ಬೀದರ್‌ | ದಲಿತರ ಮೇಲೆ ದೌರ್ಜನ್ಯ : ಸಚಿವ ಈಶ್ವರ ಖಂಡ್ರೆ ವಿರುದ್ಧ ಆಕ್ರೋಶ

Date:

ಬೀದರ್‌ ತಾಲೂಕಿನ ವಿಳಾಸಪುರ ಗ್ರಾಮದಲ್ಲಿ ಡಿ.12ರಂದು ತಡರಾತ್ರಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆಯನ್ನು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿತು.

ಹುಮನಾಬಾದ್ ಪಟ್ಟಣದ ಪ್ರವಾಸಿ ಮಂದಿರದಿಂದ ಬಾಬಾ ಸಾಹೇಬ್‌ ಅಂಬೇಡ್ಕರ್‌ ವೃತ್ತದವರೆಗೆ ಮೆರವಣಿಗೆ ಮುಖಾಂತರ ತೆರಳಿದ ಒಕ್ಕೂಟದ ಪ್ರಮುಖರು ಅಂಬೇಡ್ಕರ್‌ ಪುತ್ಥಳಿ ಎದುರು ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼರಾಜ್ಯದಲ್ಲಿ ಕಾಂಗ್ರೆಸ್‌ ನೇತ್ರತ್ವದ ಸರ್ಕಾರ ಅಧಿಕಾರಕ್ಕೇರಿದ ನಂತರ ಜಿಲ್ಲೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌‌ ಹಾಗೂ ಸಂವಿಧಾನವನ್ನು ಅವಮಾನಿಸುವ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ತವರು ಕ್ಷೇತ್ರ ಭಾಲ್ಕಿಯಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಖಂಡನೀಯವಾಗಿದೆʼ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಒಂದು ವರ್ಷದಿಂದ ಭಾಲ್ಕಿ ತಾಲ್ಲೂಕಿನ ಮಳಚಾಪೂರ, ತಳವಾಡ (ಕೆ), ರಾಚಪ್ಪಾ ಗಡಿಗೌಡಗಾಂದ, ಚಳಕಾಪೂರ ಗ್ರಾಮಗಳಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದಿದ್ದು, ತಪ್ಪಿಸ್ಥರ ವಿರುದ್ಧ ದಾಖಲಾದ ಪ್ರಕರಣಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಆರೋಪಿಗಳಿಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದನ್ನು ಪರಿಶೀಲಿಸಿ ಸಚಿವ ಖಂಡ್ರೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ : ಪ್ರಕರಣ ದಾಖಲು; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಪ್ರತಿಭಟನೆಯಲ್ಲಿ ಭೀಮ ಆರ್ಮಿ ಸಂಘಟನೆ ತಾಲ್ಲೂಕಾಧ್ಯಕ್ಷ ಅನೀಲ ದೊಡ್ಡಿ, ಭಾರತೀಯ ದಲಿತ ಪ್ಯಾಂಥರ್‌ ತಾಲ್ಲೂಕಾಧ್ಯಕ್ಷ ಗಣಪತಿ ಅಷ್ಟೂರೆ, ದ್ರಾವಿಡ ಕ್ರಾಂತಿ ಯುವ ಸೇನೆಯ ಗೌತಮ್‌ ಪ್ರಸಾದ್‌ ಸೇರಿದಂತೆ ಪ್ರಮುಖರಾದ ಕೈಲಾಸ ಮೇಟಿ, ಶಿವಾನಂದ ಕಟ್ಟಿಮನಿ, ಶಿವಕುಮಾರ ಜೀವಾ, ಮುಕೇಶ ಪಾಂಡೆ, ಶಶಿಕಾಂತ್‌ ಡಾಂಗೆ, ಶೇಕ್‌ ಮಕ್ಸೂದ್‌, ಈಶ್ವರ ಕ್ರಾಂತಿ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...