ಕಲಬುರಗಿ |ಚಾಕುವಿನಿಂದ ಪೊಲೀಸ್‌ ಕಾನ್ಸ್‌ಟೇಬಲ್ ಮೇಲೆ ಹಲ್ಲೆಗೆ ಯತ್ನ; ಕಾಲಿಗೆ ಗುಂಡಿಕ್ಕಿ ಡ್ರಗ್ ಸ್ಮಗ್ಲರ್ ಬಂಧಿಸಿದ ಪೊಲೀಸರು

Date:

ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಓರ್ವನನ್ನು ಬಂಧಿಸಲು ಪ್ರಯತ್ನಿಸಿದ ಪೊಲೀಸ್‌ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯಲ್ಲಿ ಶನಿವಾರ ನಡೆದಿದೆ.

ಪೊಲೀಸರು ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ತಿಳಿಸಿದ್ದಾರೆ.

ʼಅನುಮಾನಾಸ್ಪದ ವ್ಯಕ್ತಿಯ ಬಗ್ಗೆ ಮಾಹಿತಿ ಪಡೆದ ಇನ್ಸ್‌ಪೆಕ್ಟರ್ ಚೌಕ್ ರಾಜೇಂದ್ರ ಅವರು ಅಪರಾಧ ಪತ್ತೆ ತಂಡದೊಂದಿಗೆ ತನಿಖೆಗೆ ತೆರಳಿದರು. ಈ ವೇಳೆ ಕಾರಿನಲ್ಲಿದ್ದ ಶಂಕಿತನನ್ನು ನೋಡಿದ ಇನ್ಸ್‌ಪೆಕ್ಟರ್ ಕಾರು ನಿಲ್ಲಿಸಲು ಚಾಲಕನಿಗೆ ಹೇಳಿದ್ದಾರೆ. ತಕ್ಷಣ ಶಂಕಿತನು ಕಾರಿನಿಂದ ಹೊರಬಂದು ಹೆಡ್ ಕಾನ್ಸ್‌ಟೇಬಲ್ ಗುರುಮೂರ್ತಿ ಮೇಲೆ ದಾಳಿ ಮಾಡಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆʼ ಎಂದು ಕಮಿಷನರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಸುಪ್ರೀತ್ ನವಲೆ ಕಲಬುರಗಿ ನಗರದ ಮುತ್ತಂಪುರ ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನ ಕಾರನ್ನು ತಪಾಸಣೆ ನಡೆಸಿದಾಗ ನೈಟ್ರೊವೆಟ್ ಮಾತ್ರೆಗಳು ಸೇರಿದಂತೆ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ| ದಲಿತ ವ್ಯಕ್ತಿಯನ್ನು ತಲೆಕೆಳಗಾಗಿ ನೇತಾಡಿಸಿ ಹಲ್ಲೆ

ಘಟನೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಗುರುಮೂರ್ತಿ ಅವರ ಎಡಗೈಗೆ ಗಾಯವಾಗಿದೆ. ಗಾಯಗೊಂಡ ಗುರುಮೂರ್ತಿ ಮತ್ತು ಆರೋಪಿಗಳನ್ನು ಕಲಬುರಗಿಯ ಜಿಮ್ಸ್ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್‌.ಡಿ. ಆಸ್ಪತ್ರೆಗೆ ಭೇಟಿ ಘಟನೆ ಮಾಹಿತಿ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...