ಬೀದರ್ ಕ್ಷೇತ್ರದಲ್ಲಿ ಬಿ.ಆರ್ ಪಾಟೀಲ್ ಸ್ಪರ್ಧಿಸಿದರೆ ಗೆಲುವಿಗೆ ಶ್ರಮಿಸುವೆ: ಸಚಿವ ಈಶ್ವರ ಖಂಡ್ರೆ

Date:

ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಬೀದರ್‌ನಿಂದ ಲೋಕಸಭೆ ಚುನಾವಣೆಗೆ ಸ್ಫರ್ಧಿಸುವುದಾದರೆ ಸ್ವಾಗತಿಸುತ್ತೇನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದ್ದಾರೆ.

“ಮಾ.7ರಂದು ಬಸವಕಲ್ಯಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿನಂದನಾ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಆಸನ ನೀಡಿರಲಿಲ್ಲ ಎಂದು ಬಿ.ಆರ್.ಪಾಟೀಲ್ ಅವರ ಅಸಮಾಧಾನದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಈಶ್ವರ ಖಂಡ್ರೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ತಾವೇ ಸ್ವತಃ ಬಿ.ಆರ್.ಪಾಟೀಲರಿಗೆ 2 ಬಾರಿ ದೂರವಾಣಿ ಕರೆ ಮಾಡಿ ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೆ, ಆದರೆ ಅವರು ಕಾರ್ಯಕ್ರಮಕ್ಕೆ ಬಂದಿದ್ದು ತಮ್ಮ ಗಮನಕ್ಕೇ ಬಂದಿಲ್ಲ ನಂತರ ಫೋನ್ ಮಾಡಿದರೂ ಕರೆ ಸ್ವೀಕರಿಸಲಿಲ್ಲ” ಎಂದು ತಿಳಿಸಿದ್ದಾರೆ.

“ವೇದಿಕೆಯ ಮೊದಲ ಸಾಲಿನಲ್ಲಿ ಬಿ.ಆರ್. ಪಾಟೀಲ್ ಅವರ ಹೆಸರಿನ ಚೀಟಿ ಅಂಟಿಸಿ ಪ್ರತ್ಯೇಕ ಆಸನ ಮೀಸಲಿಡಲಾಗಿತ್ತು. ನಾನೇ ಹಿಂದಿನ ರಾತ್ರಿ ಖುದ್ದು ಎಲ್ಲ ಆಹ್ವಾನಿತರ ಹೆಸರನ್ನು ಆಸನಗಳ ಮೇಲೆ ಅಂಟಿಸಿರುವುದನ್ನು ಖಾತ್ರಿಪಡಿಸಿಕೊಂಡಿದ್ದೆ, ಆದರೆ ಹಿರಿಯರಾದ ಬಿ.ಆರ್.ಪಾಟೀಲ್ ಅವರು ಕಾರ್ಯಕ್ರಮಕ್ಕೆ
ಬಂದಿದ್ದನ್ನು ತಾವು ಗಮನಿಸಿಲ್ಲ. ಅವರು ಬಂದಿರುವುದು ನನಗೆ ತಿಳಿದಿಲ್ಲ. ಅರಿಯದೇ ಆಗಿರುವ ಅಚಾತುರ್ಯಕ್ಕೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೀದರ್‌ನಲ್ಲಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಮತ್ತು 371(ಜೆ) ದಶಮಾನೋತ್ಸವ ಕಾರ್ಯಕ್ರಮವನ್ನು ಹಲವು ಸಂಘ ಸಂಸ್ಥೆಗಳು ಸೇರಿ ನಡೆಸಿದ್ದವು. ಅಲ್ಲಿ ಸಹ ಅವರಿಗೆ ಆಸನ ಇಡಲಾಗಿತ್ತೋ ಇಲ್ಲವೋ ಅದು ತಮಗೆ ತಿಳಿದಿಲ್ಲ. ಆ ಬಗ್ಗೆ ಈವರೆಗೆ ಬಿ.ಆರ್. ಪಾಟೀಲ್ ಅವರು ತಮ್ಮ ಗಮನಕ್ಕೂ ತಂದಿಲ್ಲ” ಎಂದು ಹೇಳಿದ್ದಾರೆ.

“ತಮ್ಮ ತಂದೆ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕೂಡ ಬಿ.ಆರ್. ಪಾಟೀಲ್ ಅವರ ಹೆಸರು ಹಾಕಿಸಿದ್ದೆ. ಕರೆ ಮಾಡಿ ಆಹ್ವಾನಿಸಿದ್ದೆ. ಅವರ ಹೆಸರಿನಲ್ಲಿ ಆಸನವನ್ನೂ ಮೀಸಲಿಡಲಾಗಿತ್ತು. ಆದರೆ ಅದೇಕೆ ಅವರು ನನ್ನ ವಿರುದ್ಧ ಅಸಮಾಧಾನ ಆಗಿದ್ದಾರೋ ತಿಳಿಯದಾಗಿದೆ” ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೊಸ ಓದು | ನಡುಬಗ್ಗಿಸದ ಎದೆಯ ದನಿ: ಶೂದ್ರ ಯುವಕರು ಓದಬೇಕಾದ ಪುಸ್ತಕ

“ಬಿ.ಆರ್. ಪಾಟೀಲ್ ಅವರು ನಮ್ಮ ಪಕ್ಷದ ಮತ್ತು ನಮ್ಮ ಸಮುದಾಯದ ಶಾಸಕರಾಗಿದ್ದು, ಅವರ ಬಗ್ಗೆ ನನಗೆ ಅಪಾರ ಪ್ರೀತಿ, ಗೌರವ ಇದೆ. ನಾನು ಉದ್ದೇಶಪೂರ್ವಕವಾಗಿ ಅವರಿಗೆ ಅವಮಾನ ಮಾಡುವ ಪ್ರಮೇಯವೇ ಬರುವುದಿಲ್ಲ. ತಿಳಿದೋ ತಿಳಿಯದೆಯೋ ಅಚಾತುರ್ಯವಾಗಿದ್ದು, ಅವರ ಮನಸ್ಸಿಗೆ ನೋವಾಗಿದೆ. ಇದಕ್ಕಾಗಿ ವಿಷಾದಿಸುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...