ಅತ್ತಿಬೆಲೆ ಅಗ್ನಿ ದುರಂತ | ಮತ್ತೋರ್ವ ಗಾಯಾಳು ಸಾವು; ಮೃತರ ಸಂಖ್ಯೆ 17ಕ್ಕೆ ಏರಿಕೆ

Date:

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಅ.18ರಂದು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ರಾಜೇಶ್ ಮೃತ ದುರ್ದೈವಿ. ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅ.7 ರಂದು ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ದುರಂತದಲ್ಲಿ 14 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಇನ್ನೂ ಮೂರು ಜನ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ರಾಮಪ್ಪ, ದಿನೇಶ್ ಹಾಗೂ ರಾಜೇಶ್ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಗಾಯಗೊಂಡಿದ್ದ ಅಂಗಡಿ ಮಾಲೀಕ ನವೀನ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಅಗ್ನಿ ದುರಂತ | ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ

ಕರ್ತವ್ಯಲೋಪದ ಆರೋಪದ ಮೇಲೆ ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು.

ಅತ್ತಿಬೆಲೆಯಲ್ಲಿರುವ ಪಟಾಕಿ ಗೋದಾಮಿಗೆ 1 ಸಾವಿರ ಕೆಜಿ ಮಾತ್ರ ಸ್ಟಾಕ್‌ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿತ್ತು.

ಸದ್ಯ ಅತ್ತಿಬೆಲೆ ಪಟಾಕಿ ಗೋದಾಮಿಯಲ್ಲಿ ನಡೆದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ‘ಮ್ಯಾಜಿಸ್ಟೀರಿಯಲ್ ತನಿಖೆ’ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...