ಉಡುಪಿ | ಅಜ್ಜಿಯ ವಿಶ್ವಪ್ರಸಿದ್ಧಿಗೆ ಉಡುಪಿಯ ಜನರ ಸಹಕಾರ ಮಹತ್ವದ್ದು : ಅವಿನಾಶ್ ಕಾಮತ್

Date:

ಇತ್ತೀಚಿಗೆ ಇಹಲೋಕ ತ್ಯಜಿಸಿದ ವೃಕ್ಷ ಮಾತೆ ಪದ್ಮಶ್ರೀ ಸಾಲುಮರ ತಿಮ್ಮಕ್ಕ ಅವರಿಗೆ ನುಡಿ ನಮನ ಕಾರ್ಯಕ್ರಮ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು​ ಘಟಕ ಇದರ ವತಿಯಿಂದ ಉಡುಪಿ ಇನ್ ನಲ್ಲಿ ಇಂದು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಖ್ಯಾತ ಉರಗತಜ್ಞ ಗುರುರಾಜ್ ಸನಿಲ್ ದಿವಂಗತ ಸಾಲುಮರ ತಿಮ್ಮಕ್ಕರವರು ಯಾವುದೇ ರೀತಿಯ ಪ್ರತಿಫ​ಲಾಪೇಕ್ಷೆ ಇಲ್ಲದೆ ಪರಿಸರದ ಮೇಲಿನ ಅಪಾರ ಪ್ರೀತಿಯನ್ನು ಹೊಂದಿ ನೂರಾರು ಗಿಡಗಳನ್ನು ನೆಟ್ಟು ಘೋಷಣೆ ಮಾಡಿದ್ದರು​. ಅದನ್ನು ನೋಡಿ ವಿಶ್ವದಾದ್ಯಂತ ಪರಿಸರದ ಬಗ್ಗೆ ಅಭಿಯಾನಗಳು ನಡೆಯಲು ಸಾಧ್ಯವಾಯಿತು ಎಂದರು.

ನಿರೂಪಕ ಅವಿನಾಶ್ ಕಾಮತ್ ಮಾತನಾಡಿ ತಿಮ್ಮಕ್ಕ ಅಜ್ಜಿ ಮತ್ತು ಉಡುಪಿಗೆ ಅವಿನಾಭಾವ ಸಂಬಂಧವಿದೆ ಇಂದು ಅಜ್ಜಿ ವಿಶ್ವದಾದ್ಯಂತ ಪ್ರಸಿದ್ಧಿ ಪಡೆಯಲು ಉಡುಪಿಯ ಜನತೆಯ ಸಹಕಾರವು ಇತ್ತು ಎಂದು ನೆನಪು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಮಾತನಾಡಿ ಸಾಲುಮರ ತಿಮ್ಮಕ್ಕರವರ ಹೆಸರಿನಲ್ಲಿ ಪ್ರತಿವರ್ಷ ಖ್ಯಾತ ವ್ಯಕ್ತಿಗಳನ್ನು ಉಡುಪಿಗೆ ಕರೆಸಿ ಅವರಿಂದ ಉಡುಪಿಯ ಪ್ರಮುಖವಾದ ಸ್ಥಳಗಳಲ್ಲಿ ಅರಳಿ ಮರವನ್ನು ನೆಟ್ಟು ಅವರನ್ನು ಗೌರವಿಸುವ ಕಾರ್ಯ ಮಾಡಲಾಗುವುದು ಎಂದರು.

ಸುಹಾಸಂನ ಶ್ರೀನಿವಾಸ್​ ಉಪಾಧ್ಯ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಶಂಕರ್ ಮಾತನಾಡಿದರು​. ಈ ಸಂದರ್ಭದಲ್ಲಿ ಉಡುಪಿ ಇನ್ ನ ಮುಖ್ಯಸ್ಥ ನಾಗರಾಜ ಹೆಬ್ಬಾರ್, ಹಾಸ್ಯ ಭಾಷಣಕಾರ್ತಿ ಸಂಧ್ಯಾ ಶೆಣೈ, ​ಜಿಲ್ಲಾ ಕಸಾಪ ​ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾದ೯ನ್,​ ಪದಾಧಿಕಾರಿಗಳಾದ ದೀಪಾ ಚಂದ್ರಕಾಂತ್, ರಂಜನಿ ವಸಂತ್, ಸಿದ್ದ ಬಸಯ್ಯ ಸ್ವಾಮಿ ಚಿಕ್ಕ ಮಠ, ಶಶಿಕಾಂತ ಶೆಟ್ಟಿ, ಲಕ್ಷ್ಮಿಕಾಂತ್, ರಾಜೇಶ್​, ರಾಮಾಂಜಿ​ ಮುಂತಾದ​ವರು ಉಪ​ಸ್ಥಿತರಿದ್ದರು​

ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಪ್ರಸ್ತಾವನೆಗೈದರು.​ ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಸ್ವಾಗತಿಸಿದರು. ಗೌ.ಕಾರ್ಯದರ್ಶಿ ಜನಾರ್ಧನ ಕೊಡವೂರು ನಿರೂಪಿಸಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.​ ಈ ಸಂದರ್ಭದಲ್ಲಿ ಸಾಲುಮರ ತಿಮ್ಮಕ್ಕ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...