ಔರಾದ್ ಪಟ್ಟಣದ ತಹಸೀಲ್ ಕಚೇರಿ ಹಿಂದುಗಡೆಯ ಜಮೀನಿನಲ್ಲಿ ಶುಕ್ರವಾರ ಮಧ್ಯಾಹ್ನ ಬೀದಿ ನಾಯಿಗಳ ದಾಳಿಗೆ ಜಿಂಕೆಯೊಂದು ಮೃತಪಟ್ಟಿದೆ.
ಬೇಸಿಗೆಯ ಬಿಸಿಲಿನ ತಾಪಕ್ಕೆ ನೀರು ಮತ್ತು ಆಹಾರ ಅರಸಿ ಪಟ್ಟಣದ ಹೊರವಲಯದಲ್ಲಿ ಬಂದಿದ್ದ ಜಿಂಕೆ ಮೇಲೆ ನಾಯಿಗಳ ಹಿಂಡು ದಾಳಿ ಮಾಡಿದೆ. ತೀವ್ರ ರಕ್ತಸ್ರಾವದಿಂದ ಜಿಂಕೆ ಮೃತಪಟ್ಟಿದೆ ಎನ್ನಲಾಗಿದೆ.
ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಳೇಬರವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಅಂತ್ಯಕ್ರಿಯೆ ನಡೆಸಿದರು.





