ಬಾಗಲಕೋಟೆ | ಮುರುಗೇಶ್ ನಿರಾಣಿಗೆ ಪರಿಹಾರ ನೀಡಲು ‘ಭಿಕ್ಷಾಟನೆ’; ರೈತ ಮುಖಂಡನ ಮೇಲೆ ಹಲ್ಲೆ

Date:

ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.

ರೈತ ಮುಖಂಡ ಯಲ್ಲಪ್ಪ ಹೆಗಡೆ ಹಲ್ಲೆಗೆ ತುತ್ತಾಗಿರುವ ರೈತ. ಅವರು ತಾಲೂಕಿನ ಇಂಗಳಗಿ ಕ್ರಾಸ್‌ ಬಳಿ ತೆರಳುತ್ತಿದ್ದಾಗ ಐವರು ಮುಸುಕುಧಾರಿಗಳು ಏಕಾಏಕಿ ಅವರ ಮೇಲೆ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅವರ ತಲೆಗೆ ಗಂಭೀರ ಗಾಯವಾಗಿದೆ ಎಂದು ಹೇಳಲಾಗಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ, ಯಲ್ಲಪ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದಾರೆ ಎಂದು ಮುರುಗೇಶ್ ನಿರಾಣಿ ಆರೋಪಿಸಿದ್ದರು. ಅಲ್ಲದೆ, ಯಲ್ಲಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಮಾನನಷ್ಟಕ್ಕೆ ಪರಿಹಾನವಾಗಿ ಐದು ಕೋಟಿ ರೂ. ನೀಡಬೇಕೆಂದು ಲೀಗಲ್ ನೋಟೀಸ್ ಕಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರಾಣಿ ಅವರಿಗೆ ಭಿಕ್ಷಾಟನೆ ಅಭಿಯಾನ ಮಾಡಿ ಪರಿಹಾರ ಮೊತ್ತ ನೀಡುತ್ತೇನೆ ಎಂದಿದ್ದ ಯಲ್ಲಪ್ಪ, ಬಾಗಲಕೋಟೆ ಜಿಲ್ಲೆಯಲ್ಲಿ ಭಿಕ್ಷಾಟನೆ ನಡೆಸುತ್ತಿದ್ದರು. ಸೋಮವಾರ ಬೀಳಗಿಯಲ್ಲಿ ಭಿಕ್ಷಾಟನೆ ಅಭಿಯಾನ ನಡೆಸಲು ನಿರ್ಧರಿಸಿದ್ದರು. ಹೀಗಾಗಿ, ಅವರು ಬೀಳಗಿಗೆ ತೆರಳುವಾಗ ಇಂಗಳಗಿ ಕ್ರಾಸ್ ಬಳಿ ಅವರ ಮೇಲೆ ಐವರ ಗುಂಪು ಹಲ್ಲೆ ಮಾಡಿದೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮುಧೋಳದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...