ಬೀದರ್‌ | ಔರಾದ್‌ ಬಂದ್‌ ಯಶಸ್ವಿ : ಗೃಹ ಸಚಿವ ಅಮಿತ್‌ ಶಾ ಅವರ ಅಣಕು ಶವಯಾತ್ರೆ

Date:

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಶುಕ್ರವಾರ ಕರೆ ನೀಡಿದ ʼಔರಾದ್‌ ಬಂದ್‌ʼ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್‌ ಶಾ ಶವಯಾತ್ರೆ ಅಣಕು ಶವಯಾತ್ರೆ ನಡೆಸಿ, ಭಾವಚಿತ್ರ ಪ್ರತಿಕೃತಿ ದಹಿಸಲಾಯಿತು.

ಡಾ.ಬಿ.ಆರ್.‌ಅಂಬೇಡ್ಕರ್‌ ಸ್ವಾಭಿಮಾನಿ ಹೋರಾಟ ಸಮಿತಿ ಕರೆ ನೀಡಿದ್ದ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದರು. ಬೆಳಿಗ್ಗೆ 6 ರಿಂದ ಪ್ರತಿಭಟನೆ ಆರಂಭಿಸಿದ ಹೋರಾಟಗಾರರು, ಮಧ್ಯಾಹ್ನ 2 ಗಂಟೆವರೆಗೆ ಪಾದಯಾತ್ರೆ, ಬೈಕ್‌ ರ್ಯಾಲಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಂದ್‌ ಶಾಂತಿಯುತವಾಗಿ ನಡೆಯಿತು.‌

WhatsApp Image 2024 12 27 at 5.29.33 PM
ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಮಲ್ಲಶೆಟ್ಟಿ ಚಿದ್ರೆ ಅವರಿಗೆ ಸಲ್ಲಿಸಿದರು.

ಬೆಳ್ಳಿಗೆಯಿಂದಲೇ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಚ್ಚಿ ಬಂದ್‌ಗೆ ಬೆಂಬಲಿಸಿದರು. ಸಾರಿಗೆ ಸಂಸ್ಥೆಯ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಿಗ್ಗೆಯಿಂದ ವಿವಿಧ ಗ್ರಾಮಗಳಿಂದ ಆಗಮಿಸಿದ ಮಕ್ಕಳು, ಮಹಿಳೆಯರು, ಹೋರಾಟಗಾರರು ಕೈಯಲ್ಲಿ ನೀಲಿ ಬಾವುಟ, ಅಂಬೇಡ್ಕರ್‌ ಅವರ ಭಾವಚಿತ್ರ ಹಿಡಿದುಕೊಂಡು ಗಮನ ಸೆಳೆದರು. ಎಪಿಎಂಸಿ ಕ್ರಾಸ್‌ ಸಮೀಪದ ಕನ್ನಡಾಂಬೆ ವೃತ್ತದ ಬಳಿ ಜಮಾಯಿಸಿದರು. ಇದೇ ಸಂದರ್ಭದಲ್ಲಿ ಗುರುವಾರ (ಡಿ.26) ರಂದು ರಾತ್ರಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಸಮಿತಿಯಿಂದ ಶ್ರದ್ದಾಂಜಲಿ ಸಲ್ಲಿಸಿದರು.

ಆನಂತರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವೃತ್ತ ಎದುರಿನ ಮುಖ್ಯರಸ್ತೆ ಮೇಲೆ ಟೈರ್‌ಗೆ ಬೆಂಕಿ ಹಚ್ಚಿ ʼಜೈಭೀಮ್‌ʼ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಹಲಗಿ ತಾಳಕ್ಕೆ ಹೆಜ್ಜೆ ಹಾಕಿದ ಹೋರಾಟಗಾರರು ʼಸತ್ತಾನಪ್ಪೊ ಸತ್ತಾನೊ ಅಮಿತ್‌ ಶಾ ಸತ್ತಾನೋʼ ಎಂಬ ಘೋಷಣೆ ಕೂಗಿ ಬೊಬ್ಬೆ ಹಾಕಿದರು. ಮುಖ್ಯರಸ್ತೆ ಮುಖಾಂತರ ಬಸ್‌ ನಿಲ್ದಾಣದವರೆಗೆ ಅಮಿತ್‌ ಶಾ ಅಣಕು ಶವಯಾತ್ರೆ ಮಾಡಿದರು. ಬಸ್‌ ನಿಲ್ದಾಣದ ಎದುರುಗಡೆಯ ಮುಖ್ಯರಸ್ತೆ ಮೇಲೆ ಅಮಿತ್‌ ಶಾ ಪ್ರತಿಕೃತಿ ದಹಿಸಿ ರಾಜೀನಾಮೆಗೆ ಒತ್ತಾಯಿಸಿದರು.

WhatsApp Image 2024 12 27 at 5.31.13 PM 1
ಔರಾದ್ ಬಸ್‌ ನಿಲ್ದಾಣದ ಮುಂಭಾಗ ಪ್ರತಿಭಟನೆ ಉದ್ದೇಶಿಸಿ ಮುಖಂಡರು ಮಾತನಾಡಿದರು.

ಪ್ರತಿಭಟನೆ ಉದ್ದೇಶಿಸಿ ಮುಖಂಡರಾದ ಝರೆಪ್ಪಾ ವರ್ಮಾ, ಬಾಬುರಾವ್‌ ತಾರೆ, ರಾಹುಲ್‌ ಖಂದಾರೆ, ಸುಧಾಕರ್‌ ಕೊಳ್ಳೂರ್‌, ಕಲಾವತಿ ಯನಗುಂದಾ, ರಹೀಂ ಮೌಲಾಸಾಬ್‌, ಸುಭಾಷ ಲಾಧಾ, ರಾಮಣ್ಣ ಒಡೆಯಾರ್‌, ಶಿವು ಕಾಂಬಳೆ ಹಾಗೂ ಸಮಿತಿಯ ಮುಖಂಡರು ಮಾತನಾಡಿ, ʼರಾಜ್ಯಸಭೆಯಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಅವಮಾನಿಸಿದ ಅಮಿತ್‌ ಶಾ ಅವರನ್ನು ಸಂಪುಟದಲ್ಲಿ ಮಂದುವರೆಯಲು ನೈತಿಕತೆ ಇಲ್ಲ. ದೇಶದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಕೂಡಲೇ ಅಮಿತ್‌ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕುʼ ಎಂದು ಆಗ್ರಹಿಸಿದರು.

ʼಭಾರತೀಯ ಸಂವಿಧಾನದಿಂದಲೇ ಸಂಸತ್‌ ಪ್ರವೇಶಿಸಿ ಗೃಹ ಮಂತ್ರಿಯಾದ ಅಮಿತ್‌ ಶಾ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರನ್ನು ಅಪಮಾನಿಸಿದ್ದು ದೇಶದ ಕೋಟಿ ಕೋಟಿ ಅಂಬೇಡ್ಕರ್‌ ಅನುಯಾಯಿಗಳಿಗೆ ನೋವುಂಟು ಮಾಡಿದೆ. ಜಾತಿವಾದಿ ಮನಸ್ಥಿತಿಯ ಅಮಿತ್‌ ಶಾ ಅಧಿಕಾರದ ದರ್ಪದಿಂದ ಬಾಬಾ ಸಾಹೇಬ್‌ರನ್ನು ಅವಮಾನಿಸಿ ದೇಶದ್ರೋಹ ಕೃತ್ಯ ಎಸಗಿದ್ದಾರೆ. ತಕ್ಷಣವೇ ಅವರನ್ನು ದೇಶದಿಂದ ಗಡಿಪಾರು ಮಾಡಬೇಕುʼ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

WhatsApp Image 2024 12 27 at 5.29.41 PM
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ಬಸ್‌ ನಿಲ್ದಾಣ

ʼಈ ಹಿಂದೆ ಬಿಜೆಪಿಯವರು ದೇಶದ ಸಂವಿಧಾನ ಬದಲಾಯಿಸಲು ಬಂದಿದ್ದೇವೆ ಎಂಬ ಹೇಳಿಕೆ ನೀಡಿದ್ದರು. ಆ ಕಾರಣದಿಂದಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅನೇಕ ಕ್ಷೇತ್ರಗಳಲ್ಲಿ ಸೀಟು ಕಳೆದುಕೊಳ್ಳಬೇಕಾಯಿತು. ಸದಾ ʼಸಬ್ ಕಾ ಸಾತ್ ಸಬ್ ಕಾ ವಿಕಾಸ‌ʼ ಎನ್ನುವ ಪ್ರಧಾನಿ ಮೋದಿಯವರು ಸಂಸತ್ತಿನಲ್ಲಿ ಡಾ.ಅಂಬೇಡ್ಕರ್‌ ಅವರನ್ನು ಅಪಮಾನಿಸಿದ ಗೃಹ ಸಚಿವ ಅಮಿತ್‌ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ಪಕ್ಷದಿಂದ ಉಚ್ಚಾಟಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು ನಿಮನ್ನು ಸಂಸತ್‌ ಭವನ ಪ್ರವೇಶಿಸಲು ಬಿಡುವುದಿಲ್ಲʼ ಎಂದು ಎಚ್ಚರಿಸಿದರು.

ಪ್ರತಿಭಟನೆ ನಂತರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ ಅವರಿಗೆ ಸಲ್ಲಿಸಿದರು.

ಔರಾದ್‌ ಸಿಪಿಐ ರಘವೀರ್‌ಸಿಂಗ್ ಠಾಕೂರ್‌, ಪಿಎಸ್‌ಐ ವಸೀಮ್ ಪಟೇಲ್‌ ನೇತ್ರತ್ವದಲ್ಲಿ ಬೆಳಿಗ್ಗೆಯಿಂದಲೇ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ್ ಬಂದ್ : ಬೆಳ್ಳಂ ಬೆಳಿಗ್ಗೆಯೇ ಆರಂಭವಾದ ಪ್ರತಿಭಟನೆ

ಪ್ರತಿಭಟನೆಯಲ್ಲಿ ಸಮಿತಿಯ ಕಾರ್ಯದರ್ಶಿ ಆನಂದ ಗಲಗಲೆ, ಉಪಾಧ್ಯಕ್ಷ ಗಣಪತಿ ವಾಸುದೇವ, ಸಹ ಕಾರ್ಯದರ್ಶಿ ತಾನಾಜಿ ತೋರಣೆಕರ್‌ ಸೇರಿದಂತೆ ಸಮಿತಿಯ ಪ್ರಮುಖರಾದ ಗೌತಮ ಮೇತ್ರೆ, ಸುನೀಲ್‌ ಮಿತ್ರಾ, ಸಂತೋಷ್‌ ಶಿಂಧೆ, ರತ್ನಾದೀಪ ಕಸ್ತೂರೆ, ಸಂತೋಷ ಸೂರ್ಯವಂಶಿ, ಪ್ರವೀಣ ಕಾರಂಜೆ, ಧನರಾಜ್‌ ಮುಸ್ತಾಪುರ, ಸತೀಷ ವಗ್ಗೆ, ಆನಂದ ಕಾಂಬಳೆ, ವಿನೋದ ಡೋಳೆ, ಶಾಂತಕುಮಾರ್‌ ಭಾವಿಕಟ್ಟಿ, ಉತ್ತಮ ಮಾಂಜ್ರೆಕರ್‌, ತುಕಾರಾಮ ಹಸನ್ಮುಖಿ, ಪ್ರಕಾಶ ಅಲ್ಲಾಪುರ, ಸುಂದರ ಮೇತ್ರೆ, ದಿನೇಶ ಸಿಂಧೆ, ಅಖಿಲೇಶ ಸಾಗರ್‌, ರಾಜಕುಮಾರ್‌ ಮೈಲಾರೆ, ಧನರಾಜ್‌ ಕಾಂಬಳೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...