ಬೀದರ್‌ | ವಿದ್ಯಾರ್ಥಿಗಳಿಗೆ ಅಪರಾಧ ತಡೆ ಕುರಿತು ಜಾಗೃತಿ ಅಭಿಯಾನ

Date:

ವಿದ್ಯಾರ್ಥಿಗಳು ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಜಾಗೃತಿವಹಿಸಬೇಕು. ಲೈಸೆನ್ಸ್ ರಹಿತ ವಾಹನ ಚಾಲನೆ ಮಾಡಿ ತಮ್ಮ ಅತ್ಯಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ, ಆದಷ್ಟು ನಿಮ್ಮ ಸುತ್ತ ಮುತ್ತಲಿನ ಜನತೆಗೆ ಅಪರಾಧ ಆಗದಂತೆ ಅರಿವು ಮೂಡಿಸಿ ಎಂದು ಮೆಹಕರ್‌ ಪೊಲೀಸ್‌ ಠಾಣೆ ಪಿಎಸ್‌ಐ ಶಿವಕುಮಾರ ಬಳತೆ ಹೇಳಿದರು.

ಭಾಲ್ಕಿ ತಾಲೂಕಿನ ಮೇಹಕರ್‌ ಪೊಲೀಸ್‌ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸಾಯಗಾಂವ ಗ್ರಾಮದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

“ವಿದ್ಯಾರ್ಥಿಗಳು ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ, ಮಾದಕ ದ್ರವ್ಯ ಸೇರಿದಂತೆ ಇತರೆ ಚಟುವಟಿಕೆಗಳ ಬಗ್ಗೆ ಎಚ್ಚರವಹಿಸಿದಾಗ ಮಾತ್ರ ಅಪರಾಧ ಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ. ಯಾರಾದರೂ ಅಪರಾಧ ಕೃತ್ಯಗಳಿಗೆ ಬಲವಂತವಾಗಿ ದೂಡಲು ಯತ್ನಿಸುತ್ತಿದ್ದರೆ ಪಾಲಕರಿಗೆ, ಶಿಕ್ಷಕರಿಗೆ ಇಲ್ಲವೇ ಪೊಲೀಸರಿಗೆ ಮಾಹಿತಿ ನೀಡಲು ಮುಂದಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಲೆಕ್ಕಾಧಿಕಾರಿ ವಿನೋದ್‌ ರಾಠೋಡ್ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಹರಿರಾಮ ಅವರಿಗೆ ನೋಟ್‌ ಬುಕ್‌, ಪೆನ್ನು ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಾಲಾ ಪಠ್ಯದಲ್ಲಿ ಚನ್ನಬಸವ ಪಟ್ಟದ್ದೇವರ ಜೀವನ ಚರಿತ್ರೆ ಸೇರಿಸಲು ಆಗ್ರಹ

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲೆ ಮುಖ್ಯಗುರು ಅಶೋಕ್ ಸ್ವಾಮಿ ಅಧ್ಯಕ್ಷತೆ ವಹಿಸಿದರು. ಮೇಹಕರ್‌ ಠಾಣೆ ಕ್ರೈಮ್‌ ಪಿಎಸ್‌ಐ ಮಾಣಿಕಪ್ಪ, ಎಎಸ್‌ಐ ಚಂದ್ರಶೇಖರ ಹಾಗೂ ಪ್ರೌಢಶಾಲೆ ಮುಖ್ಯಗುರು ಸೋಮನಾಥಪ್ಪ, ಎಸ್‌ಡಿಎಮ್‌ಸಿ ಅಧ್ಯಕ್ಷ ಗುಲಾಬ್ ಪಾಟೀಲ್‌ ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೊಲೀಸ್‌ ಸಿಬ್ಬಂದಿ ಉಪಸ್ಥಿತರಿದ್ದರು. ಶಿಕ್ಷಕ ಚಂದ್ರ ನಾಯಕ ಸ್ವಾಗತಿಸಿ, ನಿರೂಪಿಸಿದರು, ಸಹ ಶಿಕ್ಷಕ ರಮೇಶ ಕಾನೇಕರ್ ವಂದಿಸಿದರು.

ವರದಿ ಮಾಹಿತಿ : ಲೋಕೇಶ ಕಾಂಬಳೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...