ಉಡುಪಿ | ಮಜೂರು ಬದ್ರಿಯಾ ಮಸೀದಿ ವಠಾರದಲ್ಲಿ 300 ಕ್ಕೂ ಹೆಚ್ಚು ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಣೆ

Date:

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮಲ್ಲಾರ್ ಮಾಜೂರು ಬದ್ರಿಯಾ ಜುಮ್ಹಾ ಮಸೀದಿ ವತಿಯಿಂದ ಮಸೀದಿಯ ವಠಾರದಲ್ಲಿ ಸುಮಾರು 300 ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ, ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಹಾಗೂ ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ 1972 ರಿಂದ ಪರಿಸರ ದಿನವನ್ನು ಆಚರಣೆ ಮಾಡಲಾಗುತ್ತಾ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಪರಿಸರವನ್ನು ಹದಗೆಡಿಸುತ್ತಿದೆ. ಪ್ಲಾಸ್ಟಿಕ್‌ಗಳು ನೀರಿನ ಮೂಲಗಳಲ್ಲಿ ಸೇರಿ ಅಲ್ಲಿನ ಜಲಚರಗಳು, ಸಸ್ಯ ಪ್ರಬೇಧ ಹಾಗೂ ಜೀವ ಸಂಕುಲಕ್ಕೆ ಹಾನಿ ಉಂಟು ಮಾಡುವುದರೊಂದಿಗೆ ಪರಿಸರದ ಅಸಮತೋಲನಕ್ಕೆ ಕಾರಣವಾಗುತ್ತಿವೆ ಎಂದು ಹೇಳಿದರು.

1005690084

ಕಾರ್ಯಕ್ರಮದಲ್ಲಿ ಜಿಲ್ಲೆಯ ಲಯನ್ಸ್ ಗವರ್ನರ್ ಶ್ರೀ ಹರಿಪ್ರಸಾದ್ ರೈ, ಜಮಾತಿನ ಆಡಳಿತ ಸಮಿತಿಯ ಅಧ್ಯಕ್ಷರಾದ ಡಾ.ಪಾರೂಕ್ ಚಂದ್ರನಗರ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಕಾಪು ಪೋಲೀಸ್ ಇಲಾಖೆಯ ASI ಜನಾರ್ದನ್, ಮಸೀದಿಯ ಖತೀಬರಾದ ಅಬ್ದುಲ್ ರಶೀದ್ ಸಕಾಫಿ ಮತ್ತು ಆಡಳಿತ ಸಮಿತಿಯ ಎಲ್ಲಾ ಸದಸ್ಯರು ಅಂಗ ಸಂಸ್ಥೆಯ ಎಲ್ಲಾ ಸದಸ್ಯರು, ಹಾಗೂ ಜಮಾತಿಗರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...