ಚಿಕ್ಕಬಳ್ಳಾಪುರ | ನವಜಾತ ಶಿಶು ಸಾವು: ಮರ್ಯಾದಾಗೇಡು ಹತ್ಯೆ ಆರೋಪ

Date:

40 ದಿನಗಳ ನವಜಾತ ಶಿಶುವಿನ‌ ಸಾವು‌ ಪ್ರಕರಣವು ಕೊಲೆಯ ತಿರುವು ಪಡೆದುಕೊಂಡಿದೆ. ತನ್ನ ಮೊಮ್ಮಗಳು ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ, ಅವರ ಮಗುವನ್ನು ಅಜ್ಜಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೊಂದು ಮರ್ಯಾದಾಗೇಡು ಹತ್ಯೆ ಎಂದು ಶಂಕಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಬಾಲಕಿಯೊಬ್ಬರು ಮತ್ತೊಂದು ಕೋಮಿನ‌ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದರು. ಅವರಿಗೆ ಗಂಡು ಮಗು ಜನಿಸಿತ್ತು. ಬಾಣಂತಿ ಮತ್ತು ಮಗುವಿಗೆ ತಾಯಿಯ ಮನೆಯಲ್ಲಿ ಆರೈಕೆ ಮಾಡಲಾಗುತ್ತಿತ್ತು. ಇತ್ತೀಚೆಗೆ, ಮಗು ಸಾವನ್ನಪ್ಪಿತ್ತು. ಮಗು ಮೃತಪಟ್ಟ ಸಮಯದಲ್ಲಿ ಮಗುವನ್ನು ಬಾಲಕಿಯ ಅಜ್ಜಿ ನೋಡಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ಬೇರೆ ಯಾರೂ ಮಗುವಿನ ಬಳಿ ಇರಲಿಲ್ಲ ಎಂದು‌ ಹೇಳಲಾಗಿದೆ.

ಮಗು ಸಾವನ್ನಪ್ಪಿದ ಸಮಯದಲ್ಲಿ‌ ಮಗು ತನ್ನ ಬಳಿ ಇತ್ತು ಎಂಬುದನ್ನು ಪೊಲೀಸರಿಗೆ ಮಾಹಿತಿ ನೀಡುವ ಅಗತ್ಯವಿಲ್ಲ ಎಂದು ಅಜ್ಜಿ ವಾದಿಸಿದ್ದರು. ಆಕೆಯ ವಾದ ಮತ್ತು ವರ್ತನೆಯನ್ನು ಗಮನಿಸಿದ ಬಾಲಕಿ, ತನ್ನ ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮಗುವಿನ ಮೃತದೇಹವನ್ನು‌ ಹೊರ ತೆಗೆದು, ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

ಇನ್ನು, ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...