ಅತ್ತಿಬೆಲೆ ಪಟಾಕಿ ದುರಂತ | ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರದಿಂದ ವಿವರ ಕೇಳಿದ ಎನ್‌ಜಿಟಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಳಿದೆ.

ನ್ಯಾಯಮೂರ್ತಿ ಪ್ರಕಾಶ್‌ ಶ್ರೀವಾಸ್ತವ ನೇತೃತ್ವದ ಸುಧೀರ್ ಅಗರ್ವಾಲ್ ಮತ್ತು ಎ ಸೆಂಥಿಲ್ ವೇಲ್ ಅವರನ್ನೂ ಒಳಗೊಂಡ ಪೀಠವು ಈ ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಿದೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಹಾಗೂ ಬಾಲಾಜಿ ಗೋದಾಮಿನ ಮಾಲೀಕರನ್ನು ಪ್ರತಿವಾದಿಗಳನ್ನಾಗಿ ಸೇರ್ಪಡೆ ಮಾಡಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠ, “ಅತ್ತಿಬೆಲೆಯಲ್ಲಿರುವ ಬಾಲಾಜಿ ಪಟಾಕಿ ಗೋದಾಮಿನ ಮಾಲೀಕರ ಹೆಸರು, ವಿಳಾಸ ಹಾಗೂ ಮೃತಪಟ್ಟ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ಮಾಹಿತಿ ನೀಡುವಂತೆ” ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಗೋದಾಮಿನಲ್ಲಿ ಪಟಾಕಿಗಳನ್ನು ಸಂಗ್ರಹಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಮಂಡಳಿಯ ಪರ ವಕೀಲರು ಪೀಠಕ್ಕೆ ತಿಳಿಸಿದರು.

ಅವಘಡಕ್ಕೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹಾಗೂ ಆರೋಪಿಗಳನ್ನು ಬಂಧಿಸಲಾಗಿದೆ. ಯಾವುದೇ ಪರವಾನಗಿ ಇಲ್ಲದೆ ಗೋದಾಮು ಕಾರ್ಯನಿರ್ವಹಿಸುತ್ತಿತ್ತು. ಈ ಸಂಬಂಧ ಸಮಗ್ರ ಮಾಹಿತಿ ನೀಡಲು ಎರಡು ವಾರಗಳ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ

ಚೆನ್ನೈನ ದಕ್ಷಿಣ ಪೀಠಕ್ಕೆ ನ್ಯಾಯಮಂಡಳಿ ಪ್ರಕರಣ ವರ್ಗಾಯಿಸಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...