ಬೆ. ಗ್ರಾಮಾಂತರ | ಮಳೆ ಅಬ್ಬರಕ್ಕೆ ಕೊಚ್ಚಿ ಹೋದ ಕಾರುಗಳು; ಕಾರಿನಲ್ಲಿದ್ದವರು ಬಜಾವ್

Date:

ಕಳೆದೊಂದು ವಾರದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಧಾರಕಾರ ಮಳೆಸುರಿಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಅವಾಂತರ ಸೃಷ್ಟಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಎರಡು ಕಾರುಗಳು ಕಾಲುವೆಯಲ್ಲಿ ಕೊಚ್ಚಿಹೋಗಿವೆ.

ದೇವನಹಳ್ಳಿಯಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ನಾಗರ್ಜುನಾ ಕಾಲೇಜು ಬಳಿಯ ಕಾಲುವೆ ತುಂಬಿ ಹರಿಯುತ್ತಿದೆ. ಕಾಲುವೆ ದಂಡೆಯಲ್ಲಿ ತೆರಳುತ್ತಿದ್ದ ಎರಡು ಕಾರುಗಳು ಮಳೆ ನೀರಿನ ರಭಸಕ್ಕೆ ಕಾಲುವೆಗೆ ಉರುಳಿವೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಲೂಕಿನ ಹುರಳಗುರ್ಕಿ ಗ್ರಾಮದ 6 ಮಂದಿ ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಕ್ಷಣಾರ್ಧದಲ್ಲಿ ಕಾರಿನಿಂದ ಇಳಿದಿದ್ದು, ಪಾರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...