಜಿಲ್ಲೆಯಲ್ಲಿ ಹಾಡುಹಗಲೇ ಕೊಲೆ, ಎಟಿಎಂ ದರೋಡೆ ನಡೆಯುತ್ತಿರುವುದನ್ನು ಗಮನಿಸಿದರೆ ಆಡಳಿತ ವ್ಯವಸ್ಥೆ ಸತ್ತು ಹೋಗಿದೆ ಎಂದೆನಿಸುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಘಟನೆ ನಡೆಯಿತು. ಅದು ಮಾಸುವ ಮುನ್ನವೇ ಇಂದು ಅಮಾಯಕ ಸಿಬ್ಬಂದಿಯ ಜೀವ ಹೋಗಿದೆ. ಇಂತಹ ಘಟನೆಗಳಿಂದ ಜಿಲ್ಲೆಯಲ್ಲಿ ಜನಸಾಮಾನ್ಯರು ನಿರಾತಂಕವಾಗಿ ಬದುಕಲು ಸಾಧ್ಯವಿಲ್ಲ. ಇದು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಸಂಪೂರ್ಣ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಕೂಡಲೇ ಉಸ್ತುವಾರಿ ಸಚಿವರು ಇದರ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಭಗವಂತ ಖೂಬಾ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ, ಜಿಲ್ಲಾ ಉಸ್ತುವಾರಿ ಮಂತ್ರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲದಿರುವುದು, ದೇಶದ್ರೋಹದ ಘಟನೆಗಳಿಗೆ, ಸಮಾಜಘಾತುಕ ಶಕ್ತಿಗಳಿಗೆ ನೀಡುತ್ತಿರುವ ಕುಮ್ಮಕ್ಕು ಇಂತಹ ಘಟನೆಗಳಿಗೆ ಪ್ರೇರಣೆ ನೀಡುತ್ತಿವೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಆಡಳಿತ ವ್ಯವಸ್ಥೆಯ ನಡುವೆ ಅಧಿಕಾರಿಗಳಿಗೆ ಅವರ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬೇಕು. ಆದರೆ ಇಲ್ಲಿ ಉಸ್ತುವಾರಿ ಸಚಿವರು ಎಲ್ಲ ನಾನೇ ಮಾಡಬೇಕು. ನನ್ನ ಕೈಯಲ್ಲಿ ಎಲ್ಲವೂ ಇರಬೇಕೆಂದು ಆಡಳಿತದಲ್ಲಿ ಅತಿಯಾದ ಹಸ್ತಕ್ಷೇಪ ಮಾಡಿದ್ದಕ್ಕೆ ಅಧಿಕಾರಿಗಳಿಗೆ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಈಗಲಾದರೂ ಸಚಿವರು ಈಶ್ವರ ಖಂಡ್ರೆಯವರು ಸ್ವಲ್ಪ ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡಬೇಕುʼ ಎಂದಿದ್ದಾರೆ.

ಜಿಲ್ಲಾ ಪೊಲೀಸ್ ವ್ಯವಸ್ಥೆಯ ವೈಫಲ್ಯ ಕಾರಣ :

ಗುಂಡಿನ ದಾಳೆ ನಡೆದ ಸ್ಥಳದ ಅಕ್ಕಪಕ್ಕದಲ್ಲೇ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನ್ಯಾಯಾಲಯ, ತಹಸೀಲ್ದಾರ್‌ ಕಚೇರಿ ಇವೆ. ಸದಾ ಪೋಲೀಸರು ಇರುವ ಜಿಲ್ಲೆಯ ಹೃದಯಭಾಗದಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ಜಿಲ್ಲಾ ಪೋಲೀಸ್ ವ್ಯವಸ್ಥೆಯ ವೈಫಲ್ಯವು ಇದಕ್ಕೆ ಕಾರಣವಾಗಿದೆ. ಈವಾಗ ಪೊಲೀಸರು ಕಳ್ಳನನ್ನು ಬಂಧಿಸಬಹುದು, ಆದರೆ ಅಮಾಯಕ ಸಿಬ್ಬಂದಿಯ ಜೀವ ಮತ್ತೆ ಕೊಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾಜಿ ಸಂಸದ ಭಗವಂತ ಖೂಬಾ ಅವರು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ‌ ನೀಡಿ, ಜೀವ ಕಳೆದುಕೊಂಡ ಗಿರಿ ವೆಂಕಟೇಶ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಎಟಿಎಂ ದರೋಡೆ | ದುಷ್ಕರ್ಮಿಗಳ ಬಂಧನಕ್ಕೆ ತುರ್ತು ಕ್ರಮ: ಈಶ್ವರ್‌ ಖಂಡ್ರೆ

ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತು ಮೃತ ಸಿಬ್ಬಂದಿ ಕುಟುಂಬಕ್ಕೆ ₹1 ಕೋಟಿ ಪರಿಹಾರ ಮತ್ತು ಗಾಯಗೊಂಡ ಸಿಬ್ಬಂದಿಗೆ ಅಗತ್ಯ ಚಿಕಿತ್ಸೆ ಮತ್ತು ₹50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಈ ಕೃತ್ಯ ಎಸಗಿರುವ ಘಾತುಕರನ್ನು ಆದಷ್ಟೂ ಬೇಗ ಹೆಡೆಮುರಿ ಕಟ್ಟಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...