ಉಡುಪಿ | ಸುಹಾಸ್ ಶೆಟ್ಟಿ ಹತ್ಯೆ; ಆಟೋ ರಿಕ್ಷಾ ಚಾಲಕನ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ

Date:

ಉಡುಪಿಯ ಹಿರಿಯಡ್ಕ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಆಟೋರಿಕ್ಷಾ ಚಾಲಕನಿಗೆ ತಲ್ವಾರ್ ದಾಳಿ ಮಾಡಿದ ಆರೋಪಿಗಳಿಬ್ಬರನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಹಿರಿಯಡ್ಕದ ಬೊಮ್ಮರ ಬಿಟ್ಟು ನಿವಾಸಿ ಸಂದೇಶ್ (31) ಮತ್ತು ಹಿರಿಯಡ್ಕದ ಬಾಪೂಜಿ ದರ್ಕಾಸ್ ನಿವಾಸಿ ಸುಶಾಂತ್ (32) ಎಂಬವರನ್ನು ಬಂಧಿಸಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಅಲ್ಲಲ್ಲಿ ಹಲ್ಲೆ ಪ್ರಕರಣಗಳು ನಡೆಯುತ್ತಿದೆ.

ಬಡಗಬೆಟ್ಟು ನಿವಾಸಿ ಅಬುಬಕ್ಕರ್ (50) ಇವರ ಪರಿಚಯದ ದಿನೇಶ್ ಎಂಬುವರು ದೂರವಾಣಿ ಕರೆಮಾಡಿ ಮದಗದಿಂದ ಅತ್ರಾಡಿಗೆ ಬಾಡಿಗೆ ಬರಲು ತಿಳಿಸಿದ್ದರು. ಆತ್ರಾಡಿ ಗ್ಯಾಸ್ ಪೆಟ್ರೋಲ್ ಬಂಕ್ ಬಳಿ ಬರುತ್ತಿರುವ ಸಮಯ ಹಿಂದಿನಿಂದ ಒಂದು ಮೋಟಾರ್ ಸೈಕಲ್‌ನಲ್ಲಿ ಇಬ್ಬರು ವ್ಯಕ್ತಿಗಳು ಹಿಂಬಾಲಿಸಿಕೊಂಡು ಆಟೋ ರಿಕ್ಷಾವನ್ನು ಅಡ್ಡಗಟ್ಟಿ ನಿಲ್ಲಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ರೌಡಿಶೀಟರ್ ಹತ್ಯೆ ಹಿನ್ನೆಲೆ: ಸಂಘಪರಿವಾರದಿಂದ ಶುಕ್ರವಾರ ದ.ಕ. ಜಿಲ್ಲಾ ಬಂದ್‌ಗೆ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿಯ ಸೂಚನೆ ಅರಿತ ಚಾಲಕ ಗಾಡಿಯನ್ನು ನಿಲ್ಲಿಸದೇ ಮುಂದೆ ಬಂದಾಗ, ಹಿಂಬದಿ ಕುಳಿತ ವ್ಯಕ್ತಿಯ ಕೈಯಲ್ಲಿ ತಲವಾರು ರೀತಿಯ ಆಯುಧವಿದ್ದು, ಅವರಲ್ಲಿ ಒಬ್ಬ ವ್ಯಕ್ತಿ “ಆಯನ್ ಕಡುಪು ಬುಡೊಚ್ಚಿ” (ಅವನನ್ನು ಕೊಲೆ ಮಾಡು ಬಿಡಬೇಡ) ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಶೇಡಿಗುಡ್ಡೆ ಬಳಿ ರೋಸ್ ಬಸ್ಸಿನವರ ಮನೆ ಬಳಿ ಇರುವ ರಸ್ತೆಯಲ್ಲಿ ಆಟೋರಿಕ್ಷಾವನ್ನು ನಿಲ್ಲಿಸಿ ಓಡಲು ಪ್ರಶ್ನಿಸಿದಾಗ ಆಗ ಬೈಕ್‌ನಲ್ಲಿದ್ದ ಒಬ್ಬ ವ್ಯಕ್ತಿಯು ತನ್ನ ಕೈಯಲ್ಲಿದ್ದ ತಲವಾರಿನಿಂದ ಅಬುಬಕ್ಕರ್ ಅವರ ತಲೆಗೆ ಬೀಸಿದ್ದಾರೆ. ಅಬುಬಕ್ಕರ್ ಅವರು ತಲವಾರಿನ ಹೊಡೆತದಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನೊಬ್ಬ ವ್ಯಕ್ತಿಯು ಯಾವುದೋ ಬಾಟಲಿಯನ್ನು ಕೈಯಲ್ಲಿ ಹಿಡಿದು ಅಬುಬಕ್ಕರ್ ಅವರ ಆಟೋ ರಿಕ್ಷಾದ ಮುಂಭಾಗದ ಕನ್ನಡಿಗೆ ಹೊಡೆದಿದ್ದಾರೆ. ಆರೋಪಿಗಳು ಕೊಲ್ಲುವ ಉದ್ದೇಶದಿಂದ ಈ ರೀತಿ ಮಾಡುತ್ತಿರುವುದನ್ನು ತಿಳಿದ ಅಬುಬಕ್ಕರ್ ಅವರು ಅಲ್ಲೇ ಪಕ್ಕದಲ್ಲಿದ್ದ ಕಂಪೌಂಡ್‌ ಅನ್ನು ಜಿಗಿದು ಓಡಿ ಹೋಗಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 35/2025 ಕಲಂ, 126(2), 109, 324(3), 352, 351(2) ಜೊತೆ 3(5) BNSರಂತೆ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...