ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳ ಮತ್ತು ಯುವಜನರ ಕಲಾ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಲಾವಿದರು ಹಾಗೂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಾಲ ಪ್ರತಿಭೆ ಸ್ಪರ್ಧೆಗಳಲ್ಲಿ ಭಾಗವಹಿಸಲು 8 ರಿಂದ 14 ಹಾಗೂ ಕಿಶೋರ ಪ್ರತಿಭಾ ಸ್ಪರ್ಧೆಗಳಲ್ಲಿ ಭಾಗವಹಿಸಲು 14 ರಿಂದ 18 ವರ್ಷದೊಳಗಿರಬೇಕು. ಏಕ ವ್ಯಕ್ತಿ ಸ್ಪರ್ಧೆಗಳಲ್ಲಿ ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜಾನಪದ ಗೀತೆ, ಹಿಂದೂಸ್ತಾನಿ, ಕರ್ನಾಟಕ ವಾದ್ಯ ಸಂಗೀತ ಹಾಗೂ ಹಿಂದುಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ವಯಸ್ಸಿನ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಶಾಲೆಯಿಂದ ಬಂದ ಅಭ್ಯರ್ಥಿ ಇಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯಿತಿ, ನಗರಸಭೆ, ಪುರಸಭೆ, ಪಾಲಿಗೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು. ಯುವ ಪ್ರತಿಭೆಗಳು 18 ರಿಂದ 30 ವರ್ಷದೊಳಗಿರಬೇಕು. ಏಕವ್ಯಕ್ತಿ ಸ್ಪರ್ಧೆಗಳಲ್ಲಿ ಯುವ ಪ್ರತಿಭೆ ವಿಭಾಗದಲ್ಲಿ ನನ್ನ ಮೆಚ್ಚಿನ ಸಾಹಿತಿ (ಆಶುಭಾಷಣ), ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಹಿಂದುಸ್ತಾನಿ ಕರ್ನಾಟಕ ಶಾಸ್ತ್ರೀಯ ಸಂಗೀತ, ಚಿತ್ರಕಲೆ ಹಾಗೂ ಹಿಂದುಸ್ತಾನಿ, ಕರ್ನಾಟಕ ವಾದ್ಯ ಸಂಗೀತ ಹಾಗೂ ಕರ್ನಾಟಕ ಸ್ಪರ್ಧೆಗಳು ನಡೆಯಲಿವೆ.
ಇದನ್ನೂ ಓದಿ: ಬಾಗಲಕೋಟೆ | ಮನೆಯ ಮುಂದಿಟ್ಟಿದ್ದ ದೀಪದಿಂದ ಸಿಲಿಂಡರ್ ಸ್ಫೋಟ; ಎಂಟು ಮಂದಿಗೆ ಗಾಯ
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದವರಿಗೆ ರೂ.15,000, ದ್ವಿತೀಯ ರೂ.10,000 ಹಾಗೂ ತೃತೀಯ ರೂ.7,500 ನಗದು ಬಹುಮಾನ, ಪ್ರಮಾಣ ಪತ್ರ ನೀಡಲಾಗುತ್ತದೆ. ಸಮೂಹ ಪ್ರಕಾರಗಳಲ್ಲಿ ಭಾಗವಹಿಸುವ ತಂಡದ ಸದಸ್ಯರ ಸಂಖ್ಯೆ ಕನಿಷ್ಠ 10 ಗರಿಷ್ಠ 15 ಇದ್ದು, ವಲಯ ಹಾಗೂ ರಾಜ್ಯಮಟ್ಟದಲ್ಲಿ ಸ್ಪರ್ಧೆಗಳೊಂದಿಗೆ ಆಗಮಿಸುವ ನಾಟಕ ನಿರ್ದೇಶಕ, ಪಕ್ಕವಾದ, ಸಹಕಲಾವಿದರಿಗೆ ಪ್ರಯಾಣ, ಊಟ ವಸತಿ ವ್ಯವಸ್ಥೆ ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ಸ್ವ ವಿವರಗಳೊಂದಿಗೆ ಅರ್ಜಿಯಲ್ಲಿ ಕಲಾ ಪ್ರಕಾರದ ವಿವರ ಸ್ಪಷ್ಟವಾಗಿ ನಮೂದಿಸಿ ಸಹಾಯಕ ನಿರ್ದೇಶಕರ ಕಚೇರಿ ಕನ್ನಡ ಮತ್ತು ಸಂಸ್ಕೃತ ಇಲಾಖೆ, ಕಲಾಭವನ ಸಂಸ್ಕೃತಿಕ ಸಮಚಯ ಸೆಕ್ಟರ್ ನಂ.19,6ನೇ ರಸ್ತೆ ನವನಗರ ಬಾಗಲಕೋಟೆ ಜಿಲ್ಲೆಗೆ ಖುದ್ದಾಗಿ ನವೆಂಬರ್ 14ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಕೋರಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಾಗಲಕೋಟೆ ಜಿಲ್ಲೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದೆ.





