ಬೀದರ್ | ಎಟಿಎಂ ದರೋಡೆ ಪ್ರಕರಣ: ಸ್ಥಳಕ್ಕೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ

Date:

ಬೀದರ್‌ನಲ್ಲಿ ನಿನ್ನೆ ಬೆಳಿಗ್ಗೆ ನಡೆದ ಎಸ್‌ಬಿಐ ಎಟಿಎಂ ದರೋಡೆ ಘಟನೆಯ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಘಟನೆ ಕುರಿತು ಮಾಹಿತಿ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಿದರು.

ಮೃತ ಕುಟುಂಬಕ್ಕೆ ಪರಿಹಾರ, ಸರ್ಕಾರ ಹುದ್ದೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಂಡಿನ ದಾಳಿಯಿಂದಾಗಿ ಮೃತಪಟ್ಟ ಸಿಬ್ಬಂದಿ ಗಿರಿ ವೆಂಕಟೇಶ್ ಕುಟುಂಬಕ್ಕೆ ಸರ್ಕಾರ ವಿಶೇಷ ಪರಿಹಾರ ಹಾಗೂ ಒಂದು ಸರ್ಕಾರಿ ಹುದ್ದೆ ನೀಡಬೇಕೆಂದು ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ತಕ್ಷಣವೇ ಪರಿಹಾರ ನೀಡಬೇಕೆಂದು ತಿಳಿಸಲಾಗಿದೆ ಎಂದರು.

ಘಟನೆಯಲ್ಲಿ ಗಂಭೀರ ಗಾಯಗೊಂಡು ಹೈದರಾಬಾದ್‌‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ನಿನ್ನೆ ರಾತ್ರಿ ಭೇಟಿ ನೀಡಿ ಸಿಬ್ಬಂದಿ ಶಿವಕುಮಾರ್ ಅವರ ಆರೋಗ್ಯ ವಿಚಾರಿಸಿದ್ದೇನೆ. ಈಗಾಗಲೇ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸುತ್ತದೆ ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಎಸ್‌ಬಿಐ ಭದ್ರತಾ ಸಂಸ್ಥೆ ಸಿಬ್ಬಂದಿ ಮೇಲೆ ಗುಂಡಿನ ದಾಳಿ; ಓರ್ವ ಸಾವು, 93 ಲಕ್ಷ ದರೋಡೆ

ಬ್ಯಾಂಕ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಮತ್ತು ಸಂಬಂಧಿತ ಪ್ರಾಧಿಕಾರಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಡಿಜಿಪಿ ಹರಿ ಶೇಖರನ್ (ಕಾನೂನು ಮತ್ತು ಸುವ್ಯವಸ್ಥೆ), ಎಜಿಪಿ, ಎಸ್ಪಿ ಪ್ರದೀಪ್ ಗುಂಟಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರ ಜೊತೆ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...