ಬೀದರ್‌ | ಎಟಿಎಂ ದರೋಡೆ ಪ್ರಕರಣ : ಗುಂಡೇಟಿನಿಂದ ಗಾಯಗೊಂಡ ಶಿವಕುಮಾರ್‌ಗೆ ನೌಕರಿ : ಈಶ್ವರ ಖಂಡ್ರೆ

Date:

ಬೀದರ್‌ನಲ್ಲಿ ಇತ್ತೀಚೆಗೆ ನಡೆದ ಎಸ್‌ಬಿಐ ಬ್ಯಾಂಕ್ ಎಟಿಎಂ ದರೋಡೆಕೋರರ ಗುಂಡೇಟಿನಿಂದ ಗಂಭೀರ ಗಾಯಗೊಂಡು ಹೈದ್ರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಬಂದಿರುವ ಶಿವಕುಮಾರ್ ಅವರ ಲಾಡಗೇರಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಶಿವಕುಮಾರ್ ಅವರ ಯೋಗಕ್ಷೇಮ ವಿಚಾರಿಸಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಲಾಡಗೇರಿಯ ಶಿವಕುಮಾರ್‌ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದರು.

ಶಿವಕುಮಾರ್‌ಗೆ ನೌಕರಿ ಭರವಸೆ :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರೋಡೆಕೋರರ ಗುಂಡೇಟಿನಿಂದ ಗಂಭೀರ ಗಾಯಗೊಂಡು ಹೈದ್ರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಬಂದಿರುವ ಶಿವಕುಮಾರ್‌ ಅವರ 10 ಲಕ್ಷ ಚಿಕಿತ್ಸಾ ವೆಚ್ಚ ಸಿಎಂಎಸ್‌ ಕಂಪನಿ ಭರಿಸಿದೆ. ಶಿವಕುಮಾರ್‌ ಅವರ ಪ್ರಕರಣವನ್ನು ವಿಶೇಷವೆಂದು ಪರಿಗಣಿಸಿ ಅವರಿಗೆ ನೌಕರಿ ಕೊಡುವ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆʼ ಎಂದು ಸಚಿವ ಈಶ್ವರ ಬಿ.ಖಂಡ್ರೆ ಅವರು ಆಶ್ವಾಸನೆ ನೀಡಿದರು.

ಬೀದರ್‌ ನಗರದ ನೆಹರೂ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ʼಜನವರಿ 16ರಂದು ನಗರದ ಎಸ್‌ಬಿಐ ಕಚೇರಿ ನಡೆದ ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಗುರುತು ಪತ್ತೆ ಹಚ್ಚಲಾಗಿದೆ. ಈ ಪ್ರಕರಣದ ದರೋಡೆಕೋರರ ವಿರುದ್ಧ ದೇಶದ ಹಲವೆಡೆ ಕೊಲೆ ಪ್ರಕರಣಗಳಿದ್ದು, ಇಡೀ ದೇಶದ ಪೊಲೀಸರಿಗೆ ಅವರು ಬೇಕಾಗಿದ್ದಾರೆʼ ಎಂದರು.

ʼಅನ್ಯ ರಾಜ್ಯಗಳ ಪೊಲೀಸರ ಸಹಕಾರದೊಂದಿಗೆ ಜಿಲ್ಲೆಯ ಪೊಲೀಸರು ದರೋಡೆಕೋರರ ಪತ್ತೆ ಕಾರ್ಯ ನಡೆಸಿದ್ದಾರೆ. ಅವರು ಎಲ್ಲಿಯೇ ಅಡಗಿ ಕುಳಿತರು ಪೊಲೀಸರು ಅವರನ್ನು ಬಂಧಿಸುತ್ತಾರೆ. ಅವರು ಯಾವ ಜಿಲ್ಲೆಯವರು, ಕುಟುಂಬದ ಹಿನ್ನಲೆ ಬಗ್ಗೆ ಈಗಾಗಲೇ ಪೊಲೀಸರು ಪತ್ತೆ ಹಚ್ಚಿದ್ದಾರೆ. ದರೋಡೆಕೋರರನ್ನು ಬಂಧಿಸಲು ಪೊಲೀಸರು ಸಜ್ಜಾಗಿದ್ದಾರೆʼ ಎಂದು ಸಚಿವರು ವಿವರಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ನಗರ ಸಭೆ ಅಧ್ಯಕ್ಷ ಮುಹಮ್ಮದ್ ಗೌಸ್ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...