ಔರಾದ್ |‌ ಸಮಾಜದ ಅಂಕುಡೊಂಕು ತಿದ್ದಿದ ಶ್ರೇಷ್ಠ ಕವಿ ಸರ್ವಜ್ಞ : ಬಿ.ಎಂ.ಅಮರವಾಡಿ

Date:

ಸಮಾಜದಲ್ಲಿ ಬೇರೂರಿದ ಅನಿಷ್ಟ ಆಚರಣೆಗಳನ್ನು ಜನರಾಡುವ ಭಾಷೆಯಲ್ಲೇ ತ್ರಿಪದಿಗಳು ರಚಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಶ್ರೇಷ್ಠ ಸಮಾಜ ಸುಧಾರಕ ಸರ್ವಜ್ಞ ಆಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಔರಾದ್‌ ತಾಲ್ಲೂಕಾಧ್ಯಕ್ಷ ಬಿ.ಎಂ.ಅಮರವಾಡಿ ಹೇಳಿದರು.

ಔರಾದ್‌ ಪಟ್ಟಣದ ಭಕ್ತ ಗೋರೊಬಾ ಕಾಕಾ ಸ್ವ ಸಹಾಯ ಸಂಘ ಹಾಗೂ ತಾಲ್ಲೂಕು ಕುಂಬಾರ ಸಮಾಜ ವತಿಯಿಂದ ಗುರುವಾರ ಆಯೋಜಿಸಿದ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ʼತ್ರಿಪದಿಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ ಶ್ರೇಷ್ಠ ವಚನಕಾರರಾಗಿ 16ನೇ ಶತಮಾನದಲ್ಲಿ ವಿಶ್ವ ಮಾನವ ಸಂದೇಶವನ್ನು ಸಾರಿದರು. ಯಾವುದೇ ಒಂದು ಜಾತಿಗೆ ಸೀಮಿತರಾಗದೆ ಸಮಾಜದಲ್ಲಿ ಎಲ್ಲ ವರ್ಗ, ಕ್ಷೇತ್ರಗಳಲ್ಲಿನ ಅಂಧಕಾರವನ್ನು ತೊಡೆದು ಹಾಕಲು ಶ್ರಮಿಸಿದರು. ಸರ್ವಜ್ಞರ ಆದರ್ಶ ತತ್ವಗಳು ಎಂದೆಂದಿಗೂ ಮಾದರಿಯಾಗಿವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಔರಾದ್ ತಾಲ್ಲೂಕು ಕುಂಬಾರ ಸಮಾಜದ ಅಧ್ಯಕ್ಷ ನಾಗಪ್ಪ ಕುಂಬಾರ ಮಾತನಾಡಿ, ʼಕುಂಬಾರ ಸಮುದಾಯದ ಜನರು ಹೆಚ್ಚಿನ ಶಿಕ್ಷಣ ಪಡೆಯುವ ಮೂಲಕ ಅಭಿವೃದ್ಧಿ ಹೊಂದಬೇಕು. ಮಕ್ಕಳಿಗೆ ಸರ್ಕಾರದ ಸೌಲಭ್ಯಗಳು ಪಡೆದು ಉನ್ನತ ಶಿಕ್ಷಣ ಕೊಡಿಸಬೇಕುʼ ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಚಿನ್ನಾಭರಣ ದರೋಡೆ

ಈ ಸಂದರ್ಭದಲ್ಲಿ ಗಣಪತಿ ಕುಂಬಾರ ಚಟ್ನಾಳ, ನರಸಿಂಗ ಹಂದಿಕೇರಾ, ಈರಪ್ಪ ಕುಂಬಾರ, ಬಸವರಾಜ ಕುಂಬಾರ, ಗುಂಡಪ್ಪ ಕುಂಬಾರ, ನರಸಿಂಗ ಕುಂಬಾರ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...