ವೀರ ವನಿತೆ ಒನಕೆ ಓಬವ್ವಳ ಸಮಯ ಪ್ರಜ್ಞೆ ಮತ್ತು ಧೈರ್ಯ, ಸಾಹಸವು ನಾಡಿನ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಬಾದಾಮಿ ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ ಹೇಳಿದರು.
ಬಾದಾಮಿ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ತಾಲೂಕು ಆಡಳಿತದ ಆಶ್ರಯದಲ್ಲಿ ನಡೆದ ವೀರವನಿತೆ ಒನಕೆ ಓಬವ್ವ ಜಯಂತ್ಯುತ್ಸವ ಸಮಾರಂಭಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
“ಚಿತ್ರದುರ್ಗದ ಕೋಟೆಯಲ್ಲಿ ವೀರವನಿತೆ ಒನಕೆ ಓಬವ್ವ ಶತ್ರು ಸೈನಿಕರನ್ನು ಒನಕೆ ಮೂಲಕ ಸಂಹಾರ ಮಾಡಿದಳು. ಆಕೆಯ ಧೈರ್ಯವನ್ನು ಸ್ಫೂರ್ತಿಯಾಗಿ ಪ್ರತಿಯೊಬ್ಬ ಮಹಿಳೆಯೂ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಅನೇಕ ಮಹಿಳೆಯರು ಪುರುಷರಂತೆ ದಿಟ್ಟ ಸಾಹಸ ಮಾಡಿದ ಕಾರ್ಯಗಳು ನಿಜಕ್ಕೂ ಶ್ಲಾಘನೀಯ” ಎಂದು ಸತ್ಯ ಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಉಪನ್ಯಾಸ ನೀಡಿದರು.
ಇದನ್ನೂ ಓದಿ: ಬಾಗಲಕೋಟೆ | ಕಲಾ ಪ್ರತಿಭೋತ್ಸವಕ್ಕೆ ಅರ್ಜಿ ಆಹ್ವಾನ
ಅಂಬೇಡ್ಕರ್ ವೃತ್ತದಿಂದ ಪಿಕಾರ್ಡ್ ಬ್ಯಾಂಕ್ ವರೆಗೆ ಒನಕೆ ಒಬವ್ವಳ ಭಾವಚಿತ್ರದ ಮೆರವಣಿಗೆ ನಡೆಯಿತು.
ಈ ವೇಳೆ ನಗರ ಪ್ರಾಧಿಕಾರ ಅಧ್ಯಕ್ಷ ಶಿವುಕುಮಾರ ಹಿರೇಮಠ, ರುದ್ರೇಶ ಹುಣಸಿಗಿಡದ, ತಹಶೀಲ್ದಾರ್ ಕಾವ್ಯಶ್ರೀ ಎಚ್, ಪ್ರಕಾಶ ನಾಯ್ಕರ್, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.





