ವಿಷ ಹಾಕಿ ಮಕ್ಕಳನ್ನು ಕೊಲ್ಲಲು ಪ್ರಯತ್ನಿಸಿದ್ದು ಭಯೋತ್ಪಾದಕ ಕೃತ್ಯ: ಹನೀಫ್ ಖಾನ್ ಕೊಡಾಜೆ

Date:

ಇತ್ತೀಚೆಗೆ ಬೆಳಗಾವಿಯ ಸವದತ್ತಿಯಲ್ಲಿ ಶಾಲೆಯ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿ ಶಾಲಾ ಮಕ್ಕಳನ್ನು ಕೊಲೆ ಮಾಡಲು ಯತ್ನಿಸಿದ ಶ್ರೀರಾಮಸೇನೆಯ ಸದಸ್ಯರ ಕೃತ್ಯವು ಅತ್ಯಂತ ಕಳವಳಕಾರಿಯಾಗಿದೆ. ರಾಜ್ಯ ಸರ್ಕಾರವು ಇದನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಿ ಕೂಡಲೇ ಈ ಪೈಶಾಚಿಕ ಕೃತ್ಯ ನಡೆಸಿದ ಶ್ರೀರಾಮ ಸೇನೆಯ ಗೂಂಡಾಗಳ ವಿರುದ್ಧ ಯುಎಪಿಎ ಸೆಕ್ಷನ್ ಅಡಿ ಪ್ರಕರಣ ದಾಖಲಿಸಬೇಕು ಎಂದು ಬಂಟ್ವಾಳದ ಮುಸ್ಲಿಂ ಸಮಾಜದ ಮುಖಂಡ ಹನೀಫ್‌ ಖಾನ್‌ ಕೊಡಾಜೆ ಆಗ್ರಹಿಸಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಧರ್ಮಕ್ಕೆ ಸೇರಿದವರೆಂದು ಅಮಾಯಕ ಮಕ್ಕಳನ್ನು ವಿಷವುಣಿಸಿ ಕೊಂದು ಅದನ್ನು ಮುಖ್ಯೋಪಾಧ್ಯಾಯರ ತಲೆಗೆ ಕಟ್ಟಿ ಗಲಭೆ ನಡೆಸಲು ಸಂಚು ನಡೆಸಿದ ಶ್ರೀರಾಮಸೇನೆಯ ನೀಚ ಮನಸ್ಥಿತಿ ಪೋಲಿಸರ ತನಿಖೆಯಿಂದ ಜಗಜ್ಜಾಹೀರಾಗಿದೆ ಎಂದು ತಿಳಿಸಿದ್ದಾರೆ.

“ಈ ಹಿಂದೆ ಕೂಡಾ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಅದನ್ನು ಮುಸ್ಲಿಮರ ತಲೆಗೆ ಕಟ್ಟಲು ಯತ್ನಿಸಿ ಶ್ರೀರಾಮ ಸೇನೆ ವಿಫಲವಾಗಿದೆ. ರಾಜ್ಯದಲ್ಲಿ ಬಹಳಷ್ಟು ವರ್ಷಗಳಿಂದ ಶ್ರೀರಾಮಸೇನೆ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಾ ಬಂದಿದ್ದು ಸ್ವತಃ ಬಿಜೆಪಿ ಸರ್ಕಾರವೇ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರನ್ನು ರಾಜ್ಯದ ಹಲವು ಜಿಲ್ಲೆಗಳಿಗೆ ಪ್ರವೇಶ ನಿರ್ಭಂಧಿಸಿತ್ತು. ಪದೇ ಪದೇ ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ಹಾಳುಗೆಡವಲು ಅಮಾಯಕ ಜನರ ಜೀವದ ಜೊತೆ ಚೆಲ್ಲಾಟವಾಡುವ ಶ್ರೀರಾಮ‌ಸೇನೆ ಇಂದು ನೀರಿಗೆ ವಿಷ ಬೆರೆಸಿದ ರೀತಿಯಲ್ಲಿ ನಾಳೆ ಬಾಂಬ್ ಹಾಕಿ ಅಮಾಯಕರನ್ನು ಕೊಂದು ಅದನ್ನು ಮುಸ್ಲಿಮರ ತಲೆಗೆ ಕಟ್ಟಲು ಷಡ್ಯಂತ್ರ ನಡೆಸುವುದರಲ್ಲಿ ಯಾವುದೇ ಸಂಶಯವಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಂಟ್ವಾಳ | ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ; ವಿಕಲಚೇತನರಿಂದ ಅರ್ಜಿ ಆಹ್ವಾನ

“ಆದ್ದರಿಂದ ರಾಜ್ಯ ಸರ್ಕಾರವು ಈ ಕೂಡಲೇ ಬೆಳಗಾವಿ ಘಟನೆ ಮತ್ತು ಮಂಗಳೂರಿನ ಎರಡು ಅಮಾಯಕ ಮುಸ್ಲಿಂ ಯುವಕರ ಕೊಲೆ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ದ UAPA ಸೆಕ್ಷನ್ ಸೇರಿಸಿ ಪ್ರಕರಣದ ತನಿಖೆ ನಡೆಸಬೇಕು. ಸೌಹಾರ್ದತೆಗೆ ಧಕ್ಕೆ ತರುವ ಶ್ರೀರಾಮ ಸೇನೆ ಮತ್ತು ಭಜರಂಗದಳದಂತಹ ಭಯೋತ್ಪಾದಕ ಸಂಘಟನೆಗಳನ್ನು ರಾಜ್ಯದಲ್ಲಿ ಕೂಡಲೇ ನಿಷೇಧಿಸಿ ರಾಜ್ಯದ ಸೌಹಾರ್ದತೆಯ ಪರಂಪರೆಯನ್ನು ಎತ್ತಿ ಹಿಡಿಯಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...